ಸಾಕುನಾಯಿಗೂ ಮಂಕಿಪಾಕ್ಸ್ ವೈರಸ್‌ ಹರಡುವ ಸಾಧ್ಯತೆ: ವೈದ್ಯರ ವರದಿ

ಕೊರೋನಾ ಕಾಟದಿಂದ ಹೈರಾಣಾಗಿರುವ ಜನರಿಗೆ ಸದ್ಯ ಮಂಕಿಪಾಕ್ಸ್ ಭೀತಿ ಆವರಿಸಿದೆ. ಈ ಮಧ್ಯೆ ಆತಂಕಕಾರಿ ಮಾಹಿತಿಯೊಂದು ಬಯಲಾಗಿದೆ. ಪ್ರಾಣಿಗಳು ಸಹ ಮಂಕಿಪಾಕ್ಸ್ ವೈರಸ್‌ಗೆ ತುತ್ತಾಗುವ ಅಪಾಯವಿದೆ. ಹೀಗಾಗಿ, ಮಂಕಿಪಾಕ್ಸ್ ಸೋಂಕಿಗೆ ಒಳಗಾದ ಜನರು ಮನೆಯ ಸಾಕುಪ್ರಾಣಿಗಳಿಂದ ದೂರವಿರಲು ಆರೋಗ್ಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Monkeypox Can Spread To Pet Dogs, Doctors Report Vin

ನ್ಯೂಯಾರ್ಕ್: ಕಾಲ ಬದಲಾದಂತೆ ಮಾರಕ ಕಾಯಿಲೆಗಳು ಬದಲಾಗುತ್ತಾ ಹೋಗುತ್ತಿದೆ. ಎರಡು ವರ್ಷಕ್ಕೂ ಹೆಚ್ಚು ಕಾಲ ಜನರು ಕೊರೋನಾದಿಂದ ಕಂಗೆಟ್ಟಿದ್ದಾಯ್ತು. ಈಗ ಮಂಕಿಪಾಕ್ಸ್ ಜನರನ್ನು ತಲ್ಲಣಗೊಳಿಸಿದೆ. ವಿಶ್ವಾದ್ಯಂತ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ ಇನ್ನೊಂದೆಡೆ ಮಂಕಿಪಾಕ್ಸ್ ವೈರಸ್ ಸಹ ಆತಂಕ ಮೂಡಿಸಿದೆ. ಈಗಾಗಲೇ ಹಲವು ರಾಷ್ಟ್ರಗಳಲ್ಲಿ ಮಂಕಿಪಾಕ್ಸ್‌ ಸೋಂಕು ತಗುಲಿ ಹಲವು ಜನರು ಮೃತಪಟ್ಟಿದ್ದಾರೆ. ಮಂಕಿಪಾಕ್ಸ್ ಪ್ರಪಂಚದಾದ್ಯಂತ ಹಲವಾರು ದೇಶಗಳಲ್ಲಿ ಕಳವಳಕ್ಕೆ ಒಂದು ಪ್ರಮುಖ ಕಾರಣವಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯು ಜಾಗತಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸುವುದರಿಂದ USನಲ್ಲಿ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯಾಗುವವರೆಗೆ, ಇದುವರೆಗೆ 80ಕ್ಕೂ ಹೆಚ್ಚು ದೇಶಗಳಲ್ಲಿ ವೈರಲ್ ರೋಗವನ್ನು ಪತ್ತೆಹಚ್ಚಲಾಗಿದೆ. ಇದು ಪ್ರಪಂಚದಾದ್ಯಂತ 17000 ಕ್ಕೂ ಹೆಚ್ಚು ಪ್ರಕರಣಗಳನ್ನು ಹೊಂದಿದೆ.

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ, ವಿಜ್ಞಾನಿಗಳು ಮತ್ತು ವೈದ್ಯಕೀಯ ವೃತ್ತಿಪರರು ನಿರಂತರವಾಗಿ ಮಂಕಿಪಾಕ್ಸ್ ಬಗ್ಗೆ ಅಧ್ಯಯನ ಮಾಡುತ್ತಿದ್ದಾರೆ ಮತ್ತು ಅವರು ವೈರಸ್‌ನ ಕೆಲವು ವಿಶಿಷ್ಟ ಲಕ್ಷಣಗಳನ್ನು ನಿರ್ಧರಿಸಿದ್ದಾರೆ. ಮಂಕಿಪಾಕ್ಸ್ ಬಗ್ಗೆ ಇನ್ನಷ್ಟು ತಿಳಿದುಕೊಳ್ಳುವ ಪ್ರಯತ್ನದಲ್ಲಿ, ಇತ್ತೀಚಿನ ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿಯೊಂದು ಬಯಲಾಗಿದೆ. ಪ್ರಾಣಿಗಳು ಸಹ ಮಂಕಿಪಾಕ್ಸ್ ವೈರಸ್‌ಗೆ ತುತ್ತಾಗುವ ಅಪಾಯವಿದೆ. ಹೀಗಾಗಿ, ಮಂಕಿಪಾಕ್ಸ್ ಸೋಂಕಿಗೆ ಒಳಗಾದ ಜನರು ಮನೆಯ ಸಾಕುಪ್ರಾಣಿಗಳಿಂದ ದೂರವಿರಲು ಆರೋಗ್ಯ ಅಧಿಕಾರಿಗಳು (Health officers) ಎಚ್ಚರಿಕೆ ನೀಡಿದ್ದಾರೆ.

ಮಂಕಿಪಾಕ್ಸ್‌ ಸೋಂಕಿನ ಬಗ್ಗೆ ನೀವಂದುಕೊಂಡಿರೋ ಈ ವಿಚಾರವೆಲ್ಲಾ ನಿಜವಲ್ಲ !

ಕಳೆದ ತಿಂಗಳಿನಿಂದ ಯುಎಸ್‌ನಲ್ಲಿ ಮಂಕಿಪಾಕ್ಸ್ ಹರಡುತ್ತಿದ್ದಂತೆ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳು ಕೆಲ ಸಲಹೆಗಳನ್ನು ಹೊರಡಿಸಿದೆ. ಇದರ ಬೆನ್ನಲ್ಲೇ, ಫ್ರಾನ್ಸ್‌ನಲ್ಲಿ ನಾಯಿಯಲ್ಲಿ ವೈರಸ್‌ ಪತ್ತೆಯಾದ ಬಗ್ಗೆ ವರದಿಯಾಗಿದೆ. ಫ್ರಾನ್ಸ್‌ ಕಳೆದ ವಾರ ಪ್ರಕಟಗೊಂಡ ವೈದ್ಯಕೀಯ ಜರ್ನಲ್‌ನಲ್ಲಿ, ಮಂಕಿಪಾಕ್ಸ್ ಸೋಂಕಿತ ದಂಪತಿಗಳಿಬ್ಬರು ತಮ್ಮ ಸಾಕು ನಾಯಿಯೊಂದಿಗೆ ಇದ್ದರು. ಇವರ ಸಂಪರ್ಕಕ್ಕೆ ಬಂದ ನಾಯಿಗೂ ಕೂಡ ವೈರಸ್‌ ಹರಡಿದೆ ಎಂದು ವರದಿ ತಿಳಿಸಿದೆ. ಈ ಹಿಂದೆ ಕಾಡು ಪ್ರಾಣಿಗಳಲ್ಲಿ ಮಂಕಿಪಾಕ್ಸ್ ಸೋಂಕು ಪತ್ತೆಯಾಗಿವೆ. ಇದು ವೈರಸ್ ಅನ್ನು ಮನುಷ್ಯರಿಗೆ ಹರಡುತ್ತದೆ. ಆದರೆ, ನಾಯಿ (Dog) ಅಥವಾ ಬೆಕ್ಕಿನಂತಹ ಸಾಕುಪ್ರಾಣಿಗಳಲ್ಲಿ ಮಂಕಿಪಾಕ್ಸ್ ಸೋಂಕಿನ ಮೊದಲ ವರದಿ ಇದಾಗಿದೆ. ಮಂಕಿಪಾಕ್ಸ್ ರೋಗಲಕ್ಷಣ (Symptoms) ವ್ಯಕ್ತಿಯೊಂದಿಗೆ ನಿಕಟ ಸಂಪರ್ಕಕ್ಕೆ ಬರುವ ಸಾಕುಪ್ರಾಣಿಗಳನ್ನು 21 ದಿನಗಳವರೆಗೆ ಮನೆಯಲ್ಲಿ ಪ್ರತ್ಯೇಕವಾಗಿ ಇರಿಸಬೇಕು ಎಂದು CDC ಸಲಹೆ ನೀಡಿದೆ.

ತಜ್ಞರು (Experts) ಸಮಸ್ಯೆಯನ್ನು ಪರಿಹರಿಸಲು ವರ್ಲ್ಡ್ ಆರ್ಗನೈಸೇಶನ್ ಆಫ್ ಅನಿಮಲ್ ಹೆಲ್ತ್ ಮತ್ತು ಫುಡ್ ಅಂಡ್ ಅಗ್ರಿಕಲ್ಚರ್ ಆರ್ಗನೈಸೇಶನ್‌ನಂತಹ ಪಾಲುದಾರರೊಂದಿಗೆ ಕೆಲಸ ಮಾಡುತ್ತಿದ್ದಾರೆ. ಸಾಕುಪ್ರಾಣಿಗಳನ್ನು ಸೋಂಕಿಗೆ ಒಳಗಾದ ಕುಟುಂಬ ಸದಸ್ಯರಿಂದ ಪ್ರತ್ಯೇಕಿಸಬೇಕು ಎಂದು ಸೂಚಿಸಲಾಗಿದೆ. 

ಮಂಕಿಪಾಕ್ಸ್ ಹರಡುವಿಕೆ ಆರಂಭದಲ್ಲೇ ತಡೆಯುವುದು ನಿರ್ಣಾಯಕ: ತಜ್ಞರು

ಮಂಕಿಪಾಕ್ಸ್ ಎಂದರೇನು ?
ಮಂಕಿಪಾಕ್ಸ್ ವೈರಸ್ ಆರ್ಥೋಪಾಕ್ಸ್ ವೈರಸ್ ಕುಟುಂಬಕ್ಕೆ ಸೇರಿದೆ. ಇದರಲ್ಲಿ ಸಿಡುಬು ರೋಗಕ್ಕೆ ಕಾರಣವಾಗುವ ವೆರಿಯೊಲಾ ವೈರಸ್ ಮತ್ತು ಸಿಡುಬು ಲಸಿಕೆಯಲ್ಲಿ ಬಳಸಲಾದ ವ್ಯಾಕ್ಸಿನಿಯಾ ವೈರಸ್ ಸೇರಿವೆ. ಮಂಕಿಪಾಕ್ಸ್ ಸಿಡುಬು ರೋಗದ ಲಕ್ಷಣಗಳನ್ನೇ ಹೊಂದಿದ್ದು, ಅದರ ತೀವ್ರತೆ ಕಡಿಮೆ. ವ್ಯಾಕ್ಸಿನೇಷನ್ ನಿಂದಾಗಿ 1980ರಲ್ಲಿ ಪ್ರಪಂಚದಾದ್ಯಂತ ಸಿಡುಬು ನಿರ್ಮೂಲನೆಯಾಯಿತು, ಮಂಕಿಪಾಕ್ಸ್ ಇನ್ನೂ ಮಧ್ಯ ಮತ್ತು ಪಶ್ಚಿಮ ಆಫ್ರಿಕಾದ ಹಲವಾರು ರಾಷ್ಟ್ರಗಳಲ್ಲಿ ಮತ್ತು ಇತರೆಡೆಗಳಲ್ಲಿ ಅಸ್ತಿತ್ವದಲ್ಲಿದೆ.

ಮಂಕಿಪಾಕ್ಸ್ ರೋಗಲಕ್ಷಣಗಳು
ಮಂಕಿಪಾಕ್ಸ್ ಒಂದು ವೈರಸ್ ಆಗಿದ್ದು ಅದು ಜ್ವರ, ಶೀತ, ತಲೆನೋವು, ಸ್ನಾಯು ನೋವು, ಆಯಾಸ, ಊದಿಕೊಂಡ ದುಗ್ಧರಸ ಗ್ರಂಥಿಗಳಂತಹ ಫ್ಲೂ ತರಹದ ಲಕ್ಷಣಗಳನ್ನು ಒಳಗೊಂಡಿರುತ್ತದೆ. ರೋಗದ ಆರಂಭಿಕ ಲಕ್ಷಣಗಳು (symptoms) ಜ್ವರ, ತಲೆನೋವು, ಬೆನ್ನು ಮತ್ತು ಕುತ್ತಿಗೆ ನೋವು ಮುಂತಾದ ಲಕ್ಷಣಗಳನ್ನು ಒಳಗೊಂಡಿರುತ್ತದೆ. ನಡುಕ ಮತ್ತು ಆಯಾಸವೂ ಇರಬಹುದು. ದೇಹದ ಮೇಲೆ ಸಣ್ಣ ಕಲೆಗಳು ಕಾಣಿಸಿಕೊಳ್ಳುತ್ತವೆ. ದಡಾರ, ಸ್ಕರ್ವಿ ಮತ್ತು ಸಿಫಿಲಿನ್​ ಕೆಲವು ರೋಗಲಕ್ಷಣಗಳಿಗೆ ಸ್ವಲ್ಪಮಟ್ಟಿಗೆ ಹೋಲುತ್ತವೆ. ಈ ರೋಗದ ಆರಂಭಿಕ ಲಕ್ಷಣಗಳನ್ನು ಗುರುತಿಸುವಲ್ಲಿ ಅನೇಕ ಜನರು ತಪ್ಪು ಮಾಡುತ್ತಾರೆ.

Latest Videos
Follow Us:
Download App:
  • android
  • ios