ಚನ್ನಪಟ್ಟಣ [ಅ.19]:  ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ವೆಸಗಿದ್ದ ಆರೋಪಿಯನ್ನು ಬಂಧಿಸಿ ಸಂತ್ರಸ್ತ ಬಾಲಕಿಯನ್ನು ರಕ್ಷಿಸುವಲ್ಲಿ ನಗರ ಪೊಲೀಸರು ಸಫಲಗೊಂಡಿದ್ದಾರೆ.

ರಕ್ಷಿತ್‌ಕುಮಾರ್‌(20)ಬಂಧಿತ ಆರೋಪಿ. ಕೆಲ ದಿನಗಳ ಹಿಂದೆ ಅಪಾಪ್ತ ಬಾಲಕಿಯನ್ನು ಅಪಹರಿಸಿ ಕೊಂಡು ಹೋಗಿದ್ದ ಆರೋಪಿ ತಾಲೂಕಿನ ಮಸೀಗೌಡನ ದೊಡ್ಡಿ ಮನೆಯೊಂದರಲ್ಲಿ ಇರಿಸಿದ್ದ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ  

ದೂರು ದಾಖಲಿಸಿಕೊಂಡು ತನಿಖೆ ನಡೆಸಿದ ನಗರ ಪೊಲೀಸರು ಆರೋಪಿಯನ್ನು ಬಂಧಿಸಿ, ಅಪ್ರಾಪ್ತ ಬಾಲಕಿಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಅತ್ಯಾಚಾರ ನಡೆಸಿರುವುದು ಬೆಳಕಿಗೆ ಬಂದಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪರಿಸಿ ನ್ಯಾಯಾಧೀಶರ ಆದೇಶದ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.