ಪಾಕಿಸ್ತಾನದ ಜೇಬು ಸೇರಲಿದೆ 6800 ಕೋಟಿ ರೂಪಾಯಿ; ಇಷ್ಟು ಹಣ ಕೊಟ್ಟಿದ್ಯಾರು?
ಭಾರತದ ಆಕ್ಷೇಪದ ನಡುವೆಯೂ ಪಾಕಿಸ್ತಾನಕ್ಕೆ ₹6800 ಕೋಟಿ ಆರ್ಥಿಕ ನೆರವು ಸಿಗುತ್ತಿದೆ ಪಾಕಿಸ್ತಾನದ ಹಣಕಾಸು ಸುಸ್ಥಿರತೆ ಮತ್ತು ಸಾರ್ವಜನಿಕ ಹಣಕಾಸು ನಿರ್ವಹಣೆ ಬಲಪಡಿಸಲು ಈ ನೆರವು ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಭಾರತದ ಆಕ್ಷೇಪದ ನಡುವೆಯೂ ಪಾಕಿಸ್ತಾನಕ್ಕೆ 6800 ಕೋಟಿ ರು. ಆರ್ಥಿಕ ನೆರವು ನೀಡಲು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ಎಡಿಬಿ) ನಿರ್ಧರಿಸಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) 8500 ಕೋಟಿ ರು. ಹಣಕಾಸು ನೆರವು ನೀಡಲು ಒಪ್ಪಿಗೆ ನೀಡಿದ ಬೆನ್ನಲ್ಲೇ, ಇದೀಗ ಎಡಿಬಿಯಿಂದಲೂ ಪಾಕಿಸ್ತಾನಕ್ಕೆ ಸಾಲದ ನೆರವು ಹರಿದು ಬರಲಿದೆ
ಪಾಕಿಸ್ತಾನದ ಹಣಕಾಸು ಸುಸ್ಥಿರತೆ ಮತ್ತು ಸಾರ್ವಜನಿಕ ಹಣಕಾಸು ನಿರ್ವಹಣೆಗೆಯನ್ನು ಬಲಪಡಿಸಲು ಈ ನೆರವು ನೀಡುತ್ತಿರುವುದಾಗಿ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ಹೇಳಿಕೊಂಡಿದೆ.
ಪಾಕಿಸ್ತಾನಕ್ಕೆ ಹಣಕಾಸು ನೆರವು ನೀಡುವ ಕ್ರಮಕ್ಕೆ ಭಾರತವು ಸ್ಪಷ್ಟವಾಗಿ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಹಣವನ್ನು ಪಾಕಿಸ್ತಾನವು ಮಿಲಿಟರಿ ಉದ್ದೇಶಕ್ಕೆ ಹಾಗೂ ಭಯೋತ್ಪಾದನೆಗೆ ಪ್ರೋತ್ಸಾಹ ನೀಡಲು ಬಳಸಬಹುದು ಎಂಬುದು ಭಾರತದ ಆಕ್ಷೇಪವಾಗಿತ್ತು. ಇದರ ಜತೆಗೆ ಪಾಕಿಸ್ತಾನದ ಜಿಡಿಪಿಯ ಶೇ.13ರಷ್ಟಿದ್ದ ತೆರಿಗೆ ಆದಾಯವು 2023ರಲ್ಲಿ ಶೇ.9.3ಕ್ಕೆ ಕುಸಿದಿದೆ ಮತ್ತು ರಕ್ಷಣಾ ವೆಚ್ಚವು ಹೆಚ್ಚಾಗಿದೆ. ಈ ಮೂಲಕ ಪಾಕಿಸ್ತಾನವು ಆರ್ಥಿಕವಾಗಿ ದುರ್ಬಲಗೊಂಡಿದೆ ಎಂದೂ ವಾದಿಸಿತ್ತು
ಪಾಕಿಸ್ತಾನಕ್ಕೆ ಐಎಂಎಫ್ 20,000 ಕೋಟಿ ರು. ಆರ್ಥಿಕ ನೆರವು ನೀಡಲು ಮುಂದಾಗಿದೆ. ಈಗಾಗಲೇ ಇದರಲ್ಲಿ 8500 ಕೋಟಿ ರು. ಬಿಡುಗಡೆ ಮಾಡಿದೆ. ಮುಂದಿನ ಕಂತು ಬಿಡುಗಡೆಗೆ ಕೆಲವು ಷರತ್ತುಗಳನ್ನು ವಿಧಿಸಿದೆ.
ಮುಂದಿನ ಹಣಕಾಸು ವರ್ಷಕ್ಕೆ 17 ಲಕ್ಷ ಕೋಟಿ ರು. ಬಜೆಟ್ ಮಂಡಿಸಬೇಕು, ವಿದ್ಯುತ್ ಮೇಲಿನ ಸಾಲದ ಸೇವೆ ಮೇಲೆ ಹೆಚ್ಚುವರಿ ಶುಲ್ಕ ವಿಧಿಸಬೇಕು, ಮೂರು ವರ್ಷಕ್ಕೂ ಹೆಚ್ಚು ವರ್ಷ ಬಳಕೆಯಾಗಿರುವ ಕಾರುಗಳ ಆಮದಿನ ಮೇಲಿನ ನಿರ್ಬಂಧ ರದ್ದು ಮಾಡಬೇಕು, ಕೃಷಿ ಮೇಲೂ ಹೊಸದಾಗಿ ಆದಾಯ ತೆರಿಗೆ ವಿಧಿಸಬೇಕು, ಇಂಧನ, ಗ್ಯಾಸ್ ಶುಲ್ಕದಲ್ಲೂ ಸುಧಾರಣೆ ಜಾರಿ ಮಾಡುವಂತೆಯೂ ಐಎಂಎಫ್ ಷರತ್ತು ವಿಧಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

