- Home
- Entertainment
- TV Talk
- ಪತಿಯಿಂದ ದೂರ ಆದ್ರ 'ಹೊಂಗನಸು' ನಟಿ? ತೆಲುಗು ಯುವ ನಿರ್ದೇಶಕನ ಜೊತೆ ಜ್ಯೋತಿ ರೈ ಡೇಟಿಂಗ್ ವದಂತಿ ವೈರಲ್
ಪತಿಯಿಂದ ದೂರ ಆದ್ರ 'ಹೊಂಗನಸು' ನಟಿ? ತೆಲುಗು ಯುವ ನಿರ್ದೇಶಕನ ಜೊತೆ ಜ್ಯೋತಿ ರೈ ಡೇಟಿಂಗ್ ವದಂತಿ ವೈರಲ್
ಕನ್ನಡದ ಖ್ಯಾತ ಧಾರಾವಾಹಿ ನಟಿ ಜ್ಯೋತಿ ರೈ ಪತಿಯಿಂದ ದೂರ ಆದ್ರಾ ಎನ್ನುವ ಸುದ್ದಿ ವೈರಲ್ ಆಗಿದೆ. ಜ್ಯೋತಿ ರೈ ತೆಲುಗಿನ ಯುವ ನಿರ್ದೇಶಕರ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ. ಎನ್ನುವ ಮಾತು ಕೇಳಿಬರುತ್ತಿದೆ.

ಕನ್ನಡ ಮತ್ತು ತೆಲುಗು ಸಿನಿಮಾರಂಗದಲ್ಲಿ ಖ್ಯಾತಿಗಳಿಸಿರುವ ನಟಿ ಜ್ಯೋತಿ ರೈ ಇತ್ತೀಚಿಗೆ ಹಾಟ್ ಫೋಟೋಶೂಟ್ ಮೂಲಕ ಸದ್ದು ಮಾಡುತ್ತಿದ್ದರು. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿರುವ ಜ್ಯೋತಿ ಸದಾ ಬೋಲ್ಡ್ ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಇದೀಗ ಜ್ಯೋತಿ ಬಗ್ಗೆ ಮತ್ತೊಂದು ಸುದ್ದಿ ವೈರಲ್ ಆಗಿದೆ. ನಟಿ ಜ್ಯೋತಿ ಪತಿಯಿಂದ ದೂರ ಆಗಿ ಯುವ ನಿರ್ದೇಶಕನ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಟಾಲಿವುಡ್ ಅಂಗಳದಲ್ಲಿ ಗುಲ್ಲಾಗಿದೆ. ಜ್ಯೋತಿ ರೈ ಸದ್ಯ ತೆಲುಗಿನಲ್ಲಿ 'ಗುಪ್ಪೆದಂಥ ಮನಸು' ಎನ್ನುವ ಧಾರಾವಾಹಿ ಮೂಲಕ ತೆಲುಗು ಪ್ರೇಕ್ಷಕರ ಹೃದಯ ಗೆದ್ದಿದ್ದಾರೆ.
ನಟಿ ಜ್ಯೋತಿ ರೈ ಕನ್ನಡದಲ್ಲಿ ಅನೇಕ ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿನು ಬಳಂಜ ಅವರ 'ಬಂದೇ ಬರತಾವ ಕಾಲ' ಎಂಬ ಧಾರಾವಾಹಿ ಮೂಲಕ ಜ್ಯೋತಿ ರೈ ಮೊದಲ ಬಾರಿಗೆ ಕನ್ನಡ ಧಾರಾವಾಹಿಯಲ್ಲಿ ಕಾಣಿಸಿಕೊಂಡರು. ಬಳಿಕ ಜ್ಯೋತಿ ಬ್ಯಾಕ್ ಟು ಬ್ಯಾಕ್ ಧಾರಾವಾಹಿಗಳಲ್ಲಿ ನಟಿಸಿದರು. ಜೋಗುಳ, ಕಿನ್ನರಿ, ಕಸ್ತೂರಿ ನಿವಾಸ, ಜೋ ಜೋ ಲಾಲಿ, ಗೆಜ್ಜೆಪೂಜೆ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಧಾರಾವಾಹಿ ಜೊತೆಗೆ ಸಿನಿಮಾಗಳಲ್ಲೂ ನಟಿಸಿದ್ದಾರೆ.
ಗುಪ್ಪೆದಂಥ ಮನಸು ಧಾರಾವಾಹಿಯ ಮೂಲಕ ತೆಲುಗು ಪ್ರೇಕ್ಷಕರ ಹೃದಯದಲ್ಲಿ ಸ್ಥಾನ ಪಡೆದ ಜ್ಯೋತಿ ಅಲ್ಲಿ ಸಿಕ್ಕಾಪಟ್ಟೆ ಫೇಮಸ್ ಆದರು. ಸಿನಿಮಾ, ಧಾರಾವಾಹಿ ಅಂತಿದ್ದ ನಟಿ ಸದ್ಯ ವೆಬ್ ಸೀರಿಸ್‌ನಲ್ಲೂ ಬ್ಯುಸಿಯಾಗಿದ್ದಾರೆ. ಪ್ರಿಟಿ ಗರ್ಲ್ ಎನ್ನುವ ವೆಬ್ ಸೀರಿಸ್‌ನಲ್ಲಿ ಜ್ಯೋತಿ ನಟಿಸುತ್ತಿದ್ದಾರೆ. ಕ್ರೈಮ್ ಥ್ರಿಲ್ಲರ್ ವೆಬ್ ಸರಣಿಯಾಗಿದೆ. ಬಣ್ಣದ ಲೋಕದಲ್ಲಿ ಸಾಧನೆ ಮಾಡುತ್ತಿದ್ದಂತೆ ಜ್ಯೋತಿ ರೈ ವೈಯಕ್ತಿಕ ವಿಚಾರ ಕೂಡ ಅಷ್ಟೇ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.
ಕನ್ನಡದ ನಟಿ ಜ್ಯೋತಿ ರೈ ತೆಲುಗಿನ ಯುವ ನಿರ್ದೇಶನಕನ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಈ ಸುದ್ದಿಗೆ ಪುಷ್ಠಿ ನೀಡುವಂತೆ ಇಬ್ಬರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ತೆಲುಗಿನ ನಿರ್ದೇಶಕ ಸುಕು ಪೂರ್ವಾಜ್ ಜೊತೆ ಜ್ಯೋತಿ ರೈ ಪ್ರೀತಿಯಲ್ಲಿದ್ದಾರೆ ಎನ್ನಲಾಗಿದೆ.
ಸುಕು ಮತ್ತು ಜ್ಯೋತಿ ಇಬ್ಬರೂ ಒಟ್ಟಿಗೆ ಸಿನಿಮಾ ಕೂಡ ಮಾಡಿದ್ದಾರೆ. ಶೂಟಿಂಗ್ ಸಮಯದಲ್ಲಿ ಇಬ್ಬರ ನಡುವೆ ಲವ್ ಆಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇಬ್ಬರೂ ಹೆಚ್ಚಾಗಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುವುದು ಈ ವದಂತಿಗೆ ಮತ್ತಷ್ಟು ಪುಷ್ಠಿ ನೀಡುತ್ತಿವೆ. ಇಬ್ಬರ ಫೋಟೋಗಳಿಗೆ ಅಭಿಮಾನಿಗಳು ಸಹ ಕ್ರೇಜಿ ಕಾಮೆಂಟ್ ಮಾಡುತ್ತಿದ್ದಾರೆ.
ನಟಿ ಜ್ಯೋತಿ ರೈ ಚಿಕ್ಕ ವಯಸ್ಸಿನಲ್ಲೇ ಮದುವೆಯಾಗಿದ್ದರು. ಪದ್ಮನಾಭ ರೈ ಎನ್ನುವವರ ಜೊತೆ ಜ್ಯೋತಿ ರೈ ಮದುವೆಯಾಗಿದ್ದರು. ಮದುವೆಯಾದ ಬಳಿಕ ಜ್ಯೋತಿ ರೈ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಅಷ್ಟೆಯಲ್ಲ ಜ್ಯೋತಿ ಮತ್ತು ಪದ್ಮನಾಭ್ ದಂಪತಿಗೆ 10 ವರ್ಷದ ಮಗನಿದ್ದಾನೆ.
ಆದರೀಗ ಜ್ಯೋತಿ ರೈ ಪತಿ ಪದ್ಮನಾಭ್ ಅವರಿಂದ ದೂರ ಆಗಿದ್ದಾರೆ ಎನ್ನಲಾಗಿದೆ. ಪತಿಯಿಂದ ದೂರ ಆದ ಬಳಿಕ ತೆಲುಗು ನಿರ್ದೇಶಕರ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಟಾಲಿವುಡ್‌ನಲ್ಲಿ ವೈರಲ್ ಆಗಿದೆ. ಈ ಬಗ್ಗೆ ಜ್ಯೋತಿ ರೈ ಕಡೆಯಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.