Shubhanshu Shukla Axiom 4 Mission: ಬಾಹ್ಯಾಕಾಶಕ್ಕೆ ತೆರಳಿದ ಶುಭಾಂಶು ಶುಕ್ಲಾ
41 ವರ್ಷಗಳ ನಂತರ ಭಾರತೀಯ ಪ್ರಜೆಯೊಬ್ಬರು ಬಾಹ್ಯಾಕಾಶಕ್ಕೆ ಪಯಣ ಬೆಳೆಸಿದ್ದಾರೆ. ಶುಭಾಂಶು ಶುಕ್ಲಾ ಅವರು 14 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 60 ವಿವಿಧ ಪ್ರಯೋಗಗಳನ್ನು ನಡೆಸಲಿದ್ದಾರೆ.

ಭಾರತೀಯ ಶುಭಾಂಶು ಶುಕ್ಲಾ ಅವರ ಅಂತರಿಕ್ಷ ಯಾನ ಆರಂಭವಾಗಿದೆ. ಇಂದು ಮಧ್ಯಾಹ್ನ ಸರಿಯಾಗಿ 12.01ಕ್ಕೆ ಆ್ಯಕ್ಸಿಯೋಂ ನೌಕೆ ಬಾಹ್ಯಾಕಾಶದತ್ತ ಪ್ರಯಾಣ ಬೆಳೆಸಿತು. ಶುಭಾಂಶು ಶುಕ್ಲಾ 41 ವರ್ಷಗಳ ಬಳಿಕ ಅಂತರಿಕ್ಷ ಯಾನ ಕೈಗೊಳ್ಳುತ್ತಿರುವ ಮೊದಲ ಭಾರತೀಯ ಎಂಬ ಕೀರ್ತಿಗೆ ಪಾತ್ರರಾಗಲಿದ್ದಾರೆ.
ತಾಂತ್ರಿಕ ಮತ್ತು ಹವಾಮಾನ್ಯ ವೈಪರೀತ್ಯದ ಕಾರಣ ಉಡ್ಡಯನ ಪದೇ ಪದೇ ಮುಂದೂಡಿಕೆಯಾಗಿತ್ತು. ಶುಭಾಂಶು ಶುಕ್ಲಾ ಸೇರಿದಂತೆ ಅಮೆರಿಕದ ಪೆಗ್ಗಿ ವಿಟ್ಸನ್, ಪೋಲೆಂಡ್‌ನ ಸ್ಲವೋಝ್ ಉಝ್‌ನಾಸ್ಕಿ, ಹಂಗರಿಯ ಟಿಬರ್ ಕಪು ಬಾಹ್ಯಾಕಾಶಕ್ಕೆ ತೆರಳಿದ್ದಾರೆ. ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸೆಕ್ಸ್‌ನ ಫಾಲ್ಕನ್ 9 ರಾಕೆಟ್‌ನಲ್ಲಿ ಐಎಸ್‌ಎಸ್‌ಗೆ ಈ ನಾಲ್ವರು ತೆರಳಿದ್ದಾರೆ.
ನಾಸಾ ನೀಡಿರುವ ಮಾಹಿತಿ ಪ್ರಕಾರ, ನೌಕೆ ಗುರುವಾರ ಸಂಜೆ 4.30ರವೇಳೆಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ ತಲುಪಲಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ತೆರಳುತ್ತಿರುವ ಮೊದಲ ಭಾರತೀಯ ಎಂಬ ದಾಖಲೆಗೆ ಶುಭಾಂಶು ಶುಕ್ಲಾ ಪಾತ್ರವಾಗಲಿದ್ದಾರೆ.
ಈ ನಾಲ್ವರು 14 ದಿನಗಳ ಕಾಲ ಬಾಹ್ಯಾಕಾಶ ನಿಲ್ದಾಣದಲ್ಲಿರಲಿದ್ದು, 60 ರೀತಿಯ ವಿವಿಧ ಪ್ರಯೋಗಗಳನ್ನು ನಡೆಸಲಿದ್ದಾರೆ. 60ರಲ್ಲಿ 7 ಪ್ರಯೋಗಗಳನ್ನು ಶುಭಾಂಶು ಶುಕ್ಲಾ ಮಾಡಲಿದ್ದಾರೆ. 14 ಪ್ರಯಾಣದ ವೇಳೆ ಶುಭಾಂಶು ಶುಕ್ಲಾ ತಮ್ಮ ಜೊತೆಯಲ್ಲಿ ಮೈಸೂರು ಹಲ್ವಾ, ಮಾವಿನ ಹಣ್ಣಿನ ರಸ ತೆಗೆದುಕೊಂಡು ಹೋಗಿದ್ದಾರೆ ಎಂದು ವರದಿಯಾಗಿದೆ
ಮೊದಲ ಬಾರಿಗೆ 1984ರಲ್ಲಿ ರಾಕೇಶ್ ಶರ್ಮಾ ರಷ್ಯಾದ ಸೂಯೆಜ್ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ತೆರಳಿದ್ದರು. ಇದಾದ ಬಳಿಕ ಭಾರತ ಮೂಲದವರಾದ ಕಲ್ಪನಾ ಚಾವ್ಲಾ ಮತ್ತು ಸುನಿತಾ ವಿಲಿಯಮ್ಸ್ ಅಂತರಿಕ್ಷಕ್ಕೆ ತೆರಳಿದ್ದರು. ಆದ್ರೆ ಇವರು ಭಾರತೀಯ ಮೂಲದ ಅಮೆರಿಕ ಪ್ರಜೆಗಳೇ ಹೊರತು ಭಾರತೀಯ ಪ್ರಜೆ ಅಲ್ಲ. ಶುಕ್ಲಾ ಅವರನ್ನು ಬಾಹ್ಯಾಕಾಶಕ್ಕೆ ಕಳುಹಿಸಲು 500 ಕೋಟಿ ರೂ. ಖರ್ಚು ಮಾಡಿದೆ.
The crew of Axiom-4 have boarded the Crew Dragon spacecraft atop the Falcon 9 rocket ahead of their launch to the ISS!! 👨🚀
Less than 2 hours remaining till launch! 🚀
Notice Mission Pilot Shubhanshu Shukla here? 🇮🇳 👇 pic.twitter.com/hBFS0UB9TY— ISRO Spaceflight (@ISROSpaceflight) June 25, 2025
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

