ಅರಸೀಕೆರೆ[ನ.10]: ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿ ಘಟನೆ ತಾಲೂಕಿನ ಆಲದಮರ-ಗಾಂಧಿನಗರ ಮಧ್ಯೆ ಇಂದು[ಭಾನುವಾರ] ನಡೆದಿದೆ. 

ಮೃತರನ್ನು ಅರಸೀಕೆರೆ ಮೂಲದ ಚಂದ್ರು(40) ನಾಗರಾಜ್(35) ಎಂದು ಗುರುತಿಸಲಾಗಿದೆ. ನಿಯಂತ್ರಣ ತಪ್ಪಿದ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಮೃತರಿಬ್ಬರೂ ಬಾಣಾವರದಿಂದ ಅರಸೀಕೆರೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕಾರು ಬೆಂಗಳೂರಿನಿಂದ ಶಿವಮೊಗ್ಗದ ಕಡೆಗೆ ಹೊರಟಿತ್ತು ಎಂದು ತಿಳಿದು ಬಂದಿದೆ. ಬೈಕ್‌ಗೆ ಡಿಕ್ಕಿ ಹೊಡೆದ ಕಾರು ಬೈಕ್ ಬಹುತೇಕ ಜಖಂಗೊಂಡಿವೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.