ಒಣಹುಲ್ಲು ಸಾಗಿಸುತ್ತಿದ್ದ ಬೊಲೆರೋಗೆ ವಿದ್ಯುತ್ ತಂತಿ ತಗುಲಿ ಬೆಂಕಿ: ನಡುರಸ್ತೆಯಲ್ಲಿ ಧಗಧಗ
ಯಾದಗಿರಿ ಜಿಲ್ಲೆಯ ವಡಗೇರಾ ಬಳಿ, ಒಣ ಹುಲ್ಲು ಸಾಗಿಸುತ್ತಿದ್ದ ಬೊಲೆರೋ ವಾಹನಕ್ಕೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡಿದೆ. ಚಾಲಕ ಸೇರಿದಂತೆ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದು, ವಾಹನ ಸಂಪೂರ್ಣ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿ ಹಾನಿಯಾಗಿದೆ.

ಯಾದಗಿರಿ: ಚಲಿಸುತ್ತಿದ್ದ ಬೊಲೆರೋ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿ ಬೊಲೆರೋ ವಾಹನ ನಡುರಸ್ತೆಯಲ್ಲಿ ಧಗಧಗನೇ ಹತ್ತಿ ಉರಿದಂತಹ ಭಯಾನಕ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕೊಂಗಂಡಿ ಬಳಿ ನಡೆದಿದೆ.
ನಡುರಸ್ತೆಯಲ್ಲಿ ಬೆಂಕಿಗಾಹುತಿಯಾದ ಲಾರಿ ಭತ್ತದ ಹುಲ್ಲು ತುಂಬಿಕೊಂಡು ತುಂಬಿಕೊಂಡು ಹೋಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಕೂಡಲೇ ಬೊಲೆರೋ ವಾಹನದಲ್ಲಿದ್ದ ಚಾಲಕ ಸೇರಿ ಮೂವರು ವಾಹನದಿಂದ ಹೊರಗೆ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ.
ಬೆಂಕಿಯ ಕೆನ್ನಾಲಿಗೆಗ ಬೊಲೆರೋ ವಾಹನ ಸುಟ್ಟು ಕರಲಾಗಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ಹಾನಿಯಾಗಿಲ್ಲ. ಈ ಬೊಲೆರೋ ವಾಹನ ಸೂಗೂರಿನಿಂದ ದೇವದುರ್ಗದ ಕಡೆಗೆ ಒಣ ಹುಲ್ಲು ತುಂಬಿಕೊಂಡು ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ.
ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಈ ಘಟನೆ ನಡೆದಿದೆ. ಬೋರ್‌ವೆಲ್‌ಗೆ ಅಳವಡಿಸಿದ ವಿದ್ಯುತ್ ತಂತಿ ತಗುಲಿ ಈ ಅವಘಡ ಸಂಭವಿಸಿದ್ದು, ಬೊಲೆರೋ ವಾಹನ ಸಂಪೂರ್ಣ ಬೆಂಕಿಗಾಹುತಿಯಾಗಿರುವುದರಿಂದ ಲಕ್ಷಾಂತರ ರೂಪಾಯಿ ಹಾನಿಯಾಗಿದೆ.
ಇದನ್ನೂ ಓದಿ:
ತನಗೆ ಆರೈಕೆ ಮಾಡುತ್ತಿರುವ 43 ವರ್ಷದ ವ್ಯಕ್ತಿಯ ದತ್ತು ಪಡೆಯಲು ಹೈಕೋರ್ಟ್ ಮೊರೆ ಹೋದ 90 ವರ್ಷದ ವೈದ್ಯರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

