ಹಾಸನ [ನ.09] :   ಕಬ್ಬಿಣ ತುಂಬಿದ್ದ ಲಾರಿ- ಸಾರಿಗೆ ಬಸ್  ಡಿಕ್ಕಿಯಾಗಿ ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 

ಹಾಸನ ಜಿಲ್ಲೆ ಆಲೂರು ಬೈಪಾಸ್  ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೆಎಸ್ ಆರ್ ಟಿಸಿ ಬಸ್ ಅಪಘಾತಕ್ಕೆ ಈಡಾಗಿದೆ. 

ಬೆಂಗಳೂರಿನಿಂದ ಕಾರ್ಕಳಕ್ಕೆ ತೆರಳುತ್ತಿದ್ದ ಬಸ್ಸಿಗೆ ಕಬ್ಬಿಣದ ರಾಡುಗಳನ್ನು ತುಂಬಿದ್ದ ಲಾರಿ ಏಕಾಏಕಿ ಡಿಕ್ಕಿ ಹೊಡೆದಿದೆ.  ಬಸ್ಸಿನಲ್ಲಿ 53 ಮಂದಿ ಪ್ರಯಾಣಿಸುತ್ತಿದ್ದು, 10 ಮಂದಿಗೆ ಗಾಯವಾಗಿದ್ದು ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅಪಘಾತಕ್ಕೆ ಸಂಬಂಧಿಸಿದಂತೆ ಆಲೂರು ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.