ಶಿವಮೊಗ್ಗ: ಮೆಗ್ಗಾನ್‌ನಲ್ಲಿ ಮಗು​ವಿಗೆ Cochlear Implant ಶಸ್ತ್ರಚಿಕಿತ್ಸೆ

ಹುಟ್ಟಿನಿಂದಲೇ ಬರುವ ಕಿವುಡುತನಕ್ಕೆ ಇಲ್ಲಿನ ಸರ್ಕಾರಿ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೊಟ್ಟಮೊದಲ ಬಾರಿಗೆ ಅತ್ಯಾಧುನಿಕವಾದ ಕಾಕ್ಲಿಯರ್‌ ಇಂಪ್ಲಾಂಟ್‌ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ.

Cochlear Implant surgery for a child in Megan hospital shivamogga rav

ಶಿವಮೊಗ್ಗ ಮಾ.2) ಹುಟ್ಟಿನಿಂದಲೇ ಬರುವ ಕಿವುಡುತನಕ್ಕೆ ಇಲ್ಲಿನ ಸರ್ಕಾರಿ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೊಟ್ಟಮೊದಲ ಬಾರಿಗೆ ಅತ್ಯಾಧುನಿಕವಾದ ಕಾಕ್ಲಿಯರ್‌ ಇಂಪ್ಲಾಂಟ್‌ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ.

ಸಿಮ್ಸ್‌ನ ಇಎನ್‌ಟಿ(SIMS ENT) ವಿಭಾಗದ ಪ್ರಾಧ್ಯಾಪಕ ಡಾ. ಕೆ.ಎಸ್‌. ಗಂಗಾಧರ್‌(Dr KS Gangadhar) ಪತ್ರಿಕಾಗೋಷ್ಟಿಯಲ್ಲಿ ಈ ವಿಷಯ ತಿಳಿಸಿ, ಅನೇಕ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳನ್ನು ಮಾಡಿರುವ ಮತ್ತು ಅನೇಕ ಅತ್ಯಾಧುನಿಕ ಉಪಕರಣಗಳನ್ನು ಹೊಂದಿರುವ ಮೆಗ್ಗಾನ್‌ ಆಸ್ಪತ್ರೆ(Meggan Hospital)ಯ ಕಿವಿ, ಮೂಗು ಮತ್ತು ಗಂಟಲು ವಿಭಾಗಕ್ಕೆ ಈ ಶಸ್ತ್ರಚಿಕಿತ್ಸೆ ಇನ್ನೊಂದು ಗರಿಮೆ ತಂದಿದೆ ಎಂದು ಹೇಳಿದರು.

ಹೆಡ್ ಫೋನ್ ಬಳಕೆಯಿಂದ ಶ್ರವಣಶಕ್ತಿ ದೋಷ: ಕಿವುಡುತನದ ಭೀತಿ ತಡೆಯೋದು ಹೇಗೆ..?

ಶಿಕಾರಿಪುರ ತಾಲೂಕಿನ ನರಸಾಪುರ ಗ್ರಾಮದ ಭಾನಪ್ಪ(Bhanappa)ಮತ್ತು ರೇಖಾ(Rekha) ದಂಪತಿ ಪುತ್ರಿ ವರ್ಧಿನಿ(Vardhini) (5) ಹೆಸ​ರಿನ ಮಗುವಿಗೆ ಬುಧವಾರ ಈ ಶಸ್ತ್ರಚಿಕಿತ್ಸೆ ನಡೆಸಿದ್ದು, ಇದು ಯಶಸ್ವಿಯಾಗಿದೆ. ಈ ಶಸ್ತ್ರಚಿಕಿತ್ಸೆಯನ್ನು ಕರ್ನಾಟಕದ ಖ್ಯಾತ ಕಾಕ್ಲಿಯರ್‌ ಇಂಪ್ಲಾಂಟ್‌ ಸರ್ಜನ್‌ ಮತ್ತು ಕಿವಿ ಮೂಗು ಗಂಟಲು ತಜ್ಞರ ರಾಷ್ಟ್ರೀಯ ಅಧ್ಯಕ್ಷರಾಗಿರುವ ಬೆಂಗಳೂರಿನ ಡಾ.ಶಂಕರ್‌ ಮಡಿಕೇರಿ(Dr Shankar madikeri) ಅವರು ನೆರವೇರಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಪ್ರಾಧ್ಯಾಪಕ ಡಾ. ಕೆ.ಎಸ್‌.ಗಂಗಾಧರ, ಸಹ ಪ್ರಾಧ್ಯಾಪಕ ಡಾ.ಶ್ರೀಧರ್‌ ಎಸ್‌. ಮತ್ತು ಸೀನಿಯರ್‌ ರೆಸಿಡೆಂಟ್‌ ಡಾ.ಹಂಸ ಎಸ್‌. ಶೆಟ್ಟಿಅವರನ್ನು ತರಬೇತುಗೊಳಿಸಲಾಗುತ್ತಿದೆ. ಇನ್ನು ಮುಂದೆ ನಿರಂತರವಾಗಿ ಆಸ್ಪತ್ರೆಯಲ್ಲಿ ಕಾಕ್ಲಿಯಾರ್‌ ಇಂಪ್ಲಾಂಟ್‌ ಚಿಕಿತ್ಸೆಯು ಪ್ರಾರಂಭವಾಗಿದ್ದು, ಮಾಚ್‌ರ್‍ ತಿಂಗಳಲ್ಲಿ ಇನ್ನೂ ಮೂರು ಶಸ್ತ್ರಚಿ​ಕಿತ್ಸೆ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಸಿಮ್ಸ್‌ ನಿರ್ದೇಶಕ ಡಾ. ವಿರೂಪಾಕ್ಷಪ್ಪ ಮಾತನಾಡಿ, ಮೆಗ್ಗಾನ್‌ ಆಸ್ಪತ್ರೆ ರಾಜ್ಯದಲ್ಲೇ ಅತ್ಯಂತ ಸುಸಜ್ಜಿತ ಆಸ್ಪತ್ರೆಯಾಗಿದೆ. 1300 ಬೆಡ್‌ಗಳಿದ್ದು, ಪ್ರತಿನಿತ್ಯ 200 ಕ್ಕೂ ಹೆಚ್ಚು ಹೊರರೋಗಿಗಳು ಹಾಗೂ 900 ಒಳರೋಗಿಗಳು ವಿವಿಧ ಚಿಕಿತ್ಸೆ ಪಡೆಯುತ್ತಿದ್ದಾರೆ. ಅತ್ಯಾಧುನಿಕ ಸೌಲಭ್ಯಗಳಿವೆ. ನ್ಯೂರೋ, ಕಾರ್ಡಿಯಾಲಜಿ, ನೆಪೋ›ಲಜಿ ಸೇರಿದಂತೆ ಎಲ್ಲಾ ವಿಭಾಗದಲ್ಲಿ ತಜ್ಞರಿದ್ದಾರೆ. ಐ ಬ್ಯಾಂಕ್‌ ಸೌಲಭ್ಯವಿದೆ. ಪ್ರತಿನಿತ್ಯ 25 ಎಂಆರ್‌ಐ ಮತ್ತು 100 ಸಿಟಿ ಸ್ಕ್ಯಾ‌ನ್‌ ಪರೀಕ್ಷೆಗಳು ನಡೆಯುತ್ತದೆ. ಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಿ ಎಂದರು.

ರಾಷ್ಟ್ರೀಯ ಕಿವುಡುತನ ನಿರ್ಮೂಲನಾ(National Deafness Eradication) ಮತ್ತು ನಿಯಂತ್ರಣ ಯೋಜನೆಯ ಕಾರಣದಿಂದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಅತ್ಯಾಧುನಿಕ ವಾಕ್‌ ಶ್ರವಣ ಕೇಂದ್ರ ಪ್ರಾರಂಭಿಸಲಾಗಿದೆ. ಮತ್ತು ಹುಟ್ಟುವ ಎಲ್ಲಾ ಮಕ್ಕಳಿಗೆ ಅತ್ಯಾಧುನಿಕ ತಂತ್ರಜ್ಞಾನದಿಂದ ಕಿವುಡತನ ತಪಾಸಣೆ ಮಾಡಲಾಗುತ್ತಿದೆ. ಈ ವರ್ಷ ರಾಜ್ಯದಲ್ಲಿ 500 ಕಾಕ್ಲಿಯರ್‌ ಇಂಪ್ಲಾಂಟ್‌ ಶಸ್ತ್ರಚಿಕಿತ್ಸೆಯನ್ನು ಮಾಡುವ ಗುರಿಯನ್ನು ಹೊಂದಲಾಗಿದ್ದು, ಈ ಯೋಜನೆಯಡಿ ಶಸ್ತ್ರಚಿಕಿತ್ಸೆಗೆ ಮುಂಚಿನ ತಪಾಸಣೆ, ಕಾಕ್ಲಿಯರ್‌ ಇಂಪ್ಲಾಂಟ್‌ ಸಾಧನ, ಶಸ್ತ್ರಚಿಕಿತ್ಸೆ ಮತ್ತು ನಂತರದ ವಾಕ್‌ಶ್ರವಣ ಪುನಶ್ಚೇತನ ಚಿಕಿತ್ಸೆ ಇವೆಲ್ಲವೂ ಉಚಿತವಾಗಿರುತ್ತದೆ. ಹಾಗೂ ವಾಕ್‌ಶ್ರವಣ ಪುನಶ್ಚೇತನ ಚಿಕಿತ್ಸೆ ಕ್ಲಿಷ್ಟಕರವಾಗಿದ್ದು ಇದು 8 ರಿಂದ 10 ತಿಂಗಳು ಹಿಡಿಯುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮೆಗ್ಗಾನ್‌ ಜಿಲ್ಲಾ ಬೋಧನಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಶ್ರೀಧರ್‌ ಎಸ್‌ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಿದ್ದನಗೌಡ ಪಾಟೀಲ್‌, ಸಿಮ್ಸ್‌ ಆಡಳಿತಾಧಿಕಾರಿ ಶಿವಕುಮಾರ್‌, ಡಾ.ಚಂದ್ರಶೇಖರ್‌, ಡಾ. ಸುಹಾಸ್‌, ಡಾ. ಗೌತಮ್‌, ಡಾ. ಹಂಸ ಎಸ್‌. ಶೆಟ್ಟಿ, ಶುಶ್ರೂಷಕ ಅಧೀಕ್ಷರಾದ ಅನ್ನಪೂರ್ಣ, ಶೀಲಾ, ಲೀಲಾ ಮತ್ತಿತರರಿದ್ದರು.

1​0ರಿಂದ .12 ಲಕ್ಷ ಖರ್ಚಿನ ಚಿಕಿ​ತ್ಸೆ: ಡಾ.ಶಂಕರ್‌ ಮಡಿ​ಕೇರಿ

ಶಸ್ತ್ರಚಿಕಿತ್ಸೆ ನೆರವೇರಿಸಿದ ಡಾ.ಶಂಕರ್‌ ಮಡಿಕೇರಿ ಮಾತನಾಡಿ, ಶಸ್ತ್ರಚಿಕಿತ್ಸೆ ನಂತರ ಮಗುವಿನ ಪೋಷಕರು ಮಾಡುವ ಉಪಚಾರದಿಂದ ಮತ್ತು ಮಗುವಿಗೆ ನೀಡುವ ತರಬೇತಿಯಿಂದ ಈ ಚಿಕಿತ್ಸೆ ಯಶಸ್ವಿ ಆಗುತ್ತದೆ. 5 ವರ್ಷದೊಳಗಿನ ಮಕ್ಕಳಲ್ಲಿ ಈ ಶಸ್ತ್ರಚಿಕಿತ್ಸೆ ಯಶಸ್ಸು ನೂರಕ್ಕೆ ನೂರರಷ್ಟು, ಅದಕ್ಕಿಂತ ಮೇಲ್ಪಟ್ಟವರಿಗೆ ಯಶಸ್ಸಿನ ಪ್ರಮಾಣ ಕಡಿಮೆ ಇರುತ್ತದೆ. ಪೋಷಕರ ಸಹಕಾರ ಅತಿ ಮುಖ್ಯ ಎಂದರು.

ಹುಟ್ಟಿನಿಂದಲೇ ಸಂಪೂರ್ಣ ಕಿವುಡಾದ ಮಕ್ಕಳಿಗೆ ಶ್ರವಣ ಸಾಧನಗಳು ಉಪಯೋಗಕ್ಕೆ ಬರುವುದಿಲ್ಲ. ಇಂತಹ ಮಕ್ಕಳಿಗೆ ವರದಾನವಾಗಿ ಬಂದಿರುವುದು ಈ ಕಾಕ್ಲಿಯರ್‌ ಇಂಪ್ಲಾಂಟ್‌ ಶಸ್ತ್ರ ಚಿಕಿತ್ಸೆಯಾಗಿದೆ. ವಾಸ್ತವವಾಗಿ ಈ ಶಸ್ತ್ರಚಿಕಿತ್ಸೆ ದುಬಾರಿಯಾಗಿದ್ದು, ಸುಮಾರು .10 ರಿಂದ .12 ಲಕ್ಷ ಖರ್ಚಾಗುತ್ತದೆ. ಎಲ್ಲರಿಗೂ ಖರ್ಚು ಭರಿಸಲು ಸಾಧ್ಯ ಆಗುವುದಿಲ್ಲ. ಈ ಹಿಂದೆ ಕೇಂದ್ರ ಸರ್ಕಾರ ಎಡಿಐಪಿ ಯೋಜನೆಯಡಿ ಇದರ ವೆಚ್ಚ ಭರಿಸುತ್ತಿದ್ದರೂ ಹೆಚ್ಚಿನ ಪ್ರಮಾಣದ ಅನುದಾನ ದೊರೆಯುತ್ತಿರಲಿಲ್ಲ. ಹೀಗಾಗಿ ರಾಜ್ಯ ಸರ್ಕಾರವು ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಈ ಚಿಕಿತ್ಸೆಯನ್ನು ಸೇರಿಸಿದ್ದು, ಇದನ್ನು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಂಪೂರ್ಣ ಉಚಿತವಾಗಿ ಮಾಡಲಾಗುವುದು ಎಂದರು.

ಕಿವುಡುತನದ ಬಗ್ಗೆ ಜಾಗೃತಿ ಮೂಡಿಸಲು ಶುರುವಾಯ್ತು World Hearing Day

ಮಕ್ಕಳು ಹುಟ್ಟುವಾಗಲೇ ಕಿವುಡತನ ಬಂದಿರುತ್ತದೆ. ಇದರಲ್ಲಿ ಶೇ.50ರಷ್ಟುಎಂದರೆ ಒಂದು ಮಗುವಿಗೆ ಕಿವುಡುತನ ಅಲ್ಪ ಪ್ರಮಾಣದಲ್ಲಿದ್ದು ಅದನ್ನು ವಿವಿಧ ಸುಲಭ ಚಿಕಿತ್ಸೆ, ಹಿಯರಿಂಗ್‌ ಏಯ್ಡ್‌ ಅಥವಾ ಶ್ರವಣ ಸಾಧನಗಳನ್ನು ಬಳಸಿ ಪುನಶ್ಚೇತನಗೊಳಿಸಬಹುದು. ಆದರೆ ಹುಟ್ಟುವಾಗಲೇ ಸಂಪೂರ್ಣ ಕಿವುಡುತನ ಇರುವ ಮಕ್ಕಳಿಗೆ ಕಿವಿಯ ಒಳಗಡೆ ಇರುವ ಶ್ರವಣಕ್ಕೆ ಸಂಬಂಧಿಸಿದ ನರಗಳು ಕೆಲಸ ಮಾಡುವುದಿಲ್ಲ. ಆದ್ದರಿಂದ ಇವರಿಗೆ ಶ್ರವಣ ಸಾಧನ ಕೆಲಸ ಮಾಡುವುದಿಲ್ಲ. ಕಳೆದ 50 ರಿಂದ 60 ವರ್ಷಗಳಿಂದ ಇದರ ಬಗ್ಗೆ ನಿರಂತರವಾಗಿ ಸಂಶೋಧನೆಗಳು ನಡೆದಿದ್ದರೂ, 15ರಿಂದ 20 ವರ್ಷಗಳಿಂದೀಚಿಗೆ ಇದು ಚೆನ್ನಾಗಿ ಅಭಿವೃದ್ಧಿಯಾಗಿದೆ. ಭಾರತದಲ್ಲಿ ಕಳೆದ 10 ವರ್ಷಗಳಿಂದ ಇದು ಜನಪ್ರಿಯ

Latest Videos
Follow Us:
Download App:
  • android
  • ios