ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಶುಕ್ರವಾರ 138 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 455ಕ್ಕೆ ಇಳಿಕೆಯಾಗಿದೆ.

ಬೆಂಗಳೂರು (ಜ.19): ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಶುಕ್ರವಾರ 138 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 455ಕ್ಕೆ ಇಳಿಕೆಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 52 ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ 138 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ಇಂದು ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬೆಂಗಳೂರು: ಮೊಬೈಲ್‌ ಕಳ್ಳನನ್ನು ಬೆನ್ನಟಿ ಹಿಡಿದ ಟ್ರಾಫಿಕ್ ಪೊಲೀಸರು!

ಇಂದು ಕೋವಿಡ್ ನಿಂದ 350 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 6837 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 2.01 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕೋವಿಡ್‌ ಸೋಂಕು ಕಮ್ಮಿಯಾದರೂ ಮುನ್ನೆಚ್ಚರಿಕೆ ಪಾಲಿಸಿ: ರಾಜ್ಯ ಸರ್ಕಾರ

ಸೋಂಕಿತರಲ್ಲಿ 417 ಮಂದಿ ಮನೆ ಆರೈಕೆಗೆ ಒಳಗಾದರೆ, 27 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 8 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.