20 ಕೋಟಿ ಜನರಿಗೆ ಕೋವಿಡ್‌ ಸೋಂಕು, ಚೀನಾ ಸರ್ಕಾರದ ಅಧಿಕೃತ ಮಾಹಿತಿ

ಚೀನಾದ ವುಹಾನ್‌ನಿಂದ ಆರಂಭಗೊಂಡು ಜಗತ್ತಿನಾದ್ಯಂತ ಹರಡಿದ್ದ ಕೊರೋನಾ ವೈರಸ್‌ ಕಳೆದೆರಡು ವರ್ಷಗಳಿಂದ ಜನಜೀವನವನ್ನು ಹೈರಾಣುಗೊಳಿಸಿತ್ತು. ಈ ಮಧ್ಯೆ ಕೋವಿಡ್‌ ನಿರ್ಬಂಧಗಳನ್ನು ತೆಗೆದ ಬಳಿಕ ಸುಮಾರು 20 ಕೋಟಿ ಜನರಿಗೆ ಕೋವಿಡ್‌ ಸೋಂಕು ಕಾಣಿಸಿಕೊಂಡಿತ್ತು ಎಂದು ಮೊದಲ ಬಾರಿಗೆ ಚೀನಾ ಸರ್ಕಾರವೇ ಅಧಿಕೃತವಾಗಿ ಒಪ್ಪಿಕೊಂಡಿದೆ. 

20 Crore People infected with Covid in the country,information of the Chinese government Vin

ಬೀಜಿಂಗ್‌: ಕಳೆದ ವರ್ಷ ನವೆಂಬರ್‌ನಲ್ಲಿ ಕೋವಿಡ್‌ ನಿರ್ಬಂಧಗಳನ್ನು ತೆಗೆದ ಬಳಿಕ ಸುಮಾರು 20 ಕೋಟಿ ಜನರಿಗೆ ಕೋವಿಡ್‌ ಸೋಂಕು ಕಾಣಿಸಿಕೊಂಡಿತ್ತು ಎಂದು ಮೊದಲ ಬಾರಿಗೆ ಚೀನಾ ಸರ್ಕಾರವೇ ಅಧಿಕೃತವಾಗಿ ಒಪ್ಪಿಕೊಂಡಿದೆ. ಇವರೆಲ್ಲರಿಗೂ ಚಿಕಿತ್ಸೆ ನೀಡಲಾಗಿದ್ದು, ಗುಣಮುಖರಾಗಿದ್ದಾರೆ, ಈ ಮೂಲಕ ಕೋವಿಡ್‌ ವಿರುದ್ಧ ಹೋರಾಟದಲ್ಲಿ ಚೀನಾ ಜಯಗಳಿಸಿದೆ ಎಂದು ಹೇಳಿದೆ. ಆದರೆ ಸಾವಿನ ಕುರಿತಾಗಿ ಯಾವುದೇ ಮಾಹಿತಿ ನೀಡಿಲ್ಲ.

ಆಡಳಿತಾರೂಢ ಕಮ್ಯುನಿಸ್ಟ್‌ ಪಕ್ಷದ ಮುಖ್ಯಸ್ಥ ಹಾಗೂ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಮತ್ತು ಸರ್ಕಾರದ ಇತರ ಉನ್ನತ ಸಚಿವರ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಕೋವಿಡ್‌ ಸೋಂಕನ್ನು (Covid virus) ತಡೆಗಟ್ಟಲು ಸರ್ಕಾರ ತೆಗೆದುಕೊಂಡ ಎಲ್ಲಾ ನಿರ್ಧಾರಗಳು ಸಹ ಸಮಂಜಸವಾಗಿವೆ. ಆದರೆ ಕಳೆದ ವರ್ಷ ನವೆಂಬರ್‌ ಮತ್ತು ಡಿಸೆಂಬರ್‌ನಲ್ಲಿ ಕೋವಿಡ್‌ ನಿರ್ಬಂಧಗಳನ್ನು ಹಠಾತ್ತನೆ ತೆಗೆದ ಕಾರಣ ಅಲ್ಪಾವಧಿಯಲ್ಲಿ ಕೋವಿಡ್‌ ಸ್ಪೋಟಗೊಂಡಿತ್ತು. ಹಾಗಾಗಿ ಆಸ್ಪತ್ರೆಗಳಲ್ಲಿ (Hospital) ರೋಗಿಗಳ ಸಂಖ್ಯೆ ಹೆಚ್ಚಾಗಿತ್ತು. ಆದರೆ ಅದನ್ನು ಇದೀಗ ನಿಯಂತ್ರಣಕ್ಕೆ ತರಲಾಗಿದೆ ಎಂದು ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಹೇಳಿದ್ದಾರೆ ಎಂದು ಕ್ಸಿನ್‌ಹುವಾ ನ್ಯೂಸ್‌ ಏಜೆನ್ಸಿ ವರದಿ ಮಾಡಿದೆ.

ಭಾರತದ ಮೊದಲ ಕೋವಿಡ್ ಪತ್ತೆಯಾಗಿ 3 ವರ್ಷ, ಸರಿಯಾಗಿ ನೆನಪಿದೆ ಕೊರೋನಾ ಸಂಕಷ್ಟ!

ಚೀನಾ ಇದೀಗ ಸಾಂಕ್ರಾಮಿಕದ ನಂತರದ ಹಂತಕ್ಕೆ ತಲುಪಿದ್ದು, ಇದು ಅಸಾಮಾನ್ಯ ಸಾಧನೆಯಾಗಿದೆ. ಸರ್ಕಾರ ಇನ್ನೂ ಮುಂದೆ ಸಹ ಸೋಂಕು ನಿರ್ಬಂಧ ಮತ್ತು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಏಜೆನ್ಸಿ ತಿಳಿಸಿದೆ. ಕೋವಿಡ್‌ ಸಾಂಕ್ರಾಮಿಕದ ವಿರುದ್ಧ ಶೂನ್ಯ ಸಹಿಷ್ಣುತೆ ಹೊಂದಿದ್ದ ಸರ್ಕಾರ ಕಠಿಣ ನಿರ್ಬಂಧಗಳನ್ನು ವಿಧಿಸಿತ್ತು. ಆದರೆ ಇದನ್ನು ವಿರೋಧಿಸಿ ಜನರು ಬೃಹತ್‌ ಪ್ರತಿಭನಟನೆಗಳನ್ನು ನಡೆಸಿದ ಬಳಿಕ ನಿರ್ಬಂಧಗಳನ್ನು ತೆಗೆದುಹಾಕಿತ್ತು.

ಬೆಂಗಳೂರು ನಗರದಲ್ಲಿ ಮತ್ತೆ ಸೋಂಕು ಏರಿಕೆ
ಬೆಂಗಳೂರಿನಲ್ಲಿ 42 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.1.90 ದಾಖಲಾಗಿದೆ. ಸೋಂಕಿನಿಂದ 22 ಜನ ಗುಣಮುಖರಾಗಿದ್ದು, ಮೃತಪಟ್ಟವರದಿಯಾಗಿಲ್ಲ. 103 ಸಕ್ರಿಯ ಸೋಂಕು ಪ್ರಕರಣಗಳಿದ್ದು, 17 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ (Treatment) ಪಡೆಯುತ್ತಿದ್ದಾರೆ. ಉಳಿದವರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 45 ಮಂದಿ ಕೋವಿಡ್‌ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ. 7 ಮಂದಿ ಮೊದಲ ಡೋಸ್‌, 11 ಮಂದಿ ಎರಡನೇ ಡೋಸ್‌ ಮತ್ತು 27 ಮಂದಿ ಮೂರನೇ ಡೋಸ್‌ ಲಸಿಕೆ ಪಡೆದಿದ್ದಾರೆ. ನಗರದಲ್ಲಿ 976 ಮಂದಿಗೆ ಕೊರೋನಾ ಸೋಂಕು ಪರೀಕ್ಷೆ (Test) ನಡೆಸಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

ಕೋವಿಡ್ ಸಮಯದಲ್ಲಿ ಕಾಂಡೋಮ್‌, ಗರ್ಭನಿರೋಧಕ ಮಾತ್ರೆಗಳ ಮಾರಾಟ ಅತ್ಯಧಿಕ

Latest Videos
Follow Us:
Download App:
  • android
  • ios