ಲೈಂಗಿಕ ಸಂಪರ್ಕದ ಮೂಲಕವೂ ಹರಡುತ್ತಂತೆ ಮಂಕಿಪಾಕ್ಸ್ ವೈರಸ್ !

ಯುನೈಟೆಡ್ ಸ್ಟೇಟ್ಸ್‌ನ ಮ್ಯಾಸಚೂಸೆಟ್ಸ್ ನಲ್ಲಿ ಮಂಕಿಪಾಕ್ಸ್ (Monkeypox)ನ ಅಪರೂಪದ ಪ್ರಕರಣ ವರದಿಯಾಗಿದ್ದು, ಇದು ಈ ವರ್ಷ ವರದಿಯಾದ ಮೊದಲ ಪ್ರಕರಣವಾಗಿದೆ. ಆದರೆ ಹೊಸ ಪ್ರಕರಣಗಳನ್ನು ಪರಿಶೀಲಿಸಿದ ನಂತರ ಆತಂಕಕಾರಿ ಮಾಹಿತಿಯೊಂದು ಬಯಲಾಗಿದೆ. ಹೊಸ ಪ್ರಕರಣಗಳನ್ನು ಪರೀಕ್ಷಿಸಿದ ನಂತರ, ಮಂಕಿ ವೈರಸ್ (Virus) ಲೈಂಗಿಕ ಸಂಭೋಗದ (Sex) ಮೂಲಕವೂ ಹರಡಬಹುದು ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

Monkeypox Disease, Virus Can Also Spread Through Sexual Intercourse, Warn Experts Vin

ಅಮೆರಿಕದಲ್ಲಿ ಮೊದಲ ಮಂಕಿ ಪಾಕ್ಸ್ (Monkeypox)​​ ವೈರಲ್​ ಪತ್ತೆಯಾಗಿದೆ. ಕೆನಡಾಕ್ಕೆ ಪ್ರಯಾಣಿಸಿದ್ದ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ವೈರಸ್ (Virus) ಪತ್ತೆಯಾಗಿದೆ. ಹೀಗಾಗಿ ಕೆನಡಾದ ಕ್ಯೂಬೆಕ್‌ನ ಆರೋಗ್ಯ ಅಧಿಕಾರಿಗಳು ಹತ್ತಕ್ಕೂ ಅಧಿಕ ಶಂಕಿತ ಮಂಕಿಪಾಕ್ಸ್ (Monkeypox) ಪ್ರಕರಣಗಳ ತನಿಖೆ ನಡೆಸುತ್ತಿದ್ದಾರೆ. ತಜ್ಞರ ಪ್ರಕಾರ, ಇದು ವಿಶೇಷ ರೀತಿಯ ಪೋಕ್ಸ್ ಆಗಿದೆ. ವಾಟರ್ ಪಾಕ್ಸ್ ಅಥವಾ ಸಿಡುಬು ರೋಗಕ್ಕೆ ಚಿಕಿತ್ಸೆ ಇದೆಯಾದರೂ, ಈ ಅಪರೂಪದ ಕಾಯಿಲೆಯನ್ನು ಗುಣಪಡಿಸಲು ವೈದ್ಯರಿಗೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ತಿಳಿದಿಲ್ಲ.

ಈ ವಾರದ ಆರಂಭದಲ್ಲಿ ಯುರೋಪಿಯನ್ ಆರೋಗ್ಯ ಅಧಿಕಾರಿಗಳು 12ಕ್ಕೂ ಅಧಿಕ ಮಂಕಿಪಾಕ್ಸ್ ಪ್ರಕರಣಗಳನ್ನು ದೃಢಪಡಿಸಿದ್ದರು. ಇದರ ಬೆನ್ನಲ್ಲೇ ಇತ್ತೀಚೆಗೆ ಕೆನಡಾಕ್ಕೆ ತೆರಳಿದ್ದ ಅಮೆರಿಕದ ವ್ಯಕ್ತಿಯಲ್ಲಿ ಕೂಡ ಸೋಂಕು ಪತ್ತೆಯಾಗಿದೆ. ಇದು ಈ ವರ್ಷದ ಮೊದಲ ಪ್ರಕರಣವಾಗಿದೆ. ಕಳೆದ ವರ್ಷ ಸುಮಾರು ಎರಡು ದಶಕಗಳ ಬಳಿಕ ಮೊದಲ ಮಂಕಿಪಾಕ್ಸ್ ಕೇಸ್ ದೃಢಪಟ್ಟಿತ್ತು.

ಮಕ್ಕಳನ್ನು ಕಾಡುತ್ತಿದೆ ಟೊಮೆಟೊ ಜ್ವರ, ರೋಗ ಲಕ್ಷಣಗಳು ಯಾವುವು ? ಚಿಕಿತ್ಸೆಯೇನು ?

ಮಂಕಿಪಾಕ್ಸ್ ಎಂದರೇನು?
ಮಂಕಿಪಾಕ್ಸ್ ವೈರಸ್ ಆರ್ಥೋಪಾಕ್ಸ್ ವೈರಸ್ ಕುಟುಂಬಕ್ಕೆ ಸೇರಿದೆ, ಇದರಲ್ಲಿ ಸಿಡುಬು ರೋಗಕ್ಕೆ ಕಾರಣವಾಗುವ ವೆರಿಯೊಲಾ ವೈರಸ್ ಮತ್ತು ಸಿಡುಬು ಲಸಿಕೆಯಲ್ಲಿ ಬಳಸಲಾದ ವ್ಯಾಕ್ಸಿನಿಯಾ ವೈರಸ್ ಸೇರಿವೆ. ಮಂಕಿಪಾಕ್ಸ್ ಸಿಡುಬು ರೋಗದ ಲಕ್ಷಣಗಳನ್ನೇ ಹೊಂದಿದ್ದು, ಅದರ ತೀವ್ರತೆ ಕಡಿಮೆ. ವ್ಯಾಕ್ಸಿನೇಷನ್ ನಿಂದಾಗಿ 1980ರಲ್ಲಿ ಪ್ರಪಂಚದಾದ್ಯಂತ ಸಿಡುಬು ನಿರ್ಮೂಲನೆಯಾಯಿತು, ಮಂಕಿಪಾಕ್ಸ್ ಇನ್ನೂ ಮಧ್ಯ ಮತ್ತು ಪಶ್ಚಿಮ ಆಫ್ರಿಕಾದ ಹಲವಾರು ರಾಷ್ಟ್ರಗಳಲ್ಲಿ ಮತ್ತು ಇತರೆಡೆಗಳಲ್ಲಿ ಅಸ್ತಿತ್ವದಲ್ಲಿದೆ.

ಮಂಕಿಪಾಕ್ಸ್ ರೋಗಲಕ್ಷಣಗಳು
ಮಂಕಿಪಾಕ್ಸ್ ಒಂದು ವೈರಸ್ ಆಗಿದ್ದು ಅದು ಜ್ವರ, ಶೀತ, ತಲೆನೋವು, ಸ್ನಾಯು ನೋವು, ಆಯಾಸ, ಊದಿಕೊಂಡ ದುಗ್ಧರಸ ಗ್ರಂಥಿಗಳಂತಹ ಫ್ಲೂ ತರಹದ ಲಕ್ಷಣಗಳನ್ನು ಒಳಗೊಂಡಿರುತ್ತದೆ. ರೋಗದ ಆರಂಭಿಕ ಲಕ್ಷಣಗಳು (symptoms) ಜ್ವರ, ತಲೆನೋವು, ಬೆನ್ನು ಮತ್ತು ಕುತ್ತಿಗೆ ನೋವು ಮುಂತಾದ ಲಕ್ಷಣಗಳನ್ನು ಒಳಗೊಂಡಿರುತ್ತದೆ.

ನಡುಕ ಮತ್ತು ಆಯಾಸವೂ ಇರಬಹುದು. ದೇಹದ ಮೇಲೆ ಸಣ್ಣ ಕಲೆಗಳು ಕಾಣಿಸಿಕೊಳ್ಳುತ್ತವೆ. ದಡಾರ, ಸ್ಕರ್ವಿ ಮತ್ತು ಸಿಫಿಲಿನ್​ ಕೆಲವು ರೋಗಲಕ್ಷಣಗಳಿಗೆ ಸ್ವಲ್ಪಮಟ್ಟಿಗೆ ಹೋಲುತ್ತವೆ. ಈ ರೋಗದ ಆರಂಭಿಕ ಲಕ್ಷಣಗಳನ್ನು ಗುರುತಿಸುವಲ್ಲಿ ಅನೇಕ ಜನರು ತಪ್ಪು ಮಾಡುತ್ತಾರೆ.

ಹಣ್ಣುಗಳನ್ನು ತಿನ್ನೋ ಮುನ್ನ ಹುಷಾರ್‌, ಮತ್ತೆ ಹರಡುತ್ತಿದೆ ಮಾರಣಾಂತಿಕ ನಿಫಾ !

ಲೈಂಗಿಕ ಸಂಭೋಗದಿಂದಲೂ ವೈರಸ್​ ಹರಡಬಹುದು 
ಇದುವರೆಗೂ ಮಂಕಿಪಾಕ್ಸ್ ಆರೋಗ್ಯವಂತ ವ್ಯಕ್ತಿಯ ದೇಹವನ್ನು ಉಸಿರಾಟದ ಪ್ರದೇಶ, ಗಾಯಗಳು, ಮೂಗು, ಬಾಯಿ ಅಥವಾ ಕಣ್ಣುಗಳ ಮೂಲಕ ಪ್ರವೇಶಿಸಬಹುದು ಎಂದು ತಜ್ಞರು ಭಾವಿಸಿದ್ದರು. ಆದರೆ ಹೊಸ ಪ್ರಕರಣಗಳನ್ನು ಪರೀಕ್ಷಿಸಿದ ನಂತರ, ಮಂಕಿ ವೈರಸ್ ಲೈಂಗಿಕ ಸಂಭೋಗದ (Sex) ಮೂಲಕವೂ ಹರಡಬಹುದು ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ನೀವು ಮಂಕಿ ಪಾಕ್ಸ್ ಹೊಂದಿರುವ ಯಾರೊಂದಿಗಾದರೂ ಲೈಂಗಿಕ ಕ್ರಿಯೆ ನಡೆಸಿದರೆ, ಅವರ ಸಂಗಾತಿಗೂ ಮಂಕಿ ಪಾಕ್ಸ್ ಬರುವ ಸಾಧ್ಯತೆಯಿದೆ ಎಂದು ತಜ್ಞರ ವಿಭಾಗವೊಂದು ತಿಳಿಸಿದೆ.

ಸ್ಪೇನ್ ಮತ್ತು ಪೋರ್ಚುಗಲ್ ನಲ್ಲಿ  40ಕ್ಕೂ ಹೆಚ್ಚು ಮಂಕಿಪಾಕ್ಸ್  ಪ್ರಕರಣಗಳು ಪತ್ತೆಯಾಗಿದ್ದು, ಇದೀಗ ಹೊಸದಾಗಿ ಕೆನಡಾ ದೇಶದಲ್ಲಿ ಒಂದು ಡಜನ್‌ಗಿಂತಲೂ ಹೆಚ್ಚು ಮಂಕಿಪಾಕ್ಸ್ ನ ಶಂಕಿತ ಪ್ರಕರಣಗಳನ್ನು ಪತ್ತೆಹಚ್ಚಲಾಗುತ್ತಿದೆ. ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಹೆಚ್ಚಿನ ಮಂಕಿಪಾಕ್ಸ್ ಪ್ರಕರಣಗಳ ಉಂಟಾಗುವ ಸಾಧ್ಯತೆ ಇದೆ ಎಂದು ಊಹಿಸಿದೆ. ಮಂಕಿಪಾಕ್ಸ್ ನಿಂದ ನಾಗರೀಕರಿಗೆ ಯಾವುದೇ ಅಪಾಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದು, ಈಗಾಗಲೇ ರೋಗಿಗಳೊಂದಿಗೆ ಸಂಪರ್ಕದಲ್ಲಿದ್ದ ಜನರನ್ನು ಪತ್ತೆಹಚ್ಚಲಾಗುತ್ತಿದೆ.

Latest Videos
Follow Us:
Download App:
  • android
  • ios