ನೇತ್ರದಾನ ಮಾಡುವ ಸಂಕಲ್ಪ ಕೈಗೊಂಡಿರುವುದು ಸಾರ್ಥಕ ಭಾವ ಮೂಡಿಸಿದೆ| ನಮ್ಮ ಕಣ್ಣು ನಮ್ಮ ಮರಣದ ನಂತರ ಮತ್ತೊಬ್ಬರಿಗೆ ದಾರಿದೀಪವಾಗಲಿದೆ| ಪ್ರತಿಯೊಬ್ಬರು ನೇತ್ರದಾನ ಮಾಡುವ ಸಂಕಲ್ಪ ಮಾಡಬೇಕು ಎಂದು ಅವರು ಮನವಿ ಮಾಡಿದ ಸಚಿವ ಡಾ. ಕೆ.ಸುಧಾಕರ್‌| ನೇತ್ರದಾನ ಶಿಬಿರದ ವೇಳೆ ನೇತ್ರದಾನ ಮಾಡಲು ಒಪ್ಪಿಗೆ ಸೂಚಿಸಿದ 200 ಮಂದಿ| 

ಬೆಂಗಳೂರು(ಏ.08): ಮಿಂಟೋ ಆಸ್ಪತ್ರೆ ಆಯೋಜಿಸಿದ್ದ ನೇತ್ರದಾನ ಶಿಬಿರದಲ್ಲಿ ನೇತ್ರದಾನಕ್ಕೆ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ಅವರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದೇ ವೇಳೆ ಮಾತನಾಡಿದ ಸಚಿವ ಡಾ. ಕೆ.ಸುಧಾಕರ್‌ ಅವರು, ನೇತ್ರದಾನ ಮಾಡುವ ಸಂಕಲ್ಪ ಕೈಗೊಂಡಿರುವುದು ಸಾರ್ಥಕ ಭಾವ ಮೂಡಿಸಿದೆ. ನಮ್ಮ ಕಣ್ಣು ನಮ್ಮ ಮರಣದ ನಂತರ ಮತ್ತೊಬ್ಬರಿಗೆ ದಾರಿದೀಪವಾಗಲಿದೆ. ಪ್ರತಿಯೊಬ್ಬರು ನೇತ್ರದಾನ ಮಾಡುವ ಸಂಕಲ್ಪ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ನಾನೂ ಕೂಡ ನೇತ್ರ ದಾನ ಮಾಡುತ್ತೇನೆ: ಶಿವರಾಜ್‌ ಕುಮಾರ್

ಈ ನೇತ್ರದಾನ ಶಿಬಿರದ ವೇಳೆ ಸುಮಾರು 200 ಮಂದಿ ನೇತ್ರದಾನ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಮಿಂಟೋ ಆಸ್ಪತ್ರೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.