ದಿನೇದಿನೆ ಹೆಚ್ಚಾಗ್ತಿದೆ ಕಿಲ್ಲರ್ ಕೊರೊನಾ! ಇಂದು ಇಬ್ಬರು ಬಲಿ; 74 ಮಂದಿಗೆ ಪಾಸಿಟಿವ್!

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಗಳವಾರ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಮತ್ತು 74 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 464ಕ್ಕೆ ಏರಿಕೆಯಾಗಿದೆ.

Increase Covid case in karnataka today 2 deaths 74 positive cases rav

ಬೆಂಗಳೂರು (ಡಿ.26): ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಗಳವಾರ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಮತ್ತು 74 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 464ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 74 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 464ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ರಾಜ್ಯದಲ್ಲಿ 6,403 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಪಾಸಿಟಿವ್ ಪ್ರಮಾಣ ಶೇ. 1.15 ರಷ್ಟು ಇದೆ. ಬೆಂಗಳೂರಿನಲ್ಲಿ 2,104 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 57 ಮಂದಿಗೆ ಸೋಂಕು ದೃಢಪಟ್ಟಿದೆ. 

ರಾಜ್ಯಕ್ಕೆ ಎಂಟ್ರಿ ಕೊಟ್ಟ ಕೊವಿಡ್:ಒಂದೇ ದಿನದಲ್ಲಿ 125 ಜನರಿಗೆ ಸೋಂಕು, ಮೂರು ಸಾವು!

ಬೆಂಗಳೂರು ಗ್ರಾಮಾಂತರ ಮತ್ತು ಹಾಸನದಲ್ಲಿ ತಲಾ 4, ಚಿಕ್ಕಬಳ್ಳಾಪುರದಲ್ಲಿ 3, ಮಂಡ್ಯ ಮತ್ತು ಮೈಸೂರಿನಲ್ಲಿ ತಲಾ ಇಬ್ಬರು ಹಾಗೂ ಚಾಮರಾಜನಗರ ಮತ್ತು ವಿಜಯನಗರದಲ್ಲಿ ತಲಾ ಒಂದು ಪ್ರಕರಣ ವರದಿಯಾಗಿವೆ.

ಕರ್ನಾಟಕದಲ್ಲಿಯೇ 35 ಕೋವಿಡ್ ಉಪತಳಿ ಜೆಎನ್1 ಕೇಸ್‌ಗಳು ಪತ್ತೆ: ಬೆಂಗಳೂರು ಮತ್ತೆ ಕೊರೊನಾ ಹಾಟ್‌ಸ್ಪಾಟ್!

ಸೋಂಕಿತರಲ್ಲಿ 423 ಮಂದಿ ಮನೆ ಆರೈಕೆಗೆ ಒಳಗಾದರೆ, 41 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 16 ಮಂದಿ ತೀವ್ರ ನಿಗಾ ಘಟಕದಲ್ಲಿ ಹಾಗೂ 25 ಮಂದಿ ಸಾಮಾನ್ಯ ವಾರ್ಡ್‌ನಲ್ಲಿ ಇದ್ದಾರೆ. ಸೋಂಕಿತರಲ್ಲಿ 44 ಮಂದಿ ಇಂದು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Latest Videos
Follow Us:
Download App:
  • android
  • ios