ಕೇರಳದಲ್ಲಿ ಡೇಂಜರಸ್ ನಿಫಾ ಆರ್ಭಟ, ಶಾಲಾ-ಕಾಲೇಜಿಗೆ ರಜೆ; ಲಾಕ್‌ಡೌನ್‌ ಘೋಷಿಸುತ್ತಾ ಸರ್ಕಾರ?

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪ್ರಕರಣ ವರದಿಯಾಗಿದೆ. ಇಂದು ಆರೋಗ್ಯ ಕಾರ್ಯಕರ್ತರೊಬ್ಬರಿಗೆ ನಿಫಾ ಪಾಸಿಟಿವ್ ಬಂದಿರುವ ಮೂಲಕ ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಕೋಝಿಕ್ಕೋಡ್‌ನಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದ್ದು, ಸರ್ಕಾರ ಶಾಲಾ-ಕಾಲೇಜಿಗೆ ರಜೆ ಘೋಷಿಸಿದೆ. 

Keralas New Nipah Case reacges 5, 706 On Contact List, lockdown in containment zone Vin

ದಕ್ಷಿಣದ ರಾಜ್ಯದಲ್ಲಿ ನಿಫಾ ವೈರಸ್‌ ದೊಡ್ಡ ಮಟ್ಟದ ಆತಂಕ ಸೃಷ್ಟಿಸಿದೆ. 2018ರ ಬಳಿಕ ಕೇರಳದಲ್ಲಿ ಕೆಲ ದಿನಗಳ ಹಿಂದೆ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್‌ ಬಾಂಗ್ಲಾದೇಶ ರೂಪಾಂತರವಾಗಿದ್ದು, ಬಹಳ ಅಪಾಯಕಾರಿಯಾಗಿದೆ. ಇಂದು ಆರೋಗ್ಯ ಕಾರ್ಯಕರ್ತರೊಬ್ಬರಿಗೆ ನಿಫಾ ಪಾಸಿಟಿವ್ ಬಂದಿರುವ ಮೂಲಕ ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್, ಮತ್ತೊಂದು ನಿಫಾ ವೈರಸ್ ಪ್ರಕರಣವನ್ನು ದೃಢಪಡಿಸಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಐದಕ್ಕೆ ತಲುಪಿದೆ ಎಂದು ಹೇಳಿದ್ದಾರೆ. ಕೋಝಿಕ್ಕೋಡ್‌ನ ಖಾಸಗಿ ಆಸ್ಪತ್ರೆಯಲ್ಲಿ 24 ವರ್ಷದ ಆರೋಗ್ಯ ಕಾರ್ಯಕರ್ತೆಯೊಬ್ಬರಿಗೆ ವೈರಸ್ ಇರುವುದು ಪತ್ತೆಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ನಿಫಾ ವೈರಸ್‌ ಸೋಂಕಿತರಲ್ಲಿ ಮರಣ ಪ್ರಮಾಣ ತೀರಾ ಹೆಚ್ಚಿದೆ ಎಂದು ಕೇರಳ ಆರೋಗ್ಯ ಸಚಿವೆ (Kerala health minister) ವೀಣಾ ಜಾರ್ಜ್‌ ತಿಳಿಸಿದ್ದಾರೆ. ಈಗಾಗಲೇ 5,706 ಮಂದಿ ಸೋಂಕಿತರ ಸಂಪರ್ಕ ಪಟ್ಟಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಕೋಝಿಕ್ಕೋಡ್‌ನಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದ್ದು, ಸರ್ಕಾರ (Governmnet) ಶಾಲಾ-ಕಾಲೇಜಿಗೆ ರಜೆ ಘೋಷಿಸಿದೆ.

ಕೇರಳದಲ್ಲಿ ಮಾರಣಾಂತಿಕ ನಿಪಾ ವೈರಸ್‌: ಕರ್ನಾಟಕದಲ್ಲೂ ಕಟ್ಟೆಚ್ಚರ

ಆರು ಕಂಟೈನ್‌ಮೆಂಟ್‌ ವಲಯದಲ್ಲಿ ಲಾಕ್‌ಡೌನ್‌ ಗೈಡ್‌ಲೈನ್ಸ್‌
ಪ್ರಸ್ತುತ 13 ಜನರು ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದಾರೆ. ತಲೆನೋವಿನಂತಹ ಸೌಮ್ಯ ಲಕ್ಷಣಗಳು (Symptoms) ಕಾಣಿಸಿಕೊಂಡಿವೆ. ಹೆಚ್ಚಿನ ಅಪಾಯದ ಸಂಪರ್ಕ ಹೊಂದಿರುವವರು ತಮ್ಮ ಮನೆಯೊಳಗೆ ಇರಬೇಕು ಎಂದು ಸರ್ಕಾರ ಸಲಹೆ ನೀಡಿದೆ. ಈ ಮಧ್ಯೆ ಕೇರಳ ಸರ್ಕಾರವು ಪರಿಸ್ಥಿತಿ ನಿಭಾಯಿಸಲು 19 ಕೋರ್ ಕಮಿಟಿಗಳನ್ನು ರಚಿಸಿದೆ. ಕ್ವಾರಂಟೈನ್‌ನಲ್ಲಿರುವವರಿಗೆ ಅಗತ್ಯ ವಸ್ತುಗಳನ್ನು ತಲುಪಿಸಲು ಸ್ಥಳೀಯ ಸ್ವಯಂ ಸರ್ಕಾರದಿಂದ ಸ್ವಯಂ ಸೇವಕ ತಂಡಗಳನ್ನು ರಚಿಸಲಾಗಿದೆ.

ಸಚಿವೆ ವೀಂಆ ಜಾರ್ಜ್‌, ಕೋಝಿಕ್ಕೋಡ್ ಜಿಲ್ಲೆಯ ಏಳು ಗ್ರಾಮ ಪಂಚಾಯತ್‌ಗಳಾದ ಅತಂಚೇರಿ, ಮಾರುತೋಂಕಾರ, ತಿರುವಳ್ಳೂರು, ಕುಟ್ಟಿಯಾಡಿ, ಕಾಯಕ್ಕೋಡಿ, ವಿಲ್ಲ್ಯಪಲ್ಲಿ ಮತ್ತು ಕವಿಲುಂಪಾರವನ್ನು ಕಂಟೈನ್‌ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ ಎಂದು ಹೇಳಿದರು. ಸೋಂಕು ಹರಡುವಿಕೆಯನ್ನು ಮಿತಿಗೊಳಿಸುವ ರಾಜ್ಯ ಸರ್ಕಾರದ ಕಾರ್ಯತಂತ್ರದ ಭಾಗವಾಗಿ ಕಂಟೋನ್‌ಮೆಂಟ್ ವಲಯಗಳ ರಚನೆಯಾಗಿದೆ. ಕಂಟೈನ್‌ಮೆಂಟ್ ವಲಯದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳಿಗೆ (Students) ಮನೆಯಿಂದಲೇ ತರಗತಿಗಳಿಗೆ ಹಾಜರಾಗಲು ಆನ್‌ಲೈನ್ ತರಗತಿಗಳನ್ನು ಆಯೋಜಿಸುವಂತೆ ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಸಾರ್ವಜನಿಕ ಶಿಕ್ಷಣ ನಿರ್ದೇಶಕರಿಗೆ ನಿರ್ದೇಶನ ನೀಡಿದ್ದಾರೆ.

ನಿಫಾ ವೈರಸ್‌ ಬಾಂಗ್ಲಾದೇಶ ರೂಪಾಂತರ, ತೀರಾ ಅಪಾಯಕಾರಿ: ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್‌

ಸಂಪೂರ್ಣ ಲಾಕ್‌ಡೌನ್ ಘೋಷಿಸುತ್ತಾ ಕೇರಳ ಸರ್ಕಾರ?
ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣಗಳು ಹೆಚ್ಚುತ್ತಲೇ ಇರುವುದರಿಂದ, ಕೇರಳ ಸರ್ಕಾರ ಕೆಲವು ಶಾಲೆಗಳು ಮತ್ತು ಕಚೇರಿಗಳನ್ನು ಮುಚ್ಚಿದೆ ಮತ್ತು ಏಳು ಗ್ರಾಮಗಳನ್ನು ಕಂಟೈನ್‌ಮೆಂಟ್ ವಲಯ ಎಂದು ಘೋಷಿಸಿದೆ. ಇದಲ್ಲದೆ, ಕೋಝಿಕ್ಕೋಡ್‌ನಲ್ಲಿ ಜ್ವರದಿಂದ (Fever) ಎರಡು ಸಾವುಗಳು ವರದಿಯಾದ ನಂತರ ಕೇರಳ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ನಿಪಾಹ್ ವೈರಸ್ ಹರಡುವುದನ್ನು ತಡೆಯಲು ಕೇರಳ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ವಿಧಿಸಿದ್ದರೂ, ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಘೋಷಣೆ ಮಾಡಿಲ್ಲ. ಮಾರಣಾಂತಿಕ ಸೋಂಕು (Virus) ಹೆಚ್ಚುತ್ತಲೇ ಇದ್ದರೆ, ಪರಿಸ್ಥಿತಿಯನ್ನು ನಿಭಾಯಿಸಲು ಇಂತಹ ಕ್ರಮಗಳನ್ನು ಹೇರಲು ರಾಜ್ಯ ಸರ್ಕಾರ ಯೋಚಿಸಬಹುದು ಎಂದು ತಿಳಿದುಬಂದಿದೆ.

ಮಾನವನಿಂದ ಮಾನವನಿಗೆ ನಿಫಾ ವೈರಸ್‌ ಹರಡಿದ್ದಲ್ಲಿ ಅದು ಹೆಚ್ಚು ಮಾರಣಾಂತಿಕವಾಗಿರಲಿದೆ. ಹಾಗಿದ್ದರೂ, ನಿಫಾ ರೂಪಾಂತರವು ಕಡಿಮೆ ಸಾಂಕ್ರಾಮಿಕವಾಗಿದೆ ಎಂದು ಸಚಿವೆ ವೀಣಾ ಚಾರ್ಜ್‌ ಹೇಳಿದ್ದಾರೆ. ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ (ಎನ್‌ಐವಿ) ತಂಡಗಳು ನಿಫಾ ಪರೀಕ್ಷೆ ಮತ್ತು ಬಾವಲಿಗಳ ಪರೀಕ್ಷೆಯನ್ನು ಕೈಗೊಳ್ಳಲು ಕೋಝಿಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಮೊಬೈಲ್ ಲ್ಯಾಬ್ ಅನ್ನು ಸ್ಥಾಪಿಸಲು ಕೇರಳಕ್ಕೆ ಆಗಮಿಸಲಿವೆ ಎಂದು ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ತಿಳಿಸಿದೆ.

Latest Videos
Follow Us:
Download App:
  • android
  • ios