ದೇಶದಲ್ಲಿ 10000 ಗಡಿ ದಾಟಿದ ಕೋವಿಡ್, ಎಂಟು ತಿಂಗಳಲ್ಲೇ ಮೊದಲು
ದೇಶದಲ್ಲಿ ನಿನ್ನೆ ಒಂದೇ ದಿನ 10,158 ಹೊಸ ಕೋವಿಡ್ ಪ್ರಕರಣ ದಾಖಲಾಗಿವೆ. ಇದು ಕಳೆದ 8 ತಿಂಗಳ ಬಳಿಕ ದಾಖಲಾದ ಗರಿಷ್ಠ ಪ್ರಮಾಣವಾಗಿದೆ. ದೇಶದಲ್ಲಿ ಈ ವರೆಗೆ 4.47 ಕೋಟಿ ಜನರಿಗೆ ಕೋವಿಡ್ ತಗುಲಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
ನವದೆಹಲಿ: ದೇಶದಲ್ಲಿ ಮತ್ತೆ ಕೋವಿಡ್ ಸಾಂಕ್ರಾಮಿಕ ತೀವ್ರವಾಗಿ ಹೆಚ್ಚುತ್ತಿದ್ದು ಗುರುವಾರ ಪ್ರಕರಣಗಳ ಸಂಖ್ಯೆ 10 ಸಾವಿರದ ಗಡಿ ದಾಟಿದೆ ಹಾಗೂ ಒಂದೇ ದಿನ 10,158 ಹೊಸ ಕೋವಿಡ್ ಪ್ರಕರಣ ದಾಖಲಾಗಿವೆ. ಇದು ಕಳೆದ 8 ತಿಂಗಳ ಬಳಿಕ ದಾಖಲಾದ ಗರಿಷ್ಠ ಪ್ರಮಾಣವಾಗಿದೆ. ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆ ಹಾಗೂ ಗುಣಮುಖರ ಪ್ರಮಾಣ ಇಳಿಕೆ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 44,998 ಕ್ಕೆ ಏರಿಕೆಯಾಗಿದೆ. ಇನ್ನು ದೈನಂದಿನ ಹಾಗೂ ವಾರದ ಪಾಸಿಟಿವಿಟಿ ದರಗಳು ಕ್ರಮವಾಗಿ ಹೆಚ್ಚು ಎನ್ನಬಹುದಾದ 4.42 ಹಾಗೂ 4.02 ರಷ್ಟುದಾಖಲಾಗಿವೆ. ಯಾವುದೇ ಸಾವು ವರದಿಯಾಗಿಲ್ಲ.
ಚೇತರಿಕೆಯ ಪ್ರಮಾಣವು 98.71 ರಷ್ಟುದಾಖಲಾಗಿದ್ದು ದೇಶದಲ್ಲಿ ಈ ವರೆಗೆ 4.47 ಕೋಟಿ ಜನರಿಗೆ ಕೋವಿಡ್ ತಗುಲಿದೆ. ಒಟ್ಟು 220.66 ಕೋಟಿ ಡೋಸ್ ಕೋವಿಡ್ ಲಸಿಕೆಗಳ(Covid vaccine) ವಿತರಣೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ (Health ministry) ತಿಳಿಸಿದೆ.
Covid Cases: ಕೋವಿಡ್ ಎದುರಿಸಲು ಸಿದ್ಧರಾಗಿ, ರಾಜ್ಯಗಳಿಗೆ ಕೇಂದ್ರ ಸೂಚನೆ
ಮತ್ತೆ ಕೋವಿಡ್ ಭೀತಿ, ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
ಇತ್ತೀಚಿನ ಲಭ್ಯವಿರುವ ಮಾಹಿತಿಯ ಪ್ರಕಾರ, ಭಾರತದಲ್ಲಿ ಎಂಟು ರಾಜ್ಯಗಳು ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳನ್ನು ವರದಿ ಮಾಡುತ್ತಿವೆ. ಇವುಗಳಲ್ಲಿ ಕೇರಳ, ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ 10ಕ್ಕೂ ಹೆಚ್ಚು ಜಿಲ್ಲೆಗಳು ಶೇಕಡಾ 10ಕ್ಕಿಂತ ಹೆಚ್ಚು ಪಾಸಿಟಿವ್ ಕೇಸ್ ಹೊಂದಿವೆ. ಈ ಪೈಕಿ ಮೂರು ರಾಜ್ಯಗಳು ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿವೆ (Mask compulsory). ಅವು ಯಾವುದೆಲ್ಲಾ ಅನ್ನೋ ಮಾಹಿತಿ ಇಲ್ಲಿದೆ.
ಕೇರಳ
ಗರ್ಭಿಣಿಯರು, ವೃದ್ಧರು, ಮಕ್ಕಳು ಮತ್ತು ವಯೋಸಹಜ ಕಾಯಿಲೆ ಇರುವವರಿಗೆ ಮಾಸ್ಕ್ ಕಡ್ಡಾಯವಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಶನಿವಾರ ಹೇಳಿದ್ದಾರೆ. ಕೇರಳದಲ್ಲಿ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕೋವಿಡ್ ಸೋಂಕು ತುಸು ಹೆಚ್ಚೇ ಇದೆ. ಶನಿವಾರ ರಾಜ್ಯದಲ್ಲಿ 1,801 ಜನರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವೆ (Health minister) ವೀಣಾ ಜಾರ್ಜ್ ಶನಿವಾರ ಮಾಸ್ಕ್ ಕಡ್ಡಾಯಯ ಬಗ್ಗೆ ಆದೇಶ ಹೊರಡಿಸಿದ್ದಾರೆ. 60 ವರ್ಷ ಮೇಲ್ಪಟ್ಟವರಲ್ಲಿ ಮತ್ತು ಮಧುಮೇಹ (Diabetes)ದಂತಹ ಜೀವನಶೈಲಿ ಕಾಯಿಲೆ ಇರುವವರಲ್ಲಿ ಹೆಚ್ಚಿನ ಸಾವುಗಳು (Death) ವರದಿಯಾಗಿವೆ ಎಂದು ಸಚಿವರು ಹೇಳಿದರು.
ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಲು ಉನ್ನತ ಮಟ್ಟದ ಸಭೆ ನಡೆಸಿದ ನಂತರ ಸಚಿವರು ಮಾತನಾಡಿ, ಕೋವಿಡ್ ಸಂಬಂಧಿತ ಸಾವುಗಳು ಹೆಚ್ಚಾಗಿ 60 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಮತ್ತು ಮಧುಮೇಹದಂತಹ ಕಾಯಿಲೆ ಇರುವವರಲ್ಲಿ ವರದಿಯಾಗುತ್ತಿವೆ. ಹೀಗಾಗಿ ಗರ್ಭಿಣಿಯರು, ವೃದ್ಧರು ಮತ್ತು ವಯೋಸಹಜ ಕಾಯಿಲೆ (Disease) ಇರುವವರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದಿದ್ದಾರೆ. ಕೇರಳದಲ್ಲಿ 1,801 ಕೋವಿಡ್-19 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವರ ಕಚೇರಿ ಹೇಳಿಕೆಯಲ್ಲಿ ತಿಳಿಸಿದ್ದು, ಎರ್ನಾಕುಲಂ, ತಿರುವನಂತಪುರಂ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ.
ಭಾರತದಲ್ಲಿ ಕೋವಿಡ್‌ನ ಮತ್ತಷ್ಟು ರೂಪಾಂತರ, ಸೋಂಕು ಹೆಚ್ಚಳ ಸಾಧ್ಯತೆ: WHO
ಪುದುಚೇರಿ: ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಕಾರಣ ಪುದುಚೇರಿ ಆಡಳಿತವು ಶುಕ್ರವಾರ ಕೇಂದ್ರಾಡಳಿತ ಪ್ರದೇಶದಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಕೊರೋನಾ ವೈರಸ್ ಪ್ರಕರಣಗಳ ಇತ್ತೀಚಿನ ಉಲ್ಬಣವನ್ನು ಎತ್ತಿ ಹಿಡಿದ ಜಿಲ್ಲಾಧಿಕಾರಿ ಇ ವಲ್ಲವನ್ ಅವರು,'ಮುಂದಿನ ದಿನಗಳಲ್ಲಿ ಕೋವಿಡ್ -19 ರ ಪ್ರಸರಣ ಹೆಚ್ಚಳದ ಅಪಾಯವನ್ನು ಕಡಿಮೆ ಮಾಡಲು ಆಡಳಿತವು ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಹರಿಯಾಣ: ಹರಿಯಾಣ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಶುಕ್ರವಾರ ಹರ್ಯಾಣದಲ್ಲಿ 407 ಮಂದಿಗೆ ಸೋಂಕು ತಗುಲಿದೆ. ಮಾಹಿತಿಯ ಪ್ರಕಾರ, ಹರಿಯಾಣದ ಅರ್ಧದಷ್ಟು ಕೋವಿಡ್ ಪ್ರಕರಣಗಳು ಗುರುಗ್ರಾಮ್ ಜಿಲ್ಲೆಯಿಂದ ದಾಖಲಾಗಿವೆ ಎಂದು ರಾಜ್ಯದ ಆರೋಗ್ಯ ಇಲಾಖೆ ಶುಕ್ರವಾರ ಬುಲೆಟಿನ್‌ನಲ್ಲಿ ತಿಳಿಸಿದೆ. ಈ ವಾರ ಎರಡು ಕೋವಿಡ್ ಸಂಬಂಧಿತ ಸಾವುಗಳು ಸಂಭವಿಸಿವೆ.