MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • Saregamapa Contestant: ರಿಯಾಲಿಟಿ ಶೋ ಗೆಲ್ಲದಿದ್ರೆ ಏನಾಯ್ತು? ಸಿನಿಮಾದಲ್ಲಿ ಹಾಡುವ ಅವಕಾಶ ಗಿಟ್ಟಿಸಿಕೊಂಡ ಲಹರಿ

Saregamapa Contestant: ರಿಯಾಲಿಟಿ ಶೋ ಗೆಲ್ಲದಿದ್ರೆ ಏನಾಯ್ತು? ಸಿನಿಮಾದಲ್ಲಿ ಹಾಡುವ ಅವಕಾಶ ಗಿಟ್ಟಿಸಿಕೊಂಡ ಲಹರಿ

ಸರಿಗಮಪ ರಿಯಾಲಿಟಿ ಶೋನ ಸ್ಪರ್ಧಿ ಲಹರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ದೊರೆತಿದೆ. ಸೆಮಿಫೈನಲ್‌ನಲ್ಲಿ ಹೊರಬಿದ್ದಿದ್ದ ಲಹರಿಗೆ ಈ ಅವಕಾಶ ಸಿಕ್ಕಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ.

1 Min read
Author : Mahmad Rafik
| Updated : Jul 10 2025, 04:45 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Lahari

ಈ ಬಾರಿಯ ಸರಿಗಮಪ ರಿಯಾಲಿಟಿ ಶೋನ ಸ್ಪರ್ಧಿ ಲಹರಿ ಹೆಸರು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗಿತ್ತು. ಸೆಮಿಫೈನಲ್‌ನಲ್ಲಿಯೇ ಲಹರಿ ಹೊರಬಂದಿದ್ದರು. ಇದು ಪ್ರೇಕ್ಷಕರ ಅಸಮಾಧಾನಕ್ಕೆ ಕಾರಣವಾಗಿತ್ತು. ಫೈನಲ್ ಪ್ರವೇಶಿಸಿದ್ದ ಇನ್ನೋರ್ವ ಸ್ಪರ್ಧಿ ಅರ್ಹರಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು.

26
Image Credit : Lahari

ಸ್ಪರ್ಧಿ ಲಹರಿ ಅದ್ಬುತ ಗಾಯಕಿ ಅನ್ನೋದರಲ್ಲಿ ಎರಡು ಮಾತಿಲ್ಲ. ಸಂಗೀತ ನಿರ್ದೇಶಕ ಹರಿಕೃಷ್ಣ ಅವರೇ ಲಹರಿ ಹಾಡು ಕೇಳಿ ಆಶ್ಚರ್ಯಚಕಿತರಾಗಿದ್ದರು. ಆಡಿಷನ್‌ನಿಂದಲೇ ತನ್ನ ಸುಮುಧರ ಕಂಠದಿಂದ ಲಹರಿ ಅನೇಕ ಅಭಿಮಾನಿಗಳನ್ನು ಸಂಪಾದಿಸಿದ್ದರು. ಲಹರಿ ಹಾಡು ಕೇಳಲು ಜನರು ಕಾಯುತ್ತಿದ್ದರು.

Related Articles

Related image1
ಸರಿಗಮಪ ಫೈನಲಿಸ್ಟ್ ಇವರೇ… ಲಹರಿಗೆ ಸ್ಥಾನ ನೀಡದ ಶೋ ವಿರುದ್ಧ ವೀಕ್ಷಕರು ಗರಂ
Related image2
ಸರಿಗಮಪ ಟ್ರೋಫಿಯನ್ನು ಪುನೀತ್ ಸಮಾಧಿಗೆ ಅರ್ಪಿಸಿದ ಶಿವಾನಿ ಸ್ವಾಮಿ: ಫೋಟೋಸ್ ವೈರಲ್
36
Image Credit : Lahari

ಇದೀಗ ಲಹರಿಗೆ ಕನ್ನಡದ ಸಿನಿಮಾದಲ್ಲಿ ಹಾಡುವ ಅವಕಾಶ ಸಿಕ್ಕಿದೆ. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ, ತಮ್ಮ ಸಿನಿಮಾದಲ್ಲಿ ಪ್ರತಿಭಾನ್ವಿತ ಗಾಯಕಿ ಲಹರಿಗೆ ಅವಕಾಶ ನೀಡಿದ್ದಾರೆ. ಈ ಬಗ್ಗೆ ಲಹರಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

46
Image Credit : Lahari

ನಿಮ್ಮ ಜೊತೆ ಕೆಲಸ ಮಾಡಿದ್ದಕ್ಕೆ ತುಂಬಾ ಕೃತಜ್ಞಳಾಗಿದ್ದೇನೆ. ಅ ಅವಕಾಶ ನೀಡಿದ್ದಕ್ಕೆ ಧನ್ಯವಾದಗಳು ಸರ್ ಎಂದು ಲಹರಿ ಬರೆದುಕೊಂಡು ಅರ್ಜುನ್ ಜನ್ಯ ಜೊತೆಗಿನ ಮತ್ತು ರೆಕಾರ್ಡ್ ಮಾಡುತ್ತಿರುವ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

56
Image Credit : Lahari

ಈ ಫೋಟೋಗಳಿಗೆ ಕಮೆಂಟ್ ಮಾಡಿರುವ ನೆಟ್ಟಿಗರು, ಸರಿಗಮಪ ಮೋಸ ಮಾಡಿದ್ರೂ AJ ಮೋಸ ಮಾಡಲ್ಲ ಅನ್ನೋದು ಮತ್ತೊಮ್ಮೆ ಸಾಬೀತು ಆಗಿದೆ. ಈ ಹಿಂದೆಯೂ ಅರ್ಜುನ್ ಜನ್ಯ, ಹಲವು ಹೊಸ ಗಾಯಕರಿಗೆ ಅವಕಾಶ ನೀಡಿದ್ದಾರೆ. ಲಹರಿ ಭಾಗವಹಿಸಿದ್ದ ರಿಯಾಲಿಟಿ ಶೋನಲ್ಲಿ ಅರ್ಜುನ್ ಜನ್ಯ ಸಹ ಮೂವರು ತೀರ್ಪುಗಾರರಲ್ಲಿ ಒಬ್ಬರಾಗಿದ್ದಾರೆ.

66
Image Credit : Lahari

ಸರಿಗಮಪ ಶೋನಲ್ಲಿ ಲಹರಿಗೆ ಅವಕಾಶ ನೀಡುವುದಾಗಿ ಅರ್ಜುನ್ ಜನ್ಯ ಘೋಷಿಸಿದ್ದಾರೆ. ಇದೀಗ ಕೊಟ್ಟ ಮಾತಿನಂತೆ ಲಹರಿಗೆ ಅವಕಾಶ ನೀಡಿದ್ದಾರೆ. ಈ ಬಾರಿ ಸರಿಗಮಪ ಶೋನ ವಿನ್ನರ್ ಆಗಿ ಬೀದರ್‌ನ ಶಿವಾನಿ ಹೊರಬಂದಿದ್ದರು.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಜೀ ಕನ್ನಡ
ರಿಯಾಲಿಟಿ ಶೋ
ಸ್ಯಾಂಡಲ್‌ವುಡ್
ಸಂಗೀತ
ಅರ್ಜುನ್ ಜನ್ಯ

Latest Videos
Recommended Stories
Recommended image1
ಅಣ್ಣಯ್ಯ ಸೀರಿಯಲ್ ಪಾರುಗೆ ರಿಯಲ್‌ನಲ್ಲಿ ಬ್ರೇಕಪ್ ಆಗೋಯ್ತಾ? ಯಾರ್ ಜೊತೆ, ಏನ್ ಕಥೆ!
Recommended image2
ಪ್ರೀತಮ್‌ನಲ್ಲಿ 'ಕಾಳಿದಾಸ'ನನ್ನು ಕಂಡ ಶಿವಣ್ಣ: ಅಪ್ಪಾಜಿನೇ ಅಂದ್ಕೊಂಡು 7 ವರ್ಷದ ಬಾಲಕನ ಕಾಲಿಗೆ ಮುತ್ತಿಟ್ಟ ಹ್ಯಾಟ್ರಿಕ್ ಹೀರೋ!
Recommended image3
37ನೇ ವಯಸ್ಸಿಗೆ ಸಾವು ಕಂಡ ರಿಯಾಲಿಟಿ ಶೋ ಖ್ಯಾತಿಯ ಮಿಸ್ಟರ್ ಇಂಡಿಯಾ ವಿನ್ನರ್
Related Stories
Recommended image1
ಸರಿಗಮಪ ಫೈನಲಿಸ್ಟ್ ಇವರೇ… ಲಹರಿಗೆ ಸ್ಥಾನ ನೀಡದ ಶೋ ವಿರುದ್ಧ ವೀಕ್ಷಕರು ಗರಂ
Recommended image2
ಸರಿಗಮಪ ಟ್ರೋಫಿಯನ್ನು ಪುನೀತ್ ಸಮಾಧಿಗೆ ಅರ್ಪಿಸಿದ ಶಿವಾನಿ ಸ್ವಾಮಿ: ಫೋಟೋಸ್ ವೈರಲ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved