Covid Case: ದೇಶದಲ್ಲಿ ಹೆಚ್ತಿದೆ ಕೋವಿಡ್ ಸೋಂಕು, 5676 ಹೊಸ ಪ್ರಕರಣ, 21 ಮಂದಿ ಸಾವು
ದೇಶದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ತಿದೆ. ಮಂಗಳವಾರ 24 ಗಂಟೆಗಳಲ್ಲಿ 5676 ಹೊಸ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ ಸಕ್ರಿಯ ಕೇಸು 37093ಕ್ಕೆ ಏರಿಕೆಯಾಗಿದೆ. 21 ಮಂದಿ ಸಾವನ್ನಪ್ಪಿದ್ದಾರೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮಂಗಳವಾರ 5676 ಹೊಸ ಪ್ರಕರಣಗಳು ದಾಖಲಾಗಿದೆ. ಇದೇ ಅವಧಿಯಲ್ಲಿ 21 ಜನ ಸೋಂಕಿತರು ಸಾವನ್ನಪ್ಪಿದ್ದು, ಈ ಮೂಲಕ ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 5.31 ಲಕ್ಷದಷ್ಟಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 37,093 ರಷ್ಟಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈವರೆಗೆ 4.47 ಕೋಟಿ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಷ್ಟ್ರೀಯ ಚೇತರಿಕೆ ಪ್ರಮಾಣವು ಶೇ.98.73 ರಷ್ಟಾಗಿದೆ. ದೇಶದಲ್ಲಿ ಈವರಗೆ ಒಟ್ಟು 220.66 ಕೋಟಿ ಡೋಸ್ ಕೋವಿಡ್ ಲಸಿಕೆಗಳನ್ನು ವಿತರಿಸಲಾಗಿದೆ.
ಕೋವಿಡ್ ವೈರಸ್ ಹೊಸ ರೂಪಾಂತರಿ ಎಕ್ಸ್‌ಬಿಬಿ1 22 ರಾಜ್ಯಗಳಲ್ಲಿ ಪತ್ತೆ
ಭಾರತದಲ್ಲಿ ಕೋವಿಡ್ ವೈರಸ್‌ನ ಎಕ್ಸ್‌ಬಿಬಿ 1.16.1 ಸಾಕಷ್ಟುರೂಪಾಂತರಗೊಂಡಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಕೆ ಬೆನ್ನಲ್ಲೇ, ಎಕ್ಸ್‌ಬಿಬಿ 1.16.1ನ ರೂಪಾಂತರಿ ಉಪತಳಿಯಾದ ಎಕ್ಸ್‌ಬಿಬಿ1 22 ರಾಜ್ಯಗಳಲ್ಲಿ ಪತ್ತೆಯಾಗಿದೆ. ಈ ಉಪತಳಿಯ (Sub variant) 1700 ಪ್ರಕರಣಗಳು ಇದುವರೆಗೂ ದೃಢಪಟ್ಟಿದೆ ಎಂದು ಇನ್ಸಾಕಾಗ್ ಮಾಹಿತಿ ನೀಡಿದೆ. ಒಮಿಕ್ರೋನ್‌ನ ಎಕ್ಸ್‌ಬಿಬಿ 1.16 ರೂಪಾಂತರಗೊಂಡು ಎಕ್ಸ್‌ಬಿಬಿ 1.16.1 ರೂಪ ತಳೆದಿತ್ತು. ಅದು ಕಳೆದ ಒಂದು ತಿಂಗಳನಿಂದ ದೇಶಾದ್ಯಂತ ದಿಢೀರನೆ ಹೊಸ ಪ್ರಕರಣಗಳ ಏರಿಕೆಗೆ ಕಾರಣವಾಗಿತ್ತು. ಆದರೆ ಇದು ಹೆಚ್ಚು ಸಾಂಕ್ರಾಮಿಕವಾಗಿದ್ದರೂ, ಆಸ್ಪತ್ರೆ ದಾಖಲಾತಿ ಹೆಚ್ಚಿರಲಿಲ್ಲ.
Covid Cases: ಕೋವಿಡ್ ಎದುರಿಸಲು ಸಿದ್ಧರಾಗಿ, ರಾಜ್ಯಗಳಿಗೆ ಕೇಂದ್ರ ಸೂಚನೆ
ಮತ್ತೆ ಕೋವಿಡ್ ಭೀತಿ, ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
ಇತ್ತೀಚಿನ ಲಭ್ಯವಿರುವ ಮಾಹಿತಿಯ ಪ್ರಕಾರ, ಭಾರತದಲ್ಲಿ ಎಂಟು ರಾಜ್ಯಗಳು ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳನ್ನು ವರದಿ ಮಾಡುತ್ತಿವೆ. ಇವುಗಳಲ್ಲಿ ಕೇರಳ, ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ 10ಕ್ಕೂ ಹೆಚ್ಚು ಜಿಲ್ಲೆಗಳು ಶೇಕಡಾ 10ಕ್ಕಿಂತ ಹೆಚ್ಚು ಪಾಸಿಟಿವ್ ಕೇಸ್ ಹೊಂದಿವೆ. ಈ ಪೈಕಿ ಮೂರು ರಾಜ್ಯಗಳು ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿವೆ (Mask compulsory). ಅವು ಯಾವುದೆಲ್ಲಾ ಅನ್ನೋ ಮಾಹಿತಿ ಇಲ್ಲಿದೆ.
ಕೇರಳ: ಗರ್ಭಿಣಿಯರು, ವೃದ್ಧರು, ಮಕ್ಕಳು ಮತ್ತು ವಯೋಸಹಜ ಕಾಯಿಲೆ ಇರುವವರಿಗೆ ಮಾಸ್ಕ್ ಕಡ್ಡಾಯವಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಕೇರಳದಲ್ಲಿ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕೋವಿಡ್ ಸೋಂಕು ತುಸು ಹೆಚ್ಚೇ ಇದೆ. ಶನಿವಾರ ರಾಜ್ಯದಲ್ಲಿ 1,801 ಜನರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವೆ (Health minister) ವೀಣಾ ಜಾರ್ಜ್ ಶನಿವಾರ ಮಾಸ್ಕ್ ಕಡ್ಡಾಯಯ ಬಗ್ಗೆ ಆದೇಶ ಹೊರಡಿಸಿದ್ದಾರೆ.ರು.
ಭಾರತದಲ್ಲಿ ಕೋವಿಡ್‌ನ ಮತ್ತಷ್ಟು ರೂಪಾಂತರ, ಸೋಂಕು ಹೆಚ್ಚಳ ಸಾಧ್ಯತೆ: WHO
ಪುದುಚೇರಿ: ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಕಾರಣ ಪುದುಚೇರಿ ಆಡಳಿತವು ಶುಕ್ರವಾರ ಕೇಂದ್ರಾಡಳಿತ ಪ್ರದೇಶದಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಕೊರೋನಾ ವೈರಸ್ ಪ್ರಕರಣಗಳ ಇತ್ತೀಚಿನ ಉಲ್ಬಣವನ್ನು ಎತ್ತಿ ಹಿಡಿದ ಜಿಲ್ಲಾಧಿಕಾರಿ ಇ ವಲ್ಲವನ್ ಅವರು,'ಮುಂದಿನ ದಿನಗಳಲ್ಲಿ ಕೋವಿಡ್ -19 ರ ಪ್ರಸರಣ ಹೆಚ್ಚಳದ ಅಪಾಯವನ್ನು ಕಡಿಮೆ ಮಾಡಲು ಆಡಳಿತವು ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಹರಿಯಾಣ: ಹರಿಯಾಣ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಶುಕ್ರವಾರ ಹರ್ಯಾಣದಲ್ಲಿ 407 ಮಂದಿಗೆ ಸೋಂಕು ತಗುಲಿದೆ. ಮಾಹಿತಿಯ ಪ್ರಕಾರ, ಹರಿಯಾಣದ ಅರ್ಧದಷ್ಟು ಕೋವಿಡ್ ಪ್ರಕರಣಗಳು ಗುರುಗ್ರಾಮ್ ಜಿಲ್ಲೆಯಿಂದ ದಾಖಲಾಗಿವೆ ಎಂದು ರಾಜ್ಯದ ಆರೋಗ್ಯ ಇಲಾಖೆ ಶುಕ್ರವಾರ ಬುಲೆಟಿನ್‌ನಲ್ಲಿ ತಿಳಿಸಿದೆ. ಈ ವಾರ ಎರಡು ಕೋವಿಡ್ ಸಂಬಂಧಿತ ಸಾವುಗಳು ಸಂಭವಿಸಿವೆ.