ಹಾವೇರಿ[ಅ.21]: ರಾತ್ರಿಯಿಡಿ ಸುರಿದ ಭಾರೀ ಮಳೆಗೆ ರಾಜಕಾಲುವೆಯಲ್ಲಿ ಬಾಲಕನೋರ್ವ ಕೊಚ್ಚಿ ಹೋದ ಘಟನೆ ಹಿರೇಕೆರೂರು ಪಟ್ಟಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಾಲುವೆಯಲ್ಲಿ ಕೊಚ್ಚಿ ಹೋದ ಬಾಲಕನನ್ನು ಸೋಯಬ್ (8) ಎಂದು ಗುರುತಿಸಲಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಬಾಲಕನಿಗಾಗಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ಆರಂಭಿಸಿದ್ದಾರೆ. ಭಾನುವಾರ ರಾತ್ರಿಯಿಂದ ಜಿಲ್ಲಯಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಜೊತೆಗೆ ಬಹುತೇಕ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಹಾಮಳೆಯಿಂದ ಅನೇಕ ಕಡೆ ಮತ್ತೆ ಪ್ರವಾಹದ ಭೀತಿ ಎದುರಾಗಿದೆ.  ಇನ್ನು ಬೆಳಗಾವಿ ತಾಲೂಕಿನ  ಹೊಸ ವಂಟಮೂರಿ ಬಳಿ ರಸ್ತೆ ಕುಸಿದಿದೆ. ಪರಿಣಾಮ ಭೂಮಿಯಡಿ ಸರ್ಕಾರಿ ಬಸ್ ಸಿಲುಕಿದೆ.