Asianet Suvarna News Asianet Suvarna News

Covid Cases: ಮತ್ತೆ ಕೋವಿಡ್ ಭೀತಿ, ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

ಭಾರತದಲ್ಲಿ ಎಂಟು ರಾಜ್ಯಗಳು ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳನ್ನು ವರದಿ ಮಾಡುತ್ತಿವೆ. ಇವುಗಳಲ್ಲಿ ಕೇರಳ, ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ 10 ಕ್ಕೂ ಹೆಚ್ಚು ಜಿಲ್ಲೆಗಳು ಶೇಕಡಾ 10 ಕ್ಕಿಂತ ಹೆಚ್ಚು ಪಾಸಿಟಿವ್ ಕೇಸ್ ಹೊಂದಿವೆ. ಈ ಪೈಕಿ ಮೂರು ರಾಜ್ಯಗಳು ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿವೆ. ಅವು ಯಾವುದೆಲ್ಲಾ ಅನ್ನೋ ಮಾಹಿತಿ ಇಲ್ಲಿದೆ.

These 3 States Have Brought Back Mask Rule As Covid Cases In India Surge Vin
Author
First Published Apr 9, 2023, 1:01 PM IST

ನವದೆಹಲಿ: ದೇಶದಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿದೆ. ಈ ವಾರದ ಆರಂಭದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಪರಿಶೀಲನಾ ಸಭೆಯನ್ನು ನಡೆಸಿ, ಆರೋಗ್ಯ ಸೌಲಭ್ಯಗಳ ಸನ್ನದ್ಧತೆಯನ್ನು ಪರಿಶೀಲಿಸಲು ಮತ್ತು ಜಾಗರೂಕರಾಗಿರಲು ರಾಜ್ಯಗಳಿಗೆ ಸೂಚನೆ ನೀಡಿದ್ದಾರೆ.ಸಾಂಕ್ರಾಮಿಕ ರೋಗದ ಮರುಪ್ರಸಾರವನ್ನು ತಡೆಗಟ್ಟಲು ಹಲವಾರು ರಾಜ್ಯಗಳು ಮತ್ತೆ ನಿರ್ಬಂಧಗಳನ್ನು ಹೇರಲು ಆರಂಭಿಸಿವೆ. ಭಾರತದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಮೂರು ರಾಜ್ಯಗಳು ಕಡ್ಡಾಯ ಮಾಸ್ಕ್‌ ನಿಯಮವನ್ನು ತಂದಿವೆ.

ಇತ್ತೀಚಿನ ಲಭ್ಯವಿರುವ ಮಾಹಿತಿಯ ಪ್ರಕಾರ, ಭಾರತದಲ್ಲಿ ಎಂಟು ರಾಜ್ಯಗಳು ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳನ್ನು ವರದಿ ಮಾಡುತ್ತಿವೆ. ಇವುಗಳಲ್ಲಿ ಕೇರಳ, ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ 10ಕ್ಕೂ ಹೆಚ್ಚು ಜಿಲ್ಲೆಗಳು ಶೇಕಡಾ 10ಕ್ಕಿಂತ ಹೆಚ್ಚು ಪಾಸಿಟಿವ್ ಕೇಸ್ ಹೊಂದಿವೆ. ಈ ಪೈಕಿ ಮೂರು ರಾಜ್ಯಗಳು ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿವೆ (Mask compulsory). ಅವು ಯಾವುದೆಲ್ಲಾ ಅನ್ನೋ ಮಾಹಿತಿ ಇಲ್ಲಿದೆ.

Covid Case ಹೆಚ್ಚಳ, ಮತ್ತೊಮ್ಮೆ ಬೂಸ್ಟರ್‌ ಡೋಸ್‌ ನೀಡಲು ಡಬ್ಲ್ಯುಎಚ್‌ಒ ಸಲಹೆ

ಕೇರಳ
ಗರ್ಭಿಣಿಯರು, ವೃದ್ಧರು, ಮಕ್ಕಳು ಮತ್ತು ವಯೋಸಹಜ ಕಾಯಿಲೆ ಇರುವವರಿಗೆ ಮಾಸ್ಕ್ ಕಡ್ಡಾಯವಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಶನಿವಾರ ಹೇಳಿದ್ದಾರೆ. ಕೇರಳದಲ್ಲಿ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕೋವಿಡ್‌ ಸೋಂಕು ತುಸು ಹೆಚ್ಚೇ ಇದೆ. ಶನಿವಾರ ರಾಜ್ಯದಲ್ಲಿ 1,801 ಜನರಿಗೆ ಕೋವಿಡ್‌ ಪಾಸಿಟಿವ್‌ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವೆ (Health minister) ವೀಣಾ ಜಾರ್ಜ್ ಶನಿವಾರ ಮಾಸ್ಕ್‌ ಕಡ್ಡಾಯಯ ಬಗ್ಗೆ ಆದೇಶ ಹೊರಡಿಸಿದ್ದಾರೆ. 60 ವರ್ಷ ಮೇಲ್ಪಟ್ಟವರಲ್ಲಿ ಮತ್ತು ಮಧುಮೇಹದಂತಹ ಜೀವನಶೈಲಿ ಕಾಯಿಲೆ ಇರುವವರಲ್ಲಿ ಹೆಚ್ಚಿನ ಸಾವುಗಳು (Death) ವರದಿಯಾಗಿವೆ ಎಂದು ಸಚಿವರು ಹೇಳಿದರು.

ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಲು ಉನ್ನತ ಮಟ್ಟದ ಸಭೆ ನಡೆಸಿದ ನಂತರ ಸಚಿವರು ಮಾತನಾಡಿ, ಕೋವಿಡ್ ಸಂಬಂಧಿತ ಸಾವುಗಳು ಹೆಚ್ಚಾಗಿ 60 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಮತ್ತು ಮಧುಮೇಹದಂತಹ ಕಾಯಿಲೆ ಇರುವವರಲ್ಲಿ ವರದಿಯಾಗುತ್ತಿವೆ. ಹೀಗಾಗಿ ಗರ್ಭಿಣಿಯರು, ವೃದ್ಧರು ಮತ್ತು ವಯೋಸಹಜ ಕಾಯಿಲೆ (Disease) ಇರುವವರು ಮಾಸ್ಕ್‌ ಧರಿಸುವುದು ಕಡ್ಡಾಯವಾಗಿದೆ ಎಂದಿದ್ದಾರೆ. ಕೇರಳದಲ್ಲಿ 1,801 ಕೋವಿಡ್-19 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವರ ಕಚೇರಿ ಹೇಳಿಕೆಯಲ್ಲಿ ತಿಳಿಸಿದ್ದು, ಎರ್ನಾಕುಲಂ, ತಿರುವನಂತಪುರಂ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ.

ಕರ್ನಾಟಕದಲ್ಲಿ ಕೊರೋನಾ ಹೆಚ್ಚಳ: ಹೊಸ ಅಲೆಯ ಮುನ್ಸೂಚನೆಯಾ?

ಪುದುಚೇರಿ
ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಕಾರಣ ಪುದುಚೇರಿ ಆಡಳಿತವು ಶುಕ್ರವಾರ ಕೇಂದ್ರಾಡಳಿತ ಪ್ರದೇಶದಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಕೊರೋನಾ ವೈರಸ್ ಪ್ರಕರಣಗಳ ಇತ್ತೀಚಿನ ಉಲ್ಬಣವನ್ನು ಎತ್ತಿ ಹಿಡಿದ ಜಿಲ್ಲಾಧಿಕಾರಿ ಇ ವಲ್ಲವನ್ ಅವರು,'ಮುಂದಿನ ದಿನಗಳಲ್ಲಿ ಕೋವಿಡ್ -19 ರ ಪ್ರಸರಣ ಹೆಚ್ಚಳದ ಅಪಾಯವನ್ನು ಕಡಿಮೆ ಮಾಡಲು ಆಡಳಿತವು ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.  'ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಕೈಗಳ ನೈರ್ಮಲ್ಯ ಮತ್ತು ದೈಹಿಕ ಅಂತರವನ್ನು ಕಾಪಾಡಿಕೊಳ್ಳುವುದು, ಮಾಸ್ಕ್‌ ಧರಿಸುವುದು ಮೊದಲಾದ ಕೋವಿಡ್ -19 ಸೂಕ್ತ ನಡವಳಿಕೆಯನ್ನು ಅನುಸರಿಸಬೇಕು" ಎಂದು ವಲ್ಲವನ್ ಹೇಳಿದರು.

ಪುದುಚೇರಿ ರಾಜ್ಯ ಸರ್ಕಾರ ಶುಕ್ರವಾರ ಸಾರ್ವಜನಿಕ ಸ್ಥಳಗಳಾದ ಬೀಚ್ ರಸ್ತೆ, ಉದ್ಯಾನವನಗಳು ಮತ್ತು ಚಿತ್ರಮಂದಿರಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವೆಂದು ಆದೇಶ ಹೊರಡಿಸಿದೆ. ಆಸ್ಪತ್ರೆಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಮದ್ಯದ ಅಂಗಡಿಗಳು, ಮನರಂಜನಾ ಕ್ಷೇತ್ರಗಳು, ಸರ್ಕಾರಿ ಕಚೇರಿಗಳು ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.

ಹರಿಯಾಣ
ಹರಿಯಾಣ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಶುಕ್ರವಾರ ಹರ್ಯಾಣದಲ್ಲಿ 407 ಮಂದಿಗೆ ಸೋಂಕು ತಗುಲಿದೆ. ಮಾಹಿತಿಯ ಪ್ರಕಾರ, ಹರಿಯಾಣದ ಅರ್ಧದಷ್ಟು ಕೋವಿಡ್ ಪ್ರಕರಣಗಳು ಗುರುಗ್ರಾಮ್ ಜಿಲ್ಲೆಯಿಂದ ದಾಖಲಾಗಿವೆ ಎಂದು ರಾಜ್ಯದ ಆರೋಗ್ಯ ಇಲಾಖೆ ಶುಕ್ರವಾರ ಬುಲೆಟಿನ್‌ನಲ್ಲಿ ತಿಳಿಸಿದೆ. ಈ ವಾರ ಎರಡು ಕೋವಿಡ್ ಸಂಬಂಧಿತ ಸಾವುಗಳು ಸಂಭವಿಸಿವೆ - ಒಂದು ಮಂಗಳವಾರ ಯಮುನಾನಗರ ಜಿಲ್ಲೆಯಲ್ಲಿ ಮತ್ತು ಇನ್ನೊಂದು ಗುರುವಾರ ಗುರುಗ್ರಾಮ್‌ನಲ್ಲಿ ಎಂದು ತಿಳಿಸಲಾಗಿದೆ. ರಾಜ್ಯದ ಆರೋಗ್ಯ ಇಲಾಖೆಯು ಕೋವಿಡ್ ನಿಯಮಗಳನ್ನು ಸೂಕ್ತವಾಗಿ ಪಾಲಿಸಲು ಸಾರ್ವಜನಿಕರಿಗೆ ಹೇಳಿದೆ. ರಾಜ್ಯದ ಎಲ್ಲ ಭಾಗಗಳಲ್ಲಿ ನಿಯಮವನ್ನು ಅನುಷ್ಠಾನಗೊಳಿಸುವಂತೆ ಜಿಲ್ಲಾಡಳಿತ ಮತ್ತು ಪಂಚಾಯಿತಿಗಳಿಗೆ ಸೂಚನೆ ನೀಡಲಾಗಿದೆ.

ಕೊರೊನಾ ಸೋಂಕುಗಳ ಸಂಖ್ಯೆ ಹೆಚ್ಚುತ್ತಿರುವಂತೆಯೇ ಉತ್ತರಪ್ರದೇಶದ ಮೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಆಗಮಿಸುವ ವಿದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಸೋಂಕು ಪರೀಕ್ಷೆ ಕಡ್ಡಾಯ ಮಾಡಲಾಗಿದೆ.

Follow Us:
Download App:
  • android
  • ios