ABHA Card: ಮಾರ್ಚ್‌ನೊಳಗೆ ಎಲ್ಲರಿಗೂ ಆರೋಗ್ಯ ಕಾರ್ಡ್‌: ಸುಧಾಕರ್‌

  • ಮಾಚ್‌ರ್‍ನೊಳಗೆ ಎಲ್ಲರಿಗೂ ಆರೋಗ್ಯ ಕಾರ್ಡ್‌: ಸುಧಾಕರ್‌
  • ಡಿಸೆಂಬರ್‌ ಅಂತ್ಯದೊಳಗೆ 50% ಜನರಿಗೆ ಕಾರ್ಡ್‌ ವಿತರಣೆ ಗುರಿ
  • ಆರೋಗ್ಯ ಕಾರ್ಡ್‌ ವಿತರಣೆಯಲ್ಲಿ ಇಡೀ ದೇಶಕ್ಕೆ ಕರ್ನಾಟಕ ಮಾದರಿ
Health card for all in a month says dr sudhakar rav

ಬೆಂಗಳೂರು (ನ.15) ರಾಜ್ಯದಲ್ಲಿ ಡಿಸೆಂಬರ್‌ ವೇಳೆಗೆ ಶೇ.50ರಷ್ಟುಮಂದಿಗೆ ಮತ್ತು ಮುಂದಿನ ವರ್ಷ ಮಾಚ್‌ರ್‍ನೊಳಗೆ ಎಲ್ಲಾ ಅರ್ಹರಿಗೂ ‘ಆಯುಷ್ಮಾನ್‌ ಭಾರತ್‌ ಪ್ರಧಾನಮಂತ್ರಿ ಜನಾರೋಗ್ಯ ಯೋಜನಾ ಆರೋಗ್ಯ ಕರ್ನಾಟಕ (ಎಬಿ-ಪಿಎಂಜೆಎವೈ-ಎಆರ್‌ಕೆ) ಕಾರ್ಡ್‌’ಗಳನ್ನು ವಿತರಿಸುವ ಗುರಿ ಹೊಂದಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಆಯುಷ್ಮಾನ್‌ ಕಾರ್ಡ್‌ ವಿತರಣೆಯಲ್ಲಿ ಕರ್ನಾಟಕ ಇಡೀ ದೇಶದಲ್ಲಿಯೇ ಮಾದರಿ ರಾಜ್ಯವಾಗಿ ಹೊರಹೊಮ್ಮಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಒಂದು ಕೋಟಿ ಎಬಿ-ಪಿಎಂಜೆಎವೈ-ಎಆರ್‌ಕೆ ಕಾರ್ಡ್‌ಗಳನ್ನು ಸಿದ್ಧಪಡಿಸಲಾಗಿದ್ದು, ಶೀಘ್ರದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕಾರ್ಡ್‌ಗಳನ್ನು ಎಲ್ಲಾ ಅರ್ಹರಿಗೆ ವಿತರಿಸಲಾಗುವುದು. ಈ ಮೂಲಕ ಡಿಸೆಂಬರ್‌ ವೇಳೆಗೆ ರಾಜ್ಯದ ಶೇ.50 ರಷ್ಟುಅರ್ಹರಿಗೆ ಕಾರ್ಡ್‌ ವಿತರಿಸಲಾಗುವುದು ಎಂದರು.

ABHA Card ನಿಂದ ರೋಗಿಯ ಎಲ್ಲಾ ಚಿಕಿತ್ಸೆ ದಾಖಲೆ ಲಭ್ಯ

ಗ್ರಾಮ ಒನ್‌ ಕೇಂದ್ರಗಳಲ್ಲಿ ಕಾರ್ಡ್‌ ನೋಂದಣಿ ಕಾರ್ಯ ನಡೆಯುತ್ತಿದ್ದು, ದೈನಂದಿನ ಗುರಿ ತಲುಪಲು ಪ್ರಯತ್ನಿಸಲಾಗುತ್ತಿದೆ. ಇದಕ್ಕಾಗಿ ದೊಡ್ಡ ಪ್ರಮಾಣದ ಶಿಬಿರಗಳನ್ನು ಕೂಡ ಆಯೋಜಿಸಲಾಗುತ್ತಿದೆ. ಅನೇಕ ತಾಂತ್ರಿಕ ಸಮಸ್ಯೆಗಳ ಹೊರತಾಗಿಯೂ ಆಪರೇಟರ್‌ಗಳು ಬೆಳಿಗ್ಗೆ 6ರಿಂದ ರಾತ್ರಿ 11 ಗಂಟೆವರೆಗೆ ಅವಿರತವಾಗಿ ಕೆಲಸ ಮಾಡುತ್ತಿದ್ದಾರೆ. ಮನೆ ಮನೆಗೆ ತೆರಳಿ ನೋಂದಣಿ ಅಭಿಯಾನ ನಡೆಸಲಾಗುತ್ತಿದೆ. ಮುಂದಿನ ಮಾಚ್‌ರ್‍ ವೇಳೆಗೆ ರಾಜ್ಯದ ಎಲ್ಲಾ 5.09 ಕೋಟಿ ಅರ್ಹ ನಾಗರಿಕರಿಗೂ ಎಬಿ-ಪಿಎಂಜೆಎವೈ-ಎಆರ್‌ಕೆ ಕಾರ್ಡ್‌ಗಳನ್ನು ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.

ಚಿಕ್ಕಬಳ್ಳಾಪುರ, ಹಾವೇರಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಎಬಿ-ಪಿಎಂಜೆಎವೈ-ಎಆರ್‌ಕೆ ಕಾರ್ಯಕ್ರಮದಲ್ಲಿ ಅತ್ಯುತ್ತಮ ಸಾಧನೆ ಮಾಡಿವೆ. ಈ ಜಿಲ್ಲೆಗಳ ಮೂರನೇ ಒಂದರಷ್ಟುಫಲಾನುಭವಿಗಳನ್ನು ಈಗಾಗಲೇ ನೋಂದಣಿ ಮಾಡಲಾಗಿದೆ. ಆರೋಗ್ಯ ಇಲಾಖೆಯ ಕ್ಷೇತ್ರಾಧಿಕಾರಿಗಳು ಕಾರ್ಡ್‌ಗಳ ನೋಂದಣಿಗಾಗಿ ಅಭಿಯಾನ ನಡೆಸುತ್ತಿದ್ದಾರೆ. ಒಂದು ಕೋಟಿ ಕಾರ್ಡ್‌ಗಳ ನೋಂದಣಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು ಮತ್ತು ಜಿಲ್ಲಾ ಕುಷ್ಠರೋಗ ವಿಭಾಗದ ಅಧಿಕಾರಿಗಳ ಜಂಟಿ ಪ್ರಯತ್ನದಿಂದ ಇಂತಹ ಮಹತ್ವದ ಸಾಧನೆಯಾಗಿದೆ. ಜತೆಗೆ ಜಿಲ್ಲಾ ಆರೋಗ್ಯಾಧಿಕಾರಿಗಳು ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವಿವರಿಸಿದರು.

 

ಮುಂದಿನ ದಿನಗಳಲ್ಲಿ ಇನ್ನೂ 500 ಜನೌಷಧಿ ಮಳಿಗೆ ಸ್ಥಾಪನೆ: ಸಚಿವ ಸುಧಾಕರ್‌

ಏನಿದು ಎಬಿ-ಪಿಎಂಜೆಎವೈ-ಎಆರ್‌ಕೆ ಕಾರ್ಡ್‌?

ಎಲ್ಲರಿಗೂ ಆರೋಗ್ಯ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ 2018ರ ಮಾಚ್‌ರ್‍ 2ರಂದು ಆರೋಗ್ಯ ಕರ್ನಾಟಕ ಯೋಜನೆ ಪ್ರಾರಂಭಿಸಿತ್ತು. ಇದರಡಿ ಪ್ರಾಥಮಿಕ, ಮಾಧ್ಯಮಿಕ ಮತ್ತು ತೃತೀಯ ಹಂತದ ಆಸ್ಪತ್ರೆಗಳಲ್ಲಿ ಬಿಪಿಎಲ… ಕುಟುಂಬದವರಿಗೆ ಒಂದು ವರ್ಷಕ್ಕೆ 5 ಲಕ್ಷ ರು. ಮತ್ತು ಎಪಿಎಲ… ಕುಟುಂಬಗಳಿಗೆ ಶೇ.30ರಷ್ಟುಸಬ್ಸಿಡಿ ದರದಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿತ್ತು. ಬಳಿಕ ಕೇಂದ್ರ ಸರ್ಕಾರ ಎಲ್ಲರಿಗೂ ಆರೋಗ್ಯ ಸೌಲಭ್ಯ ಕಲ್ಪಿಸುವ ಆಯುಷ್ಮಾನ್‌ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಪ್ರಾರಂಭಿಸಿತು. ಈ ಹಿನ್ನೆಲೆ ಎರಡೂ ಯೋಜನೆ ಜತೆಗೂಡಿಸಿ ‘ಆಯುಷ್ಮಾನ್‌ ಭಾರತ್‌ ಪ್ರಧಾನಮಂತ್ರಿ ಜನಾರೋಗ್ಯ ಯೋಜನಾ ಆರೋಗ್ಯ ಕರ್ನಾಟಕ (ಎಬಿ-ಪಿಎಂಜೆಎವೈ-ಎಆರ್‌ಕೆ) ಹೆಸರಿನ ಕಾರ್ಡ್‌ಗಳನ್ನು ನೂತನವಾಗಿ ಸಿದ್ಧಪಡಿಸಿ ವಿತರಿಸಲಾಗುತ್ತಿದೆ. ಸದ್ಯ ಆಯುಷ್ಮಾನ್‌ ಭಾರತ್‌ ಆರೋಗ್ಯ ಕಾರ್ಡ್‌ ಹೊಂದಿರುವವರಿಗೆ ಹೊಸದಾಗಿ ಕೋ ಬ್ರಾಂಡೆಡ್‌ ಎಬಿ-ಪಿಎಂಜೆಎವೈ-ಎಆರ್‌ಕೆ ಕಾರ್ಡ್‌ಗಳನ್ನು ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

Latest Videos
Follow Us:
Download App:
  • android
  • ios