ಕೊರೋನಾ ನಿರ್ವಹಣೆಯಲ್ಲಿ ನಂ.2 ಸಿಎಂ ಯಡಿಯೂರಪ್ಪರಿಂದ ಮತ್ತೊಂದು ದಿಟ್ಟ ಕ್ರಮ
ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಮುಂದುವರಿಸುತ್ತಿರುವ ಕೊರೋನಾ ವೈರಸ್ ನಿಯಂತ್ರಣಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದ್ದು, ಸೋಂಕು ಹರಡದಂತೆ ನಾನಾ ಮುಂಜಾಗ್ರತಾ ಕ್ರಮಗಳನ್ನು ಜಾರಿಗೊಳಿಸಿದೆ. ಈ ಮೂಲಕ ಕೊರೋನಾ ವೈರಸ್ ದೇಶದಲ್ಲಿ ತೀವ್ರಗೊಂಡಿರುವ ಈ ಪರಿಸ್ಥಿತಿಯನ್ನು ಉತ್ತಮವಾಗಿ ನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳಲ್ಲಿ ಕರ್ನಾಟಕದ ಬಿ.ಎಸ್. ಯಡಿಯೂರಪ್ಪ ದೇಶದಲ್ಲೇ 2ನೇ ಸ್ಥಾನ ಗಳಿಸಿದ್ದಾರೆ. ಇದೀಗ ರಾಜ್ಯ ಸರ್ಕಾರ ಈ ಮಾಹಾಮಾರಿ ಕೊರೋನಾವನ್ನು ಕಟ್ಟಿಹಾಕಲು ಮತ್ತೊಂದು ದಿಟ್ಟ ಕ್ರಮ.

ಕೊರೋನಾ ಹೆಚ್ಚಾಗುತ್ತಿರುವುದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೋವಿಡ್ - 19 ಸಂಚಾರಿ ಫೀವರ್ ಕ್ಲಿನಿಕ್‍ಗೆ ಚಾಲನೆ ನೀಡಿದರು.

ಕೊರೋನಾ ಹೆಚ್ಚಾಗುತ್ತಿರುವುದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೋವಿಡ್ - 19 ಸಂಚಾರಿ ಫೀವರ್ ಕ್ಲಿನಿಕ್‍ಗೆ ಚಾಲನೆ ನೀಡಿದರು.

ಸಂಚಾರಿ ಫೀವರ್ ಕ್ಲಿನಿಕ್‍ಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಮೊಬೈಲ್ ಫೀವರ್ ಕ್ಲಿನಿಕ್ ಅನ್ನು ನಾಲ್ಕು ವಿಭಾಗಗಳಲ್ಲಿ ತೆರೆಯಲಾಗಿದೆ ಎಂದರು

ಸಂಚಾರಿ ಫೀವರ್ ಕ್ಲಿನಿಕ್‍ಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಮೊಬೈಲ್ ಫೀವರ್ ಕ್ಲಿನಿಕ್ ಅನ್ನು ನಾಲ್ಕು ವಿಭಾಗಗಳಲ್ಲಿ ತೆರೆಯಲಾಗಿದೆ ಎಂದರು

ಬೆಂಗಳೂರಿನಲ್ಲಿ ನಾಲ್ಕು ಬಸ್ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ನಾಲ್ಕು ಬಸ್ ವ್ಯವಸ್ಥೆ ಮಾಡಲಾಗಿದೆ.

ರೋಗ ಲಕ್ಷಣಗಳು ಇರುವವರು ಬಂದು ಈ ಬಸ್ ನಲ್ಲಿ ತಪಾಸಣೆ ನಡೆಸಿಕೊಳ್ಳಬಹುದು.

ರೋಗ ಲಕ್ಷಣಗಳು ಇರುವವರು ಬಂದು ಈ ಬಸ್ ನಲ್ಲಿ ತಪಾಸಣೆ ನಡೆಸಿಕೊಳ್ಳಬಹುದು.

ಬೆಂಗಳೂರು ನಗರದ್ಯಾಂತ ಈ ಬಸ್ ಗಳು ಸಂಚಾರ ನಡೆಸಲಿವೆ ಎಂದು ಹೇಳಿದರು.

ಬೆಂಗಳೂರು ನಗರದ್ಯಾಂತ ಈ ಬಸ್ ಗಳು ಸಂಚಾರ ನಡೆಸಲಿವೆ ಎಂದು ಹೇಳಿದರು.

ಈಗಾಗಲೇ ಮೈಸೂರು, ಮಂಡ್ಯ, ಹುಬ್ಬಳ್ಳಿ, ಮಂಗಳೂರಿನಲ್ಲಿ ಮೊಬೈಲ್ ಫೀವರ್ ಕ್ಲಿನಿಕ್ ಕಾರ್ಯನಿರ್ವಹಿಸುತ್ತಿದೆ. ಕೆಎಸ್‌ಆರ್‌ಟಿಸಿ ಹಳೆಯ ಬಸ್‌ಗಳನ್ನು ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತಿಸಲಾಗಿದೆ. ಅನಾರೋಗ್ಯ ಕಂಡುಬಂದರೆ ಮೊಬೈಲ್ ಫೀವರ್ ಕ್ಲಿನಿಕ್ ಅನ್ನು ಸಂಪರ್ಕಿಸಬಹುದು ಎಂದು ಹೇಳಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ