ಚೀನಾ ನ್ಯೂಮೋನಿಯಾ ಸೋಂಕು ಭಾರತದಲ್ಲೆ ಪತ್ತೆ ವರದಿ ಆತಂಕ, ಸ್ಪಷ್ಟನೆ ನೀಡಿದ ಕೇಂದ್ರ!
ಚೀನಾದಲ್ಲಿ ಕಾಣಿಸಿಕೊಂಡ ನ್ಯೂಮೋನಿಯಾ ರೀತಿಯ ಸೋಂಕು ಬಳಿಕ ಅಮೆರಿಕದಲ್ಲೂ ಕಾಣಿಸಿಕೊಂಡಿದೆ. ಇದೀಗ ಈ ವೈರಸ್ ಭಾರತಕ್ಕೆ ಕಾಲಿಟ್ಟಿದೆ ಅನ್ನೋ ವರದಿ ಭಾರಿ ಕೋಲಾಹಲ ಸೃಷ್ಟಿಸಿತ್ತು. ದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಇದೀಗ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ನವದೆಹಲಿ(ಡಿ.07) ಕೋವಿಡ್ ಬಳಿಕ ಚೀನಾದಲ್ಲಿ ನ್ಯೂಮೋನಿಯಾ ರೀತಿಯ ಸೋಂಕು ತೀವ್ರಗತಿಯಲ್ಲಿ ಪಸರಿಸಿ ಆತಂಕ ಸೃಷ್ಟಿಸಿದೆ. ಮಕ್ಕಳಲ್ಲಿ ಕಾಣಿಸಿಕೊಂಡಿರುವ ಈ ಸೋಂಕಿನಿಂದ ಚೀನಾದ ಕೆಲ ಪ್ರಾಂತ್ಯದ ಆಸ್ಪತ್ರೆಗಳು ಭರ್ತಿಯಾಗಿದೆ. ಇದೇ ಸೋಂಕು ಅಮೆರಿಕದ ಮಕ್ಕಳಲ್ಲೂ ಕಾಣಿಸಿಕೊಂಡಿದೆ. ಚೀನಾದಲ್ಲಿ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ ಅಲರ್ಟ್ ಘೋಷಿಸಿದ ಭಾರತ ತೀವ್ರ ಮುನ್ನಚ್ಚರಿಕೆ ವಹಿಸಿತ್ತು. ಆದರೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಇದೀಗ 7 ಪ್ರಕರಣ ಪತ್ತೆಯಾಗಿದೆ ಅನ್ನೋ ವರದಿ ಆತಂಕ ಹೆಚ್ಚಿಸಿತ್ತು. ಈ ವರದಿ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ. ಭಾರತದಲ್ಲಿ ಚೀನಾ ಸೋಂಕು ಪತ್ತೆಯಾಗಿಲ್ಲ ಎಂದಿದೆ.
ಮಾಧ್ಯಮಗಳಲ್ಲಿನ ವರದಿ ಸತ್ಯಕ್ಕೆ ದೂರವಾಗಿದೆ. ಭಾರತದಲ್ಲಿ ನ್ಯೂಮೋನಿಯಾ ಪ್ರಕರಣಗಳ ಹೊಸದಲ್ಲ. ಇಧಕ್ಕೆ ಸೂಕ್ತ ಚಿಕತ್ಸೆಯೂ ಲಭ್ಯವಿದೆ. ಆದರೆ ಏಮ್ಸ್ ಆಸ್ಪತ್ರೆಯಲ್ಲಿ 611 ಮಾದರಿಯನ್ನು ಪರೀಕ್ಷೆ ಮಾಡಲಾದಿದೆ. ಇದರಲ್ಲಿ ನ್ಯೂಮೋನಿಯಾ ಬ್ಯಾಕ್ಟೀರಿಯಾ ಪ್ರಕರಣ ಪತ್ತೆಯಾಗಿಲ್ಲ. ಯಾರೂ ಆತಂಕಪಡುವು ಅಗತ್ಯವಿಲ್ಲ ಎಂದಿದೆ.
ಮಾಧ್ಯಮಗಳ ವರದಿಯಲ್ಲಿ ಒಟ್ಟು 67 ಮಾದರಿಯನ್ನು ಪರೀಕ್ಷೆ ನಡೆಸಲಾಗಿತ್ತು. ಈ ಪೈಕಿ 7 ಮಾದರಿಯಲ್ಲಿ ಪಾಸೀಟೀವ್ ಪತ್ತೆಯಾಗಿದೆ. 2023ರ ಎಪ್ರಿಲ್‌ನಿಂದ ಸೆಪ್ಟೆಂಬರ್ ವರೆಗಿನ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದೆ. ಲ್ಯಾನ್ಸೆಟ್ ಮೈಕ್ರೋಬ್ ನಡಸಿದ ಅಧ್ಯಯನದಲ್ಲಿ ಈ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. 7 ಪ್ರಕರಣ ಪೈಕಿ ಒಂದು ಪ್ರಕರಣ ಪಿಸಿಆರ್ ಪರೀಕ್ಷೆ ವೇಳೆ ದೃಢಪಟ್ಟಿದೆ. ಇನ್ನುಳಿದ 6 ಪ್ರಕರಣ ಐಜಿಎಂ ಎಲಿಸಾ ಟೆಸ್ಟ್ ವೇಳೆ ಪತ್ತೆಯಾಗಿದೆ ಎಂದು ವರದಿಯಾಗಿತ್ತು. ಆದರೆ ಈ ವರದಿ ಸುಳ್ಳು ಎಂದು ಕೇಂದ್ರ ಆರೋಗ್ಯ ಇಲಾಖೆ ಸೂಚಿಸಿದೆ.
ಆಸ್ಪತ್ರೆಗಳ ಸನ್ನದ್ಧತೆ ಪರಿಶೀಲಿಸಿ, ಚೀನಾ ನಿಗೂಢ ಸೋಂಕು ಬೆನ್ನಲ್ಲೇ ರಾಜ್ಯಗಳಿಗೆ ಕೇಂದ್ರ ಸೂಚನೆ!
ನ್ಯೂಮೋನಿಯಾ ಬ್ಯಾಕ್ಟೀರಿಯಾ (pneumonia bacteria) ಪ್ರಕರಣ ಕೊರೋನಾ (Covid) ರೀತಿ ಪಸರಿಸುವ ಸಾಧ್ಯತೆ ಕಡಿಮೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದೀಗ ಹೆಚ್ಚಿನ ಮಾದರಿ ಪರೀಕ್ಷಿಸಿ, ಪ್ರಕರಣದ ತೀವ್ರತೆಯನ್ನು ಅಳೆಯಲು ಏಮ್ಸ್ ಮುಂದಾಗಿದೆ.
ಭಾರತಕ್ಕೂ ಮೊದಲು ಅಮೆರಿಕದ ಓಹಿಯೋ ಮತ್ತು ಮಸಾಚ್ಯುಸೆಟ್ಸ್ ರಾಜ್ಯದ 3-14ರ ವಯೋಮಾನದ ಮಕ್ಕಳಲ್ಲಿ ಏಕಾಏಕಿ ಭಾರೀ ಪ್ರಮಾಣದ ನ್ಯುಮೋನಿಯಾ ಸೋಂಕು ಕಾಣಿಸಿಕೊಂಡಿತ್ತು. ಇತ್ತೀಚೆಗೆ ಚೀನಾದಲ್ಲೂ ಎಳೆಯ ವಯಸ್ಸಿನ ಮಕ್ಕಳಲ್ಲಿ ಇದೇ ರೀತಿಯಲ್ಲಿ ನ್ಯುಮೋನಿಯಾ ಮಾದರಿಯ ನಿಗೂಢ ಸೋಂಕು ಕಾಣಿಸಿಕೊಂಡು ಜಾಗತಿಕ ಮಟ್ಟದಲ್ಲಿ ಮತ್ತೊಂದು ಸಾಂಕ್ರಾಮಿಕ ಏಳುವ ಭೀತಿ ಕಾಣಿಸಿಕೊಂಡಿತ್ತು.
ಚೀನಾದಲ್ಲಿ ಆತಂಕ ಹುಟ್ಟಿಸಿದ ಮತ್ತೊಂದು ಮಹಾಮಾರಿ; ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಕಡ್ಡಾಯ
ಓಹಿಯೋ ವೈದ್ಯಕೀಯ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯಂತೆ ಗುರುವಾರ ಒಂದೇ ದಿನ 145 ಪ್ರಕರಣ ದಾಖಲಾಗಿದ್ದು, ವೈದ್ಯಕೀಯ ಇಲಾಖೆ ಇದನ್ನು ಸ್ಫೋಟ ಎಂದು ಪರಿಗಣಿಸಿ ತುರ್ತು ಕ್ರಮಗಳನ್ನು ಕೈಗೊಳ್ಳುತ್ತಿದೆ. ಸಾಮಾನ್ಯ ಜ್ವರ ಮತ್ತು ಶ್ವಾಸಕೋಶದಲ್ಲಿ ಅಲ್ಪ ಪ್ರಮಾಣದ ಉರಿ ಕಾಣಿಸಿಕೊಳ್ಳುವುದು ಇದರ ಲಕ್ಷಣಗಳಾಗಿದ್ದು, ವೈದ್ಯರು ರೋಗಿಗಳಿಗೆ ಔಷಧ ನೀಡಿ ಮನೆಯಲ್ಲೆ ಆರೈಕೆ ಮಾಡಿಕೊಳ್ಳುವಂತೆ ಸೂಚಿಸುತ್ತಿದ್ದಾರೆ.