16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ
ಸಾಮಾಜಿಕ ಮಾಧ್ಯಮ ಬಳಕೆ ವಿಪರೀತವಾಗಿ ಹೆಚ್ಚಿದೆ. ಚಿಕ್ಕ ಮಕ್ಕಳು ಕೂಡ ಫೋನ್‌ಗಳಿಗೆ ಅಂಟಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮದಿಂದ ನಕಾರಾತ್ಮಕ ಪರಿಣಾಮಗಳಿವೆ ಎಂದು ತಜ್ಞರು ಹೇಳುತ್ತಲೇ ಇದ್ದಾರೆ. ಮಕ್ಕಳಲ್ಲಿ ಇದು ಹೆಚ್ಚು ಕಂಡುಬರುತ್ತಿದೆ. ಹೀಗಾಗಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಸರ್ಕಾರ ಮುಂದಾಗಿದೆ.

ಇತ್ತೀಚಿನ ದಿನಗಳಲ್ಲಿ ಜೆನ್ ಝಡ್ ಮತ್ತು ಜೆನ್ ಆಲ್ಪಾ ಯುಗದ ಮಕ್ಕಳು ಹೆಚ್ಚಾಗಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗುತ್ತಿದ್ದಾರೆ. ಇದು ಚಿಕ್ಕ ಮಕ್ಕಳ ಮೇಲೆ ಒಳ್ಳೆಯ ಪರಿಣಾಮ ಉಂಟಾಗಿದ್ದಕ್ಕಿಂತ, ಕೆಟ್ಟ ಪರಿಣಾಮ ಬೀರುವುದೇ ಹೆಚ್ಚಾಗಿದೆ. ಆದ್ದರಿಂದ ನ್ಯೂಜಿಲೆಂಡ್‌ನಲ್ಲಿ ಜಾಗತಿಕ ಮಟ್ಟದಲ್ಲಿ ಎರಡನೇ ರಾಷ್ಟ್ರವಾಗಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧಿಸುವ ಮಸೂದೆಯನ್ನು ಮಂಡನೆ ಮಾಡಲಾಗಿದೆ.
ಇನ್ನು ಎಲ್ಲ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುವುದಕ್ಕೆ ವಯಸ್ಸು ಪರಿಶೀಲನೆ ಕಡ್ಡಾಯ ಮಾಡಲಾಗುತ್ತದೆ. ಲಾಗಿನ್ ಮಾಡುವುದಕ್ಕೂ ಮುನ್ನ ಸಂಬಂಧಪಟ್ಟವರು ವಯಸ್ಸು ನಮೂದಿಸಿದ ನಂತರ ಲಾಗಿನ್ ಆಗುತ್ತದೆ. 16 ವರ್ಷದೊಳಗಿದ್ದರೆ ಲಾಗಿನ್ ಮಾಡುವುದಕ್ಕೆ ಸಾಧ್ಯವಿಲ್ಲ. ಈ ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ಕ್ರಮವನ್ನೂ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.
ದೇಶದಲ್ಲಿ ಮಕ್ಕಳ ರಕ್ಷಣೆಗಾಗಿ ಈ ಕಾನೂನು ರೂಪಿಸಲಾಗುತ್ತಿದೆ. ಸಾಮಾಜಿಕ ಜಾಲತಾಣದ ಮೂಲಕ ಕೆಲವು ವಂಚಕರಿಂದ ಮಕ್ಕಳ ಮೇಲಾಗುವ ಬೆದರಿಕೆ ಪ್ರಕರಣ ತಪ್ಪಿಸುವುದು, ಮಕ್ಕಳನ್ನು ಅಸಭ್ಯ ವಿಷಯಗಳಿಂದ ರಕ್ಷಣೆ ಮಾಡುವುದಕ್ಕೆ ಈ ನಿಯಮ ಜಾರಿಗೆ ತರಲಾಗುತ್ತಿದೆ.
ಜಾಗತಿಕ ಮಟ್ಟದಲ್ಲಿ ಆಸ್ಟ್ರೇಲಿಯಾದಲ್ಲಿ ಈಗಾಗಲೇ ಈ ಕಾನೂನು ಜಾರಿಯಲ್ಲಿದೆ. ಇಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧಿಸಲಾಗಿದೆ. ಈ ಬಗ್ಗೆ ಮಕ್ಕಳ ಪೋಷಕರು ಕೂಡ ನಿಗಾವಹಿಸಬೇಕು ಎಂದು ನಿಯಮದಲ್ಲಿ ತಿಳಿಸಲಾಗಿದೆ.
ಇನ್ನು ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳು ಹಾಗೂ ಕಂಪನಿಗಳು (ಉದಾಹರಣೆಗೆ ಫೇಸ್‌ಬುಕ್, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಟ್ವಿಟರ್ ಇತರೆ...) ನಿಯಮ ಪಾಲಿಸದಿದ್ದರೆ ಅವರ ವಿರುದ್ಧ ದಂಡ ವಿಧಿಸಬಹುದು. ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ದೇಶಗಳ ಜನಸಂಖ್ಯೆ ಕಡಿಮೆ ಇದ್ದು, ಸೋಷಿಯಲ್ ಮೀಡಿಯಾ ಕಂಪನಿಗಳ ಹೆಚ್ಚಿನ ಪ್ರಭಾವ ಬೀರುವುದಿಲ್ಲ.
ಆದರೆ, ಭಾರತ, ಚೀನಾ, ದಕ್ಷಿಣ ಆಫ್ರಿಕಾ ಸೇರಿದಂತೆ ಅತಿಹೆಚ್ಚು ಜನಸಂಖ್ಯೆಯನ್ನು ರಾಷ್ಟ್ರಗಳು ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ಬ್ಯಾನ್ ಮಾಡಿದರೆ ದೊಡ್ಡ ಪರಿಣಾಮ ಉಂಟಾಗಲಿದೆ.