- Home
- News
- World News
- ಅಮೆರಿಕದಲ್ಲಿ ಸ್ಯಾಂಡಲ್‌ವುಡ್ ನಟ ರಿಷಬ್ ಶೆಟ್ಟಿಗೆ "ವಿಶ್ವ ಶ್ರೇಷ್ಠ ಕನ್ನಡಿಗ 2023" ಪ್ರಶಸ್ತಿ ಪ್ರದಾನ
ಅಮೆರಿಕದಲ್ಲಿ ಸ್ಯಾಂಡಲ್‌ವುಡ್ ನಟ ರಿಷಬ್ ಶೆಟ್ಟಿಗೆ "ವಿಶ್ವ ಶ್ರೇಷ್ಠ ಕನ್ನಡಿಗ 2023" ಪ್ರಶಸ್ತಿ ಪ್ರದಾನ
ವಾಷಿಂಗ್ಟನ್(ಜೂ.28): ಅಮರಿಕ ರಾಜಧಾನಿ ವಾಷಿಂಗ್ಟನ್ ನಗರದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ "ವಿಶ್ವ ಶ್ರೇಷ್ಠ ಕನ್ನಡಿಗ 2023" ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಇತ್ತೀಚೆಗೆ ರಿಷಬ್ ಶೆಟ್ಟಿ ಇತ್ತೀಚೆಗೆ ಪತ್ನಿ ಪ್ರಗತಿ ಶೆಟ್ಟಿ ಅವರು ಕುಟುಂಬ ಸಮೇತ ಅಮೆರಿಕದ ವಾಷಿಂಗ್ಟನ್‌ನ ಸಿಯಾಟಲ್‌ಗೆ ಭೇಟಿ ನೀಡಿದ್ದರು.
ವಾಷಿಂಗ್ಟನ್ ನಗರದ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್‌ನಲ್ಲಿ ರಿಷಬ್ ಶೆಟ್ಟಿ ಅವರಿಗೆ "ವಿಶ್ವ ಶ್ರೇಷ್ಠ ಕನ್ನಡಿಗ 2023" ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಈ ಪ್ರಶಸ್ತಿಯನ್ನು ಅಲ್ಲಿನ ಸಹ್ಯಾದ್ರಿ ಕನ್ನಡ ಸಂಘ ಹಾಗೂ ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು ರಿಷಬ್ ಶೆಟ್ಟಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸೆನೆಟರ್ ಡಾ|.ದೆರೀಕ್ ಟ್ರಸ್ಫರ್ಡ್ ಸಹ ಉಪಸ್ಥಿತರಿದ್ದರು.
ಅಮೆರಿಕ ಹಾಗೂ ವಾಷಿಂಗ್ಟನ್ ನಗರಕ್ಕೆ ಕನ್ನಡಿಗರು ನೀಡುತ್ತಿರುವ ಕೊಡುಗೆಯನ್ನು ಸ್ಮರಿಸಿದ ಟ್ರಸ್ಫರ್ಡ್ ಅವರು, ರಿಷಬ್ ಶೆಟ್ಟಿ ಅವರ "ಕಾಂತಾರ" ಸಿನಿಮಾವನ್ನು ಯುನಿವರ್ಸಲ್ ಸಿನಿಮಾ ಎಂದು ಮುಕ್ತಕಂಠದಿಂದ ಶ್ಲಾಘಿಸಿದರು.
ಇದೇ ಸಂದರ್ಭದಲ್ಲಿ ಅಮೆರಿಕದ ಇಡೀ ಕನ್ನಡಿಗರನ್ನು ಉದ್ದೇಶಿಸಿ ಮಾತನಾಡಿದ ರಿಷಬ್ ಶೆಟ್ಟಿ ಅವರು, ವಾಷಿಂಗ್ಟನ್‌ನ ಸಿಯಾಟಲ್ ನಗರದ ಪ್ಯಾರಾಮೌಂಟ್ ಥಿಯೇಟರ್‌ಗೆ 95 ವರ್ಷಗಳ ಇತಿಹಾಸವಿದೆ. ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸೇರಿದಂತೆ ಸಾಕಷ್ಟು ಗಣ್ಯರು ಈ ಸ್ಥಳದಲ್ಲಿ ಭಾಷಣ ಮಾಡಿದ್ದಾರೆ. ಅನೇಕ ಹೆಸರಾಂತ ಕಲಾವಿದರ ಕಾರ್ಯಕ್ರಮಗಳು ಇಲ್ಲಿ ನಡೆದಿದೆ. ಇಂತಹ ಇತಿಹಾಸವಿರುವ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ "ವಿಶ್ವ ಶ್ರೇಷ್ಠ ಕನ್ನಡಿಗ 2023" ಪಡೆದಿರುವುದಕ್ಕೆ ರಿಷಬ್ ಶೆಟ್ಟಿ ಸಂತಸಪಟ್ಟಿದ್ದಾರೆ.
ಚಿನ್ನದ ಲೇಪನ ಹೊಂದಿರುವ ಈ ಟ್ರೋಫಿ, ಸುಮಾರು ಐದು ಕೆಜಿ ತೂಕವಿದೆ. ಈ ಕಾರ್ಯಕ್ರಮದಲ್ಲಿ 1800 ಕ್ಕೂ ಅಧಿಕ ಕನ್ನಡಿಗರು ಭಾಗವಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ