MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Life
  • Travel
  • ಸಾಲು ಸಾಲು ರಜೆ ಹಿನ್ನೆಲೆ ಕೊಡಗಿಗೆ ಹರಿದು ಬಂದ ಪ್ರವಾಸಿಗರು: ಪ್ರವಾಸಿ ತಾಣ, ಧಾರ್ಮಿಕ ಕ್ಷೇತ್ರಗಳಲ್ಲಿ ಜನವೋ ಜನ!

ಸಾಲು ಸಾಲು ರಜೆ ಹಿನ್ನೆಲೆ ಕೊಡಗಿಗೆ ಹರಿದು ಬಂದ ಪ್ರವಾಸಿಗರು: ಪ್ರವಾಸಿ ತಾಣ, ಧಾರ್ಮಿಕ ಕ್ಷೇತ್ರಗಳಲ್ಲಿ ಜನವೋ ಜನ!

ದೀಪಾವಳಿ, ಕನ್ನಡ ರಾಜ್ಯೋತ್ಸವ ವೀಕೆಂಡ್ ಹೀಗೆ ನಾಲ್ಕು ನಾಲ್ಕು ದಿನಗಳು ನಿರಂತರವಾಗಿ ಸಾಲು ರಜೆಗಳು ಬಂದ ಹಿನ್ನೆಲೆಯಲ್ಲಿ ಪ್ರವಾಸಿಗರ ಅಚ್ಚುಮೆಚ್ಚಿನ ಕೊಡಗು ಜಿಲ್ಲೆಗೆ ಪ್ರವಾಸಿಗರ ದಂಡೇ ಹರಿದು ಬಂದಿದೆ. 

2 Min read
Girish Goudar
Published : Nov 03 2024, 04:22 PM IST| Updated : Nov 03 2024, 04:24 PM IST
Share this Photo Gallery
  • FB
  • TW
  • Linkdin
  • Whatsapp
14

ವರದಿ: ರವಿ.ಎಸ್. ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು

ಕೊಡಗು(ನ.03):  ಗುರುವಾರ ನರಕ ಚತುರ್ದಶಿ ಶುಕ್ರವಾರ ಕನ್ನಡ ರಾಜ್ಯೋತ್ಸವ ಹಾಗೂ ಶನಿವಾರ ಬಲಪಾಡ್ಯಮಿ ಮಾರನೇ ದಿನ ಇಂದು(ಭಾನುವಾರ) ರಜೆ ಇದ್ದಿದ್ದರಿಂದ ನಿರಂತರವಾಗಿ ನಾಲ್ಕು ದಿನಗಳು ರಜೆ ಇದ್ದಿದ್ದರಿಂದ ಕೊಡಗು ಲಕ್ಷಗಟ್ಟಲೆ ಪ್ರವಾಸಿಗರು ಬಂದಿದ್ದಾರೆ. ಪ್ರವಾಸಿ ತಾಣಗಳು, ಧಾರ್ಮಿಕ ಕ್ಷೇತ್ರಗಳು ಕೂಡ ಪ್ರವಾಸಿಗರು, ಭಕ್ತರಿಂದ ತುಂಬಿ ತುಳುಕುತ್ತಿವೆ. 

24

ಪ್ರವಾಸಿಗರ ಹಾಟ್ ಸ್ಪಾಟ್ ಆಗಿರುವ ಮಂಜಿನನಗರಿಯ ರಾಜಾಸೀಟಿಗೆ ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ. ರಾಜಾಸೀಟು, ಗ್ರೇಟರ್ ರಾಜಾಸೀಟು ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ಹೆಜ್ಜೆ ಇಡಲು ಸಾಧ್ಯವೇ ಇಲ್ಲ ಎನ್ನುವಷ್ಟು ಪ್ರವಾಸಿಗರು ಬಂದಿದ್ದಾರೆ. ರಾಜಸೀಟಿನಲ್ಲಿ ಅಲ್ಲಿಂದ ಬಹಳ ದೂರದವರೆಗೆ ಕಾಣುವ ಪ್ರಕೃತಿಯ ಸೌಂದರ್ಯವನ್ನು ತುಂಬಿಕೊಂಡು ಎಂಜಾಯ್ ಮಾಡುತ್ತಿದ್ದಾರೆ. ರಾಜಾಸೀಟಿನ ವೀವ್ಹ್ ಪಾಯಿಂಟಿನಲ್ಲಿಯೂ ಕುಳಿತು ಪ್ರಕೃತಿಯನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲ, ಅಬ್ಬಿಫಾಲ್ಸ್, ದುಬಾರೆ, ನಿಸರ್ಗಧಾಮ ಸೇರಿದಂತೆ ಎಲ್ಲಾ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದಂಡೇ ಇದೆ. ಜೊತೆಗೆ ಕಳೆದ ಹದಿನೈದು ದಿನಗಳ ಇಂದೆಯಷ್ಟೇ ಕೊಡಗಿನ ಕುಲದೇವಿ ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿದ್ದು, ಒಂದು ತಿಂಗಳ ಅವಧಿಯಲ್ಲಿ ಇಲ್ಲಿ ಪುಣ್ಯ ಸ್ನಾನ ಮಾಡಿ, ತೀರ್ಥ ಸಂಗ್ರಹಿಸುವುದರಿಂದ ಎಲ್ಲವೂ ಒಳ್ಳಿತಾಗಲಿದೆ ಎಂಬ ನಂಬಿಕೆ ಹಿನ್ನೆಲೆಯಲ್ಲಿ ತಲಕಾವೇರಿ ಹಾಗೂ ಭಾಗಮಂಡಲ ಪುಣ್ಯ ಕ್ಷೇತ್ರಗಳಿಗೂ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ. ಹೀಗಾಗಿಯೇ ತಲಕಾವೇರಿ ಕ್ಷೇತ್ರದಲ್ಲೂ ಎತ್ತ ನೋಡಿದರೂ ಜನವೋ ಜನ. ಬಸ್ಸು, ಟಿಟಿ. ಸೇರಿದಂತೆ ಸಾವಿರಾರು ಬಸ್ಸುಗಳಲ್ಲಿ ಲಕ್ಷಾಂತರ ಜನರು ಜಿಲ್ಲೆಗೆ ಆಗಮಿಸುತ್ತಿದ್ದಾರೆ. 

34

ರಾಜಾಸೀಟು, ಅಬ್ಬಿಫಾಲ್ಸ್, ತಲಕಾವೇರಿ ಸೇರಿದಂತೆ ಎಲ್ಲಾ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ವಾಹನಗಳ ದಟ್ಟಣೆಯೂ ತೀವ್ರವಾಗಿದೆ. ಹೀಗಾಗಿ ಸುಗಮ ಸಂಚಾರ ಸಾಧ್ಯವಿಲ್ಲದೆ ಪರದಾಡುವಂತಹ ಸ್ಥಿತಿಯೂ ನಿರ್ಮಾಣವಾಗಿದೆ. ವಾಹನಗಳ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವುದೇ ಪೊಲೀಸರಿಗೆ ಹರಸಾಹಸದ ಕೆಲಸವಾಗಿದೆ. 

44

ತೀರ್ಥದೋದ್ಭವವಾಗಿ ಒಂದು ತಿಂಗಳವರೆಗೆ ಕಿರುಸಂಕ್ರಮಣವಿರುತ್ತದೆ. ಈ ತುಲಾ ಮಾಸದಲ್ಲಿ ಬಂದು ಕಾವೇರಿ ಕೊಳದಲ್ಲಿ ಸ್ನಾನ ಮಾಡಿ ಕಾವೇರಿಯನ್ನು ಪೂಜಿಸಿದರೆ ಒಳ್ಳೆಯದಾಗುತ್ತದೆ ನಂಬಿಕೆ ಇದೆ. ಹೀಗಾಗಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ತಲಕಾವೇರಿಗೆ ಬರುತ್ತಿದ್ದಾರೆ. ಜಿಲ್ಲೆಯಲ್ಲಿರುವ ಭಕ್ತರ ಜೊತೆಗೆ ಹೊರ ಜಿಲ್ಲೆ, ಹೊರ ರಾಜ್ಯಗಳಿಂದಲೂ ಅಪಾರ ಸಂಖ್ಯೆಯಲ್ಲಿ ತಲಕಾವೇರಿಗೆ ಬರುತ್ತಿದ್ದಾರೆ. ಜೊತೆಗೆ ನಿರಂತರ ರಜೆ ಇರುವುದರಿಂದ ಆ ಸಂಖ್ಯೆ ಮತ್ತಷ್ಟು ತೀವ್ರವಾಗಿದೆ ಎನ್ನುತ್ತಿದ್ದಾರೆ. ಪ್ರವಾಸಿಗರ ಹೆಚ್ಚಳದಿಂದ ಧಾರ್ಮಿಕ ಕ್ಷೇತ್ರಗಳಲ್ಲಿ ನಾವು ನೆಮ್ಮದಿಯಿಂದ ಪೂಜೆ ಪುನಸ್ಕಾರ ಮಾಡಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯ ಕೆಲವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. 

About the Author

GG
Girish Goudar
ಏಷ್ಯಾನೆಟ್‌ ಸುವರ್ಣ ನ್ಯೂಸ್‌.ಕಾಮ್‌ನಲ್ಲಿ ಹಿರಿಯ ಉಪ ಸಂಪಾದಕ. ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದೇನೆ. ನನ್ನ ಊರು ಬಾಗಲಕೋಟೆ ಜಿಲ್ಲೆಯ ಹುನಗುಂದ . ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂಎಸ್‌ಸಿ ಎಲೆಕ್ಟ್ರಾನಿಕ್‌ ಮೀಡಿಯಾ ಪದವಿ ಪಡೆದಿದ್ದೇನೆ. ಈಟಿವಿ ಭಾರತ್‌, ವೇ ಟು ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಕ್ರೀಡೆ, ಚಲನಚಿತ್ರ, ರಾಜಕೀಯ ಸುದ್ದಿಗಳ ಬಗ್ಗೆ ಅತೀವ ಆಸಕ್ತಿ ಇದೆ. ಸಂಗೀತ ಕೇಳುವುದು, ಕ್ರಿಕೆಟ್‌ ಆಡುವುದು ನೆಚ್ಚಿನ ಹವ್ಯಾಸಗಳಾಗಿವೆ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved