- Home
- Entertainment
- TV Talk
- ಪತಿಯ ಜೊತೆ ಸ್ಟೆಪ್ ಹಾಕಿದ ಶ್ರೀರಸ್ತು ಶುಭಮಸ್ತು ಲಾವಣ್ಯ ಭಾರಧ್ವಾಜ್-ಹೀಗೊಂದು ಕ್ಯೂಟ್ ಬೇಬಿ ಬಂಪ್ ಷೋ
ಪತಿಯ ಜೊತೆ ಸ್ಟೆಪ್ ಹಾಕಿದ ಶ್ರೀರಸ್ತು ಶುಭಮಸ್ತು ಲಾವಣ್ಯ ಭಾರಧ್ವಾಜ್-ಹೀಗೊಂದು ಕ್ಯೂಟ್ ಬೇಬಿ ಬಂಪ್ ಷೋ
'ಶ್ರೀರಸ್ತು ಶುಭಮಸ್ತು' ಖ್ಯಾತಿಯ ನಟಿ ಲಾವಣ್ಯ ಭಾರದ್ವಾಜ್ ಮತ್ತು ನಟ ಶಶಿ ಹೆಗ್ಡೆ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. 'ರಾಜಾ ರಾಣಿ' ಧಾರಾವಾಹಿಯಲ್ಲಿ ಅಣ್ಣ-ತಂಗಿಯಾಗಿ ನಟಿಸಿದ್ದ ಈ ಜೋಡಿ, ಪ್ರೀತಿಸಿ ಮದುವೆಯಾಗಿದ್ದರು. ಇದೀಗ ಲಾವಣ್ಯ ತಮ್ಮ ಗರ್ಭಾವಸ್ಥೆಯ ಫೋಟೋಶೂಟ್ ಹಂಚಿಕೊಂಡಿದ್ದಾರೆ.

ಅಮ್ಮ ಆಗ್ತಿರೋ ಶ್ರೀರಸ್ತು ಶುಭಮಸ್ತು ಪೂರ್ಣಿ
ಶ್ರೀರಸ್ತು ಶುಭಮಸ್ತು ಪೂರ್ಣಿ ಅರ್ಥಾತ್ ನಟಿ ಲಾವಣ್ಯ ಭಾರದ್ವಾಜ್ ಮತ್ತು ಅಮೃತಧಾರೆಯಲ್ಲಿ ಜೀವ ಪಾತ್ರಧಾರಿಯಾಗಿದ್ದ ಶಶಿ ದಂಪತಿ ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈಚೆಗೆ ಈ ಜೋಡಿ ಈ ಬಗ್ಗೆ ಶೇರ್ ಮಾಡಿಕೊಂಡಿತ್ತು. ಅಂದಹಾಗೆ ಶಶಿ ಹಾಗೂ ಲಾವಣ್ಯ ಅವರದ್ದು ಲವ್ ಕಮ್ ಅರೇಂಜ್ಡ್ ಮ್ಯಾರೇಜ್. ಲಾವಣ್ಯ ಅವರು ಸೋಷಿಯಲ್ ಮೀಡಿಯಾದಲ್ಲಿಯೂ ಸಕತ್ ಆ್ಯಕ್ಟೀವ್ ಆಗಿದ್ದು, ಆಗಾಗ್ಗೆ ಹಲವಾರು ರೀಲ್ಸ್ಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ.
ಪತಿ ಜೊತೆ ರೀಲ್ಸ್
ಇದೀಗ ಗರ್ಭಿಣಿ ಫೋಟೋಶೂಟ್ ಅನ್ನು ವಿಭಿನ್ನ ರೀತಿಯಲ್ಲಿ ಮಾಡಿಸಿಕೊಂಡಿದ್ದಾರೆ ನಟಿ ಲಾವಣ್ಯ. ಪತಿಯ ಜೊತೆ ರೀಲ್ಸ್ಗೆ ಹೆಜ್ಜೆ ಹಾಕಿದ್ದಾರೆ. Dance with my happy baby bump (ನನ್ನ ಗರ್ಭದ ಜೊತೆ ಖುಷಿಯಿಂದ ನೃತ್ಯ ಮಾಡುತ್ತಿರುವೆ) ಎಂದು ಕ್ಯಾಪ್ಷನ್ ಕೊಟ್ಟಿದ್ದಾರೆ. ಇದರಲ್ಲಿ ನಟಿ ನಿಧಾನವಾಗಿ ಹೆಜ್ಜೆ ಹಾಕುತ್ತಾ ಎಂಜಾಯ್ ಮಾಡುವುದನ್ನು ನೋಡಬಹುದಾಗಿದೆ.
ಇಂಟರೆಸ್ಟಿಂಗ್ ಲವ್ ಸ್ಟೋರಿ
ಈ ಜೋಡಿಯ ಮದುವೆ ಕೂಡ ತುಂಬಾ ಇಂಟರೆಸ್ಟಿಂಗ್ ಆಗಿದೆ. ಇವರಿಬ್ಬರ ಲವ್ ಸ್ಟೋರಿ ಸ್ಟಾರ್ಟ್ ಆಗಿದ್ದೇ ಸೀರಿಯಲ್ ಸೆಟ್ ನಲ್ಲಿ (serial set). ಶಶಿ ಮತ್ತು ಲಾವಣ್ಯ ಇಬ್ಬರು ರಾಜಾ ರಾಣಿ ಸೀರಿಯಲ್ನಲ್ಲಿ ನಟಿಸುತ್ತಿದ್ದರು. ಈ ಸೀರಿಯಲ್ ನಲ್ಲಿ ಇಬ್ಬರು ಅಣ್ಣ - ತಂಗಿಯಾಗಿ ನಟಿಸಿದ್ದರು. ಲಾವಣ್ಯ ಅವರು ಶಶಿ ಅವರನ್ನು ಬ್ರೋ ಎಂದೇ ಕರೆಯುತ್ತಿದ್ದರು.
ಸ್ನೇಹಕ್ಕೆ ತಿರುಗಿದ ಪರಿಚಯ
‘ರಾಜಾ ರಾಣಿ’ ಮೂಲಕವೇ ಶಶಿ ಹೆಗ್ಡೆ ಮತ್ತು ಲಾವಣ್ಯ ಅವರಿಗೆ ಪರಿಚಯವಾಯಿತು. ಪರಿಚಯ ಸ್ನೇಹಕ್ಕೆ ತಿರುಗಿತು. ಆತ್ಮೀಯ ಸ್ನೇಹಿತರಾಗಿದ್ದ ಶಶಿ ಹೆಗ್ಡೆ ಮತ್ತು ಲಾವಣ್ಯ ಮಧ್ಯೆ ಪ್ರೀತಿ ಚಿಗುರಿತು. ವರ್ಷಗಳಿಂದ ಪ್ರೀತಿಸುತ್ತಿದ್ದ ಶಶಿ ಹೆಗ್ಡೆ ಮತ್ತು ಲಾವಣ್ಯ ಕುಟುಂಬಸ್ಥರನ್ನು ಒಪ್ಪಿಸಿ ಮದ್ವೆನೂ ಆಗಿದ್ದಾರೆ.
ಬಾಲ್ಯದ ಬಗ್ಗೆ ನಟಿ
ಮದುವೆಯಾಗಿ ವರ್ಷದ ಬಳಿಕ ಈ ಜೋಡಿ ಈಚೆಗೆ ಮನಾಲಿಗೆ ಹೋಗಿ ಪ್ರವಾಸ ಮಾಡಿದ್ದು, ಇದು ನಮ್ಮ ಹನಿಮೂನ್ ಎಂದು ತಮಾಷೆ ಮಾಡಿದ್ದರು. ರಿಯಾಲಿಟಿ ಷೋ ಒಂದರಲ್ಲಿ ಲಾವಣ್ಯ ಅವರ ತಂದೆ, ಲಾವಣ್ಯ ಹುಟ್ಟಿದ ಬಗ್ಗೆ ತಿಳಿಸಿದ್ದರು.
ಬೇಡವಾದ ಮಗು
ತಮ್ಮ ಪತ್ನಿ ಗರ್ಭಿಣಿಯಾಗಿದ್ದಾಗ ಅಂದರೆ ಲಾವಣ್ಯ ಹೊಟ್ಟೆಯಲ್ಲಿ ಇದ್ದಾಗ ಆಗಿನ ಸ್ಥಿತಿಯಲ್ಲಿ ಮಗು ಹುಟ್ಟುವುದು ಬೇಡವಾಗಿತ್ತು. ಅದಕ್ಕಾಗಿ ಪರಂಗಿ ಕಾಯಿ ತಿನ್ನಬೇಕೆಂದು ಆರೇಳು ಕಿಲೋಮೀಟರ್ ಪರಂಗಿ ಕಾಯಿ ಹುಡುಕಿ ಹೊರಟಿದ್ದು, ಕೊನೆಗೆ ಅದು ಸಿಗದೇ ಇದ್ದುದ ಬಗ್ಗೆ ತಿಳಿಸಿದ್ದರು!
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

