Asianet Suvarna News Asianet Suvarna News

Rabies: ಉಚಿತ ರೇಬಿಸ್‌ ಲಸಿಕೆ ಅಭಿಯಾನ: ಸಚಿವ ಚವ್ಹಾಣ್‌

ಮಾರಣಾಂತಿಕ ಪ್ರಾಣಿಜನ್ಯ ರೋಗವಾಗಿರುವ ರೇಬಿಸ್‌ ತಡೆಗಟ್ಟುವ ನಿಟ್ಟಿನಲ್ಲಿ 15 ದಿನಗಳ ಕಾಲ ರಾಜ್ಯಾದ್ಯಂತ ರೇಬಿಸ್‌ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್‌ ತಿಳಿಸಿದ್ದಾರೆ.

Free Rabies Vaccination Campaign says Minister Chavan rav
Author
First Published Sep 16, 2022, 4:10 AM IST

ಬೆಂಗಳೂರು (ಸೆ.16) : ಮಾರಣಾಂತಿಕ ಪ್ರಾಣಿಜನ್ಯ ರೋಗವಾಗಿರುವ ರೇಬಿಸ್‌ ತಡೆಗಟ್ಟುವ ನಿಟ್ಟಿನಲ್ಲಿ 15 ದಿನಗಳ ಕಾಲ ರಾಜ್ಯಾದ್ಯಂತ ರೇಬಿಸ್‌ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್‌ ತಿಳಿಸಿದ್ದಾರೆ. ನಗರದ ಕ್ವೀನ್ಸ್‌ ರಸ್ತೆಯ ಪಶು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ರೇಬಿಸ್‌ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರೇಬಿಸ್‌ ರೋಗದ ನಿರ್ಮೂಲನೆಗಾಗಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಸೆಪ್ಟೆಂಬರ್‌ 28ರಂದು ವಿಶ್ವ ರೇಬಿಸ್‌ ದಿನ ಆಚರಿಸಲಾಗುತ್ತಿದೆ. ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ವಿಶ್ವ ರೇಬಿಸ್‌ ದಿನ ಆಚರಿಸಲು 15 ದಿನಗಳ ಕಾಲ ಉಚಿತ ಲಸಿಕೆ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಜಾನುವಾರು ಸಂರಕ್ಷಣೆ: ಪುಣ್ಯಕೋಟಿ ದತ್ತು ಯೋಜನೆಗೆ ಜು. 28 ಚಾಲನೆ

ಪ್ರತಿ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಪುರಸಭೆ, ನಗರಸಭೆ, ಸಹಯೋಗದೊಂದಿಗೆ ಲಸಿಕಾ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಎಲ್ಲಾ ಉಪನಿರ್ದೇಶಕರುಗಳಿಗೆ ನಿರ್ದೇಶನ ನೀಡಲಾಗಿದೆ. ನಾಯಿ, ಬೆಕ್ಕು, ಕುರಿ, ಮೇಕೆ, ಹಸು, ಎಮ್ಮೆ, ಕೋತಿ, ತೋಳ, ನರಿ, ಕರಡಿ, ಮುಂಗುಸಿ, ಹಂದಿ, ಕತ್ತೆ, ಕುದುರೆ ಮತ್ತು ಒಂಟೆಗಳಿಂದ ರೇಬಿಸ್‌ ಹರಡುತ್ತದೆ. ರಾಜ್ಯದಲ್ಲಿ ಒಟ್ಟು 13 ಲಕ್ಷ ನಾಯಿಗಳಿವೆ ಎಂದು ಅಂದಾಜಿಸಲಾಗಿದ್ದು, ಎಲ್ಲ ಜಿಲ್ಲೆಗಳಲ್ಲಿರುವ ಶೇ.50ರಷ್ಟುನಾಯಿಗಳಿಗೆ ಲಸಿಕೆ ಹಾಕುವ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದರು.

ಪಶುಸಂಗೋಪನೆ ಇಲಾಖೆ ನಿರ್ದೇಶಕ ಡಾ.ಮಂಜುನಾಥ್‌ ಪಾಳೇಗಾರ್‌, ಅಪರ ನಿರ್ದೇಶಕ ಡಾ.ಪ್ರಸಾದ್‌ ಮೂರ್ತಿ, ರೇಬಿಸ್‌ ತಜ್ಞ ಡಾ.ಶ್ರೀಕೃಷ್ಣ ಇಸ್ಳೂರ, ಬಿಬಿಎಂಪಿ ಪಶುವೈದ್ಯಕೀಯ ವಿಭಾಗದ ಉಪ ನಿರ್ದೇಶಕ ಡಾ.ರವಿ ಮತ್ತಿತರರಿದ್ದರು.

ಪುಣ್ಯಕೋಟಿ ದತ್ತು ಯೋಜನೆ ಯಶಸ್ಸಿಗೆ ಸಚಿವ ಚವ್ಹಾಣ್‌ ಕರೆ

Follow Us:
Download App:
  • android
  • ios