ಕಾರ್ ಅಪಘಾತದಲ್ಲಿ ಕಿರುತೆರೆ ನಟನ ಮಗ ಸಾವು, ಇಬ್ಬರಿಗೆ ಗಂಭೀರ ಗಾಯ
ದೀಪಾವಳಿ ಮುಗಿಸಿ ವಾಪಸ್ ಬರ್ತಿದ್ದಾಗ ಕಿರುತೆರೆ ನಟ ಕಾರ್ತಿಕ್ ಮಗ ಲಿತಿಶ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಇನ್ನಿಬ್ಬರು ಗಾಯಗೊಂಡಿದ್ದಾರೆ.

ಚೆನ್ನೈನ ಖ್ಯಾತ ಟಿವಿ ನಟ ಕಾರ್ತಿಕ್ ಅವರ ಮಗ ಲಿತಿಶ್. ಲಿತಿಶ್ ದೀಪಾವಳಿ ಆಚರಣೆ ಮುಗಿಸಿ ಸ್ನೇಹಿತರಾದ ಜಯಕೃಷ್ಣನ್ ಮತ್ತು ವೆಂಕಟ್ ಜೊತೆ ಕಾರಿನಲ್ಲಿ ಹಳೆ ಮಹಾಬಲಿಪುರಂ ರಸ್ತೆಯಲ್ಲಿರುವ ಆಟದ ಮೈದಾನಕ್ಕೆ ಹೋಗಿ ವಾಪಸ್ ಬರುತ್ತಿದ್ದರು.
ವೇಳಚೇರಿ - ತರಮಣಿ 100 ಅಡಿ ರಸ್ತೆಯ ವಿಜಯನಗರ ಬಸ್ ನಿಲ್ದಾಣದ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ಈ ಅಪಘಾತದಲ್ಲಿ ಕಾರನ್ನು ಚಾಲನೆ ಮಾಡುತ್ತಿದ್ದ ಲಿತಿಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಜಯಕೃಷ್ಣನ್ ಮತ್ತು ವೆಂಕಟ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಲಿತಿಶ್ ಮೃತದೇಹವನ್ನು ರಾಯಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.