MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • World News
  • ಜೈಲಿನಲ್ಲಿ ಚಿತ್ರಹಿಂಸೆ, ದೃಷ್ಟಿ ಕಳೆದುಕೊಂಡ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್! ವಿಶ್ವಕಪ್ ಗೆದ್ದ ನಾಯಕನಿಗೆ ಇದೆಂಥಾ ಪರಿಸ್ಥಿತಿ!

ಜೈಲಿನಲ್ಲಿ ಚಿತ್ರಹಿಂಸೆ, ದೃಷ್ಟಿ ಕಳೆದುಕೊಂಡ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್! ವಿಶ್ವಕಪ್ ಗೆದ್ದ ನಾಯಕನಿಗೆ ಇದೆಂಥಾ ಪರಿಸ್ಥಿತಿ!

ನವದೆಹಲಿ: ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಏಕದಿನ ವಿಶ್ವಕಪ್ ಗೆಲ್ಲಿಸಿಕೊಟ್ಟ ನಾಯಕ ಇಮ್ರಾನ್ ಖಾನ್ ಸದ್ಯ ಜೈಲಿನಲ್ಲಿ ಬಂಧಿಯಾಗಿದ್ದು, ಅಮಾನವೀಯ ಶಿಕ್ಷೆ ಅನುಭವಿಸುತ್ತಿದ್ದಾರೆ. ಈ ಕುರಿತಾದ ಮಹತ್ವದ ಅಪ್‌ಡೇಟ್ಸ್ ಇಲ್ಲಿದೆ ನೋಡಿ. 

1 Min read
Author : Naveen Kodase
Published : Feb 13 2026, 08:51 AM IST
Share this Photo Gallery
  • FB
  • TW
  • Linkdin
  • Whatsapp
16
ಬಲಗಣ್ಣಿನ ಸಂಪೂರ್ಣ ದೃಷ್ಟಿ ಕಳೆದುಕೊಂಡ ಇಮ್ರಾನ್ ಖಾನ್
Image Credit : Asianet News

ಬಲಗಣ್ಣಿನ ಸಂಪೂರ್ಣ ದೃಷ್ಟಿ ಕಳೆದುಕೊಂಡ ಇಮ್ರಾನ್ ಖಾನ್

ಅಡಿಯಾಲ ಜೈಲಿನಲ್ಲಿ ದೀರ್ಘಕಾಲ ಏಕಾಂಕದ ಬಂಧನ ಅನುಭವಿಸುತ್ತಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯ ದಿನದಿಂದ ದಿನಕ್ಕೆ ಕುಸಿಯುತ್ತಾ ಸಾಗಿದ್ದು, ಬಲಗಣ್ಣಿನ ಸಂಪೂರ್ಣ ದೃಷ್ಟಿ ಕಳೆದುಕೊಂಡಿದ್ದಾರೆ ಎಂದಿ ವರದಿಯಾಗಿದೆ.

26
ಇಮ್ರಾನ್ ಖಾನ್ ಅವರನ್ನು ಜೈಲಿನಲ್ಲಿ ಹೀನಾಯವಾಗಿ ನಡೆಸಿಕೊಳ್ಳಲಾಗುತ್ತಿದೆ!
Image Credit : Getty Images + Wikipedia

ಇಮ್ರಾನ್ ಖಾನ್ ಅವರನ್ನು ಜೈಲಿನಲ್ಲಿ ಹೀನಾಯವಾಗಿ ನಡೆಸಿಕೊಳ್ಳಲಾಗುತ್ತಿದೆ!

ಜೈಲುಶಿಕ್ಷೆ ಅನುಭವಿಸುತ್ತಿರುವ ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ ಅವರ ಕಣ್ಣುಗಳು ಶೇ.85ರಷ್ಟು ದೃಷ್ಟಿಹೀನವಾಗಿದ್ದು, ಆರೋಗ್ಯ ದಿನೇದಿನೇ ಕ್ಷೀಣಿಸುತ್ತಿದೆ ಎಂದು ಅಲ್ಲಿನ ಸುಪ್ರೀಂ ಕೋರ್ಟ್‌ನ ವಕೀಲರೊಬ್ಬರು ತಿಳಿಸಿದ್ದಾರೆ. ಜೈಲಿನಲ್ಲಿ ಇಮ್ರಾನ್‌ ಅವರನ್ನು ಅತ್ಯಂತ ಹೀನಾಯವಾಗಿ ನೋಡಿಕೊಳ್ಳಲಾಗುತ್ತಿದೆ. ಅಗತ್ಯ ವೈದ್ಯಕೀಯ ಸೌಲಭ್ಯವನ್ನೂ ಒದಗಿಸುತ್ತಿಲ್ಲ. ಕುಟುಂಬಸ್ಥರ ಭೇಟಿಗೂ ಅವಕಾಶ ನೀಡುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿದ್ದವು. ಇದೀಗ ಸುಪ್ರೀಂ ವಕೀಲ ಸಲ್ಮಾನ್‌ ಸಫ್ದಾರ್‌ ವರದಿ ಇದನ್ನು ಬಹಿರಂಗಪಡಿಸಿದೆ.

Related Articles

Related image1
ತೋಷಖಾನಾ–2 ಪ್ರಕರಣ: ಇಮ್ರಾನ್ ಖಾನ್–ಬುಷ್ರಾ ಬೀಬಿಗೆ ತಲಾ 17 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ತಾನ ಕೋರ್ಟ್!
Related image2
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ ಎಂದ ಪಾಕಿಸ್ತಾನ ಸೇನೆ, ಕೋಲಾಹಲ ಶುರು
36
ಈಗ ಇಮ್ರಾನ್ ಖಾನ್ ಅವರ ಶೇ.85ರಷ್ಟು ದೃಷ್ಟಿ ಹೋಗಿದೆ
Image Credit : Getty

ಈಗ ಇಮ್ರಾನ್ ಖಾನ್ ಅವರ ಶೇ.85ರಷ್ಟು ದೃಷ್ಟಿ ಹೋಗಿದೆ

3-4 ತಿಂಗಳ ಹಿಂದೆ ಅವರ ಎರಡೂ ಕಣ್ಣುಗಳಲ್ಲಿ ಸಾಮಾನ್ಯ 6 x 6 ದೃಷ್ಟಿ ಇತ್ತು. ನಂತರ ದೃಷ್ಟಿ ಮಸುಕಾಗತೊಡಗಿತು. ಇದನ್ನು ತಿಳಿಸಿದರೂ ಜೈಲಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ತರುವಾಯ ಇಮ್ರಾನ್ ಖಾನ್ ತಮ್ಮ ಬಲಗಣ್ಣಿನ ಸಂಪೂರ್ಣ ದೃಷ್ಟಿ ಕಳೆದುಕೊಂಡರು. ಈಗ ಶೇ.85ರಷ್ಟು ದೃಷ್ಟಿ ಹೋಗಿದೆ’ ಎಂದು ತಿಳಿಸಿದ್ದಾರೆ.

46
ವಕೀಲ ಸಲ್ಮಾನ್ ಸಫ್ದಾರ್ ವರದಿಯಲ್ಲಿ ಅನೇಕ ವಿಚಾರಗಳು ಬಹಿರಂಗ
Image Credit : Getty

ವಕೀಲ ಸಲ್ಮಾನ್ ಸಫ್ದಾರ್ ವರದಿಯಲ್ಲಿ ಅನೇಕ ವಿಚಾರಗಳು ಬಹಿರಂಗ

ಪಾಕಿಸ್ತಾನದ ಪ್ರಬಲ ಮಿಲಿಟರಿ ಕಣ್ಗಾವಲಿನಲ್ಲಿರುವ ಇಮ್ರಾನ್ ಖಾನ್ ಅವರ ಮೇಲೆ ಉದ್ದೇಶಪೂರ್ವಕವಾಗಿಯೇ ಅಮಾನವೀಯ ಹಾಗೂ ಕಾನೂನುಬಾಹಿರ ವರ್ತನೆ ನಡೆಸಲಾಗುತ್ತಿದೆ ಎಂದು ನ್ಯಾಯಾಲಯದಿಂದ ನೇಮಿಸಲ್ಪಟ್ಟ ವಕೀಲ ಸಲ್ಮಾನ್ ಸಫ್ದಾರ್ ವರದಿ ಬಹಿರಂಗ ಪಡಿಸಿದೆ.

56
2023ರಿಂದ ಏಕಾಂಗಿಯಾಗಿ ಜೈಲಿನಲ್ಲಿ ಬಂಧಿಯಾಗಿರುವ ಇಮ್ರಾನ್ ಖಾನ್
Image Credit : Asianet News

2023ರಿಂದ ಏಕಾಂಗಿಯಾಗಿ ಜೈಲಿನಲ್ಲಿ ಬಂಧಿಯಾಗಿರುವ ಇಮ್ರಾನ್ ಖಾನ್

2023 ರ ಅಕ್ಟೋಬರ್‌ನಲ್ಲಿ ಅಡಿಯಾಲ ಜೈಲಿಗೆ ವರ್ಗಾವಣೆಯಾದಾಗಿನಿಂದ, ಇಮ್ರಾನ್ ಖಾನ್ ಅವರನ್ನು ಸುಮಾರು ಎರಡು ವರ್ಷ ನಾಲ್ಕು ತಿಂಗಳುಗಳ ಕಾಲ ಏಕಾಂತ ಬಂಧನದಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ. ಇದು ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ವರದಿಯಾಗಿದೆ.

66
ಪಾಕಿಸ್ತಾನಕ್ಕೆ ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದುಕೊಟ್ಟ ನಾಯಕನಿಗೆ ದುಸ್ಥಿತಿ
Image Credit : Getty

ಪಾಕಿಸ್ತಾನಕ್ಕೆ ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದುಕೊಟ್ಟ ನಾಯಕನಿಗೆ ದುಸ್ಥಿತಿ

1992ರಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ ತಂಡವು, ಇಂಗ್ಲೆಂಡ್ ತಂಡವನ್ನು ಮಣಿಸಿ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದು ಬೀಗಿತ್ತು. ಇದಾದ ಬಳಿಕ ಪಾಕ್ ಪ್ರಧಾನಿಯಾಗಿಯೂ ಗಮನ ಸೆಳೆದಿದ್ದ ಇಮ್ರಾನ್‌ ಖಾನ್‌ಗೆ ತಮ್ಮ 73ನೇ ವಯಸ್ಸಿನಲ್ಲಿ ಈ ರೀತಿಯ ಚಿತ್ರ ಹಿಂಸೆ ಅನುಭವಿಸುತ್ತಿರುವುದು ನಿಜಕ್ಕೂ ದುರಂತವೇ ಸರಿ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಪಾಕಿಸ್ತಾನ
ಇಮ್ರಾನ್ ಖಾನ್

Latest Videos
Recommended Stories
Recommended image1
ಹಿಂಸೆ ಮಧ್ಯೆ ಬಾಂಗ್ಲಾ ಚುನಾವಣೆ: ಇಂದು ಫಲಿತಾಂಶ!
Recommended image2
ಭಾರತದ ಜತೆಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ ಎಂದು ಬಣ್ಣಿಸಿದ ಟ್ರಂಪ್: ನಮ್ಮ ದೇಶದ ಮೇಲೆ ಬೀರುವ ಪರಿಣಾಮವೇನು?
Recommended image3
ಉತ್ತರ ಕೊರಿಯಾಗೆ 13 ವರ್ಷದ ಮಗಳನ್ನು ಉತ್ತರಾಧಿಕಾರಿಯಾಗಿ ಅಧಿಕೃತವಾಗಿ ಘೋಷಿಸಿದ ಕಿಮ್‌ ಜಾಂಗ್‌ ಉನ್‌!
Related Stories
Recommended image1
ತೋಷಖಾನಾ–2 ಪ್ರಕರಣ: ಇಮ್ರಾನ್ ಖಾನ್–ಬುಷ್ರಾ ಬೀಬಿಗೆ ತಲಾ 17 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ತಾನ ಕೋರ್ಟ್!
Recommended image2
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ ಎಂದ ಪಾಕಿಸ್ತಾನ ಸೇನೆ, ಕೋಲಾಹಲ ಶುರು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved