Covid Cases: ದೇಶದಲ್ಲಿ ಒಂದೇ ದಿನ 10,753 ಕೋವಿಡ್‌ ಕೇಸ್‌, 27 ಮಂದಿ ಸಾವು

ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಒಂದೇ ದಿನ 10,753 ಮಂದಿಗೆ ಕೋವಿಡ್‌ ಸೋಂಕು ತಗುಲಿದೆ. ಈ ಮೂಲಕ ಸಕ್ರಿಯ ಪ್ರಕರಣ ಸಂಖ್ಯೆ 53,720ಕ್ಕೆ ಹೆಚ್ಚಳವಾಗಿದೆ. 27 ಮಂದಿ ಸಾವನ್ನಪ್ಪಿದ್ದಾರೆ. 

10753 covid cases and 27 deaths in the country in a single day Vin

ನವದೆಹಲಿ: ದೇಶದಲ್ಲಿ ಮತ್ತೆ ಕೋವಿಡ್‌ ಅಬ್ಬರ ಶುರುವಾಗಿದ್ದು ಶನಿವಾರ ಒಂದೇ ದಿನ 10,753 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿವೆ. ಪ್ರಕರಣಗಳ ಸಂಖ್ಯೆ ಏರಿಕೆ ಹಾಗೂ ಗುಣಮುಖರ ಪ್ರಮಾಣದಲ್ಲಿ ಕಮ್ಮಿ ಇರುವ ಕಾರಣ ಸಕ್ರಿಯ ಪ್ರಕರಣಗಳ ಸಂಖ್ಯೆ 53,720ಕ್ಕೆ ಏರಿಕೆಯಾಗಿದೆ. ಇನ್ನು ದೈನಂದಿನ ಹಾಗೂ ವಾರದ ಪಾಸಿಟಿವಿಟಿ ದರಗಳು ಕ್ರಮವಾಗಿ ಅತಿ ಹೆಚ್ಚು ಎನ್ನಬಹುದಾದ 6.78 ಹಾಗೂ 4.49 ರಷ್ಟುದಾಖಲಾಗಿದೆ.

ಇದೇ ವೇಳೆ ಕೇರಳ ಮತ್ತು ದೆಹಲಿಗಳಲ್ಲಿ ತಲಾ 6, ಮಹಾರಾಷ್ಟ್ರದಲ್ಲಿ 4, ರಾಜಸ್ಥಾನದಲ್ಲಿ 3 ಹಾಗೂ ಮಧ್ಯ ಪ್ರದೇಶ, ಉತ್ತರಾಖಂಡ್‌, ಉತ್ತರ ಪ್ರದೇಶ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಗುಜರಾತ್‌, ಹರಿಯಾಣ, ಛತ್ತೀಸ್‌ಗಢಗಳಲ್ಲಿ ತಲಾ 1 ಸೇರಿದಂತೆ ಒಟ್ಟು 27 ಸೋಂಕಿತರು ಸಾವನ್ನಪ್ಪಿದ್ದಾರೆ. ಸೋಂಕಿತರ ಚೇತರಿಕೆಯ ಪ್ರಮಾಣವು 98.69 ರಷ್ಟು ದಾಖಲಾಗಿದೆ. ಇನ್ನು ದೇಶದಲ್ಲಿ ಈವರೆಗೆ ಕೋವಿಡ್‌ ಸೋಂಕಿಗೆ ತುತ್ತಾದರವರ ಸಂಖ್ಯೆ 4.48 ಕೋಟಿಗೆ ಏರಿಕೆಯಾಗಿದ್ದು, ಒಟ್ಟು 220.66 ಕೋಟಿ ಡೋಸ್‌ ಕೋವಿಡ್‌ ಲಸಿಕೆಗಳ (Covid vaccine) ವಿತರಣೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ (Health ministry) ತಿಳಿಸಿದೆ.

Covid Cases: ಕೋವಿಡ್‌ ಎದುರಿಸಲು ಸಿದ್ಧರಾಗಿ, ರಾಜ್ಯಗಳಿಗೆ ಕೇಂದ್ರ ಸೂಚನೆ

ಮತ್ತೆ ಕೋವಿಡ್ ಭೀತಿ, ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ
ಇತ್ತೀಚಿನ ಲಭ್ಯವಿರುವ ಮಾಹಿತಿಯ ಪ್ರಕಾರ, ಭಾರತದಲ್ಲಿ ಎಂಟು ರಾಜ್ಯಗಳು ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳನ್ನು ವರದಿ ಮಾಡುತ್ತಿವೆ. ಇವುಗಳಲ್ಲಿ ಕೇರಳ, ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ 10ಕ್ಕೂ ಹೆಚ್ಚು ಜಿಲ್ಲೆಗಳು ಶೇಕಡಾ 10ಕ್ಕಿಂತ ಹೆಚ್ಚು ಪಾಸಿಟಿವ್ ಕೇಸ್ ಹೊಂದಿವೆ. ಈ ಪೈಕಿ ಮೂರು ರಾಜ್ಯಗಳು ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿವೆ (Mask compulsory). ಅವು ಯಾವುದೆಲ್ಲಾ ಅನ್ನೋ ಮಾಹಿತಿ ಇಲ್ಲಿದೆ.    

ಕೇರಳ
ಗರ್ಭಿಣಿಯರು, ವೃದ್ಧರು, ಮಕ್ಕಳು ಮತ್ತು ವಯೋಸಹಜ ಕಾಯಿಲೆ ಇರುವವರಿಗೆ ಮಾಸ್ಕ್ ಕಡ್ಡಾಯವಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಶನಿವಾರ ಹೇಳಿದ್ದಾರೆ. ಕೇರಳದಲ್ಲಿ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕೋವಿಡ್‌ ಸೋಂಕು ತುಸು ಹೆಚ್ಚೇ ಇದೆ. ಶನಿವಾರ ರಾಜ್ಯದಲ್ಲಿ 1,801 ಜನರಿಗೆ ಕೋವಿಡ್‌ ಪಾಸಿಟಿವ್‌ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವೆ (Health minister) ವೀಣಾ ಜಾರ್ಜ್ ಶನಿವಾರ ಮಾಸ್ಕ್‌ ಕಡ್ಡಾಯಯ ಬಗ್ಗೆ ಆದೇಶ ಹೊರಡಿಸಿದ್ದಾರೆ. 60 ವರ್ಷ ಮೇಲ್ಪಟ್ಟವರಲ್ಲಿ ಮತ್ತು ಮಧುಮೇಹ (Diabetes)ದಂತಹ ಜೀವನಶೈಲಿ ಕಾಯಿಲೆ ಇರುವವರಲ್ಲಿ ಹೆಚ್ಚಿನ ಸಾವುಗಳು (Death) ವರದಿಯಾಗಿವೆ ಎಂದು ಸಚಿವರು ಹೇಳಿದರು.

ಭಾರತದಲ್ಲಿ ಕೋವಿಡ್‌ನ ಮತ್ತಷ್ಟು ರೂಪಾಂತರ, ಸೋಂಕು ಹೆಚ್ಚಳ ಸಾಧ್ಯತೆ: WHO

ಪುದುಚೇರಿ: ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಕಾರಣ ಪುದುಚೇರಿ ಆಡಳಿತವು ಶುಕ್ರವಾರ ಕೇಂದ್ರಾಡಳಿತ ಪ್ರದೇಶದಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಕೊರೋನಾ ವೈರಸ್ ಪ್ರಕರಣಗಳ ಇತ್ತೀಚಿನ ಉಲ್ಬಣವನ್ನು ಎತ್ತಿ ಹಿಡಿದ ಜಿಲ್ಲಾಧಿಕಾರಿ ಇ ವಲ್ಲವನ್ ಅವರು,'ಮುಂದಿನ ದಿನಗಳಲ್ಲಿ ಕೋವಿಡ್ -19 ರ ಪ್ರಸರಣ ಹೆಚ್ಚಳದ ಅಪಾಯವನ್ನು ಕಡಿಮೆ ಮಾಡಲು ಆಡಳಿತವು ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಹರಿಯಾಣ: ಹರಿಯಾಣ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಶುಕ್ರವಾರ ಹರ್ಯಾಣದಲ್ಲಿ 407 ಮಂದಿಗೆ ಸೋಂಕು ತಗುಲಿದೆ. ಮಾಹಿತಿಯ ಪ್ರಕಾರ, ಹರಿಯಾಣದ ಅರ್ಧದಷ್ಟು ಕೋವಿಡ್ ಪ್ರಕರಣಗಳು ಗುರುಗ್ರಾಮ್ ಜಿಲ್ಲೆಯಿಂದ ದಾಖಲಾಗಿವೆ ಎಂದು ರಾಜ್ಯದ ಆರೋಗ್ಯ ಇಲಾಖೆ ಶುಕ್ರವಾರ ಬುಲೆಟಿನ್‌ನಲ್ಲಿ ತಿಳಿಸಿದೆ. ಈ ವಾರ ಎರಡು ಕೋವಿಡ್ ಸಂಬಂಧಿತ ಸಾವುಗಳು ಸಂಭವಿಸಿವೆ.

Latest Videos
Follow Us:
Download App:
  • android
  • ios