ದೇಶದ ಹಲವು ರಾಜ್ಯಗಳಿಗೆ ಬಿಸಿಗಾಳಿ ಹೊಡೆತ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ದೇಶದ ಹಲವು ರಾಜ್ಯಗಳಲ್ಲಿ ತಾಪಮಾನ ಹೆಚ್ಚಾಗ್ತಿದೆ. ಬಿಸಿಗಾಳಿಯ ಹೊಡೆತಕ್ಕೆ ಜನರು ಕಂಗೆಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ  ಮಹಾ ಬಿಸಿಲಿನ ಝಳಕ್ಕೆ 13 ಮಂದಿ ಸಾವನ್ನಪ್ಪಿದ್ದಾರೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

Many states were hit by the heat wave, 13 people died due to the heat Vin

ನವದೆಹಲಿ: ದೇಶದ ಉತ್ತರ, ಪೂರ್ವ, ಪಶ್ಚಿಮ, ದಕ್ಷಿಣದ ಹಲವು ರಾಜ್ಯಗಳಲ್ಲಿ ಉಷ್ಣಾಂಶದಲ್ಲಿ ಭಾರೀ ಏರಿಕೆಯಾಗಿದ್ದು, ಸಾಮಾನ್ಯ ಜನಜೀವನದ ಮೇಲೆ ವ್ಯತ್ಯಯ ಬೀರಿದೆ. ಹಲವು ರಾಜ್ಯಗಳಲ್ಲಿ ಗರಿಷ್ಠ ಉಷ್ಣಾಂಶ 40-43 ಡಿ.ಸೆ.ವರೆಗೂ ತಲುಪಿದ್ದು ಜನರನ್ನು ಹೈರಾಣಾಗಿಸಿದೆ. ಹೀಗಾಗಿ ತ್ರಿಪುರಾ, ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಕೆಲ ದಿನಗಳ ರಜೆ ಘೋಷಿಸಲಾಗಿದೆ. ಭಾರತದ ಪೂರ್ವ ರಾಜ್ಯಗಳಲ್ಲಿ ಬಿಸಿಗಾಳಿ ಇನ್ನೂ 4 ದಿನಗಳ ಕಾಲ ಮುಂದುವರೆಯಲಿದ್ದು, ವಾಯುವ್ಯ ಭಾಗದಲ್ಲಿ ಇನ್ನೆರಡು ದಿನದಲ್ಲಿ ತಾಪಮಾನ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದೆಹಲಿಯಲ್ಲಿ ಗರಿಷ್ಠ ತಾಪಮಾನ (Temparature) 40.4 ಡಿಗ್ರಿ ಸೆ., ಏರಿಕೆಯಾಗಿದೆ. ಬಿಹಾರದ 5 ಪ್ರದೇಶಗಳಲ್ಲಿ 43 ಡಿಗ್ರಿ ಸೆ., ತಾಪಮಾನ ದಾಖಲಾಗಿದೆ. ರಾಜಸ್ಥಾನದ ಹಲವು ಭಾಗಗಳಲ್ಲಿ 39ರಿಂದ 41 ಡಿಗ್ರಿ ಸೆ., ತಾಪಮಾನ ದಾಖಲಾಗಿದೆ. ಅಲ್ಲದೇ ದಕ್ಷಿಣದ ಆಂಧ್ರ ಪ್ರದೇಶದಲ್ಲೂ 38ರಿಂದ 41 ಡಿಗ್ರಿ ಸೆ., ತಾಪಮಾನ ದಾಖಲಾಗಿದೆ. ಒಡಿಶಾದಲ್ಲೂ ಗರಿಷ್ಠ 43 ಡಿಗ್ರಿ ಸೆ., ತಾಪಮಾನ ದಾಖಲಾಗಿದ್ದು, ರಾಜ್ಯದ 10 ಪ್ರದೇಶಗಳಲ್ಲಿ ತಾಪಮಾನ 40 ಡಿಗ್ರಿ ಸೆ., ಮೀರಿದೆ.

40 ಡಿ.ಸೆ ಉಷ್ಣಾಂಶಕ್ಕೆ ತತ್ತರಿಸಿದ ಬ್ರಿಟನ್‌: 13 ಮಂದಿ ಸಾವು

ಮಹಾ ಬಿಸಿಲಿನ ಝಳಕ್ಕೆ ಮೃತರ ಸಂಖ್ಯೆ 13ಕ್ಕೇರಿಕೆ:, 20 ಜನರಿಗೆ ಚಿಕಿತ್ಸೆ
ಮಹಾರಾಷ್ಟ್ರದಲ್ಲಿ ನಡೆದ ‘ಮಹಾರಾಷ್ಟ್ರ ಭೂಷಣ್‌’ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಬಿಸಿಲಿನ ಧಗೆಗೆ ತುತ್ತಾಗಿ ಚಿಕಿತ್ಸೆ (Treatment) ಪಡೆಯುತ್ತಿದ್ದ ಮತ್ತೊಬ್ಬ ವ್ಯಕ್ತಿಯೊಬ್ಬರು ಸೋಮವಾರ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 13ಕ್ಕೆ ತಲುಪಿದೆ. ಈ ನಡುವೆ ತೀವ್ರವಾಗಿ ಅಸ್ವಸ್ಥಗೊಂಡಿದ್ದ 20 ಜನರಿಗೆ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.

ಈ ನಡುವೆ ಘಟನೆ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ, 'ಘಟನೆ ನನಗೆ ಅತೀವ ನೋವುಂಟು ಮಾಡಿದೆ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ, ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ' ಎಂದಿದ್ದಾರೆ. ಈ ನಡುವೆ ಘಟನೆಗೆ ಶಿವಸೇನೆ- ಬಿಜೆಪಿ ಸರ್ಕಾರವೇ ನೇರ ಹೊಣೆ. ಸರ್ಕಾರ 12 ಅಮಾಯಕರ ಸಾವಿನ ಹೊಣೆ ಹೊರಬೇಕು. ಇದೊಂದು ಉದ್ದೇಶಪೂರ್ವಕವಲ್ಲದ ಹತ್ಯೆ ಪ್ರಕರಣ ಎಂದು ಕಾಂಗ್ರೆಸ್‌ ಆರೋಪಿಸಿದೆ. ಜೊತೆಗೆ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕೆಂದು ಒತ್ತಾಯಿಸಿದೆ.

ಬಿಸಿಲಿನ ತಾಪ ತಾಳಲಾರದೆ ಪೆಂಡಾಲ್ ಜೊತೆಯಲ್ಲೇ ಸಾಗಿದ ಮದುವೆ ಮೆರವಣಿಗೆ!

Latest Videos
Follow Us:
Download App:
  • android
  • ios