ಸರಿಯಾದ ಸಮಯದಲ್ಲಿ ಮಲಗದಿರುವುದು ನಿಮ್ಮ ಆರೋಗ್ಯದ ಮೇಲೆ ಅನೇಕ ಕೆಟ್ಟ ಪರಿಣಾಮಗಳನ್ನು ಬೀರುತ್ತದೆ. ಹಾಗಾದರೆ ರಾತ್ರಿ ಬೇಗನೆ ಮಲಗುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ನೋಡೋಣ ಬನ್ನಿ..
ಬ್ಯುಸಿ ಲೈಫ್‌ಸ್ಟೈಲ್‌ನಿಂದಾಗಿ ಹೆಚ್ಚಿನ ಜನರಿಗೆ ಸಮಯಕ್ಕೆ ಸರಿಯಾಗಿ ನಿದ್ರಿಸಲು ಸಾಧ್ಯವಾಗುತ್ತಿಲ್ಲ. ಮತ್ತೆ ಕೆಲವು ಜನರಿಗೆ ತಡರಾತ್ರಿ ಮಲಗುವ ಅಭ್ಯಾಸವಿರುತ್ತದೆ. ಸಮಯಕ್ಕೆ ಸರಿಯಾಗಿ ನಿದ್ರಿಸುವುದು ನಿಮ್ಮ ಆರೋಗ್ಯಕ್ಕೆ ಎಷ್ಟು ಮುಖ್ಯ ಎಂದು ನಿಮಗೆ ತಿಳಿದಿದೆಯೇ?. ಏಕೆಂದರೆ ಸರಿಯಾದ ಸಮಯಕ್ಕೆ ಮಲಗದಿರುವುದು ಕೂಡ ನಿಮ್ಮ ಸಂಪೂರ್ಣ ಆರೋಗ್ಯವನ್ನು ಹಾಳುಮಾಡುತ್ತದೆ.
ತಜ್ಞರ ಪ್ರಕಾರ, ನಮ್ಮ ದೇಹವನ್ನು ಸೂರ್ಯೋದಯ ಮತ್ತು ಸೂರ್ಯಾಸ್ತದೊಂದಿಗೆ ಸಿಂಕ್ರೊನೈಸ್ ಆಗಿ ಕಾರ್ಯನಿರ್ವಹಿಸುವ ನೈಸರ್ಗಿಕ ಸಿರ್ಕಾಡಿಯನ್ ಲಯದಲ್ಲಿ ಕೆಲಸ ಮಾಡಲು ವಿನ್ಯಾಸಗೊಳಿಸಲಾಗಿದೆ. ಸಮಯಕ್ಕೆ ಸರಿಯಾಗಿ ಮಲಗುವುದು ಆರೋಗ್ಯಕರ ನಿದ್ರೆಯ ಮಾದರಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಆದರೆ ಸರಿಯಾದ ಸಮಯದಲ್ಲಿ ಮಲಗದಿರುವುದು ನಿಮ್ಮ ಆರೋಗ್ಯದ ಮೇಲೆ ಅನೇಕ ಕೆಟ್ಟ ಪರಿಣಾಮಗಳನ್ನು ಬೀರುತ್ತದೆ. ಹಾಗಾದರೆ ರಾತ್ರಿ ಬೇಗನೆ ಮಲಗುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ನೋಡೋಣ ಬನ್ನಿ..
ಹೃದ್ರೋಗ ಬರುವ ಅಪಾಯ ಕಡಿಮೆ (Preventing Heart Disease)
ನಾವು ಸಮಯಕ್ಕೆ ಸರಿಯಾಗಿ ಮಲಗಿದಾಗ ನಮ್ಮ ದೇಹವು ವಿಶ್ರಾಂತಿ ಪಡೆಯಲು ಮತ್ತು ಮತ್ತೆ ಫ್ರೆಶ್ ಆಗಿ ಕಾಣಲು ಸಾಕಷ್ಟು ಸಮಯ ಸಿಗುತ್ತದೆ. ಇದು ಉತ್ತಮ ಮನಸ್ಥಿತಿ, ಹೆಚ್ಚಿದ ಉತ್ಪಾದಕತೆ ಮತ್ತು ಚಟುವಟಿಕೆಯಂತಹ ಅನೇಕ ಪ್ರಯೋಜನಗಳನ್ನು ಹೊಂದಿದೆ. ಒಳ್ಳೆಯ ಮತ್ತು ಸಾಕಷ್ಟು ನಿದ್ರೆ ಪಡೆಯುವುದರಿಂದ, ಮಧುಮೇಹ, ಹೃದ್ರೋಗ ಮತ್ತು ಬೊಜ್ಜು ಮುಂತಾದ ದೈಹಿಕ ಸಮಸ್ಯೆಗಳು ಬರುವ ಅಪಾಯವಿಲ್ಲ.
ಹಾರ್ಮೋನುಗಳ ನಿಯಂತ್ರಣ (Hormonal regulation)
ಬೇಗನೆ ಮತ್ತು ಸಮಯಕ್ಕೆ ಸರಿಯಾಗಿ ನಿದ್ರಿಸುವುದು ನಮ್ಮ ದೇಹದ ಹಾರ್ಮೋನುಗಳನ್ನು, ವಿಶೇಷವಾಗಿ ಒತ್ತಡಕ್ಕೆ ಸಂಬಂಧಿಸಿದ ಹಾರ್ಮೋನುಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಕಾರ್ಟಿಸೋಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ನಮ್ಮ ಒಟ್ಟಾರೆ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ.
ರೋಗನಿರೋಧಕ ಶಕ್ತಿ ಹೆಚ್ಚಿಸಲು (Boost Your Immune System)
ಸಮಯಕ್ಕೆ ಸರಿಯಾಗಿ ಮಲಗುವುದು ಮತ್ತು ಉತ್ತಮ ನಿದ್ರೆ ಮಾಡುವುದರಿಂದ ನಮ್ಮ ದೇಹವು ಹೆಚ್ಚು ಬಿಳಿ ರಕ್ತ ಕಣಗಳನ್ನು ಉತ್ಪಾದಿಸಲು ಸಹಾಯ ಮಾಡುತ್ತದೆ. ಇದು ಸೋಂಕುಗಳು ಮತ್ತು ರೋಗಗಳ ವಿರುದ್ಧ ಹೋರಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸಾಕಷ್ಟು ನಿದ್ರೆ ಪಡೆಯುವುದು ನಮ್ಮ ದೇಹವು ವಿವಿಧ ಕಾಯಿಲೆಗಳಿಂದ ವೇಗವಾಗಿ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ.
ಹಸಿವನ್ನು ನಿಯಂತ್ರಿಸಲು (Suppress Appetite)
ಬೇಗನೆ ಮಲಗುವುದರಿಂದ ಹಸಿವನ್ನು ನಿಯಂತ್ರಿಸಲು ಮತ್ತು ಆರೋಗ್ಯಕರ ಆಹಾರ ಪದ್ಧತಿಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ನಮಗೆ ಉತ್ತಮ ಮತ್ತು ಸಾಕಷ್ಟು ನಿದ್ರೆ ಸಿಗದಿದ್ದಾಗ, ನಮ್ಮ ದೇಹವು ಹಸಿವಿನ ಹಾರ್ಮೋನ್ ಗ್ರೆಲಿನ್ ಅನ್ನು ಹೆಚ್ಚು ಮತ್ತು ಲೆಪ್ಟಿನ್ ಹಾರ್ಮೋನ್ ಅನ್ನು ಕಡಿಮೆ ಉತ್ಪಾದಿಸುತ್ತದೆ. ಇದು ಅತಿಯಾಗಿ ತಿನ್ನುವುದು ಮತ್ತು ತೂಕ ಹೆಚ್ಚಾಗಲು ಕಾರಣವಾಗಬಹುದು. ಬೇಗನೆ ಮಲಗುವುದು ಮತ್ತು ಸಾಕಷ್ಟು ನಿದ್ರೆ ಪಡೆಯುವುದು ಈ ಹಾರ್ಮೋನುಗಳನ್ನು ನಿಯಂತ್ರಿಸಲು ಮತ್ತು ಆರೋಗ್ಯಕರ ಆಹಾರ ಪದ್ಧತಿಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.
ಮಾನಸಿಕ ಆರೋಗ್ಯಕ್ಕೆ (For mental health)
ನಿದ್ರೆಯ ಕೊರತೆಯಿಂದಾಗಿ ಅನೇಕ ಜನರು ಅನಗತ್ಯ ಆತಂಕ ಮತ್ತು ಖಿನ್ನತೆಗೆ ಬಲಿಯಾಗುತ್ತಾರೆ. ಆದರೆ ಬೇಗನೆ ಮಲಗುವುದು ಈ ಸಮಸ್ಯೆಗಳನ್ನು ನಿಭಾಯಿಸಲು ಸಹಾಯ ಮಾಡುತ್ತದೆ. ಸಾಕಷ್ಟು ನಿದ್ರೆ ಪಡೆಯುವುದು ನಮ್ಮ ಮಾನಸಿಕ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ.
ವಿಶೇಷ ಸೂಚನೆ: ಈ ಲೇಖನದಲ್ಲಿ ಉಲ್ಲೇಖಿಸಲಾದ ವಿಧಾನಗಳು ಮತ್ತು ಸಲಹೆಗಳನ್ನು ಅನುಸರಿಸುವ ಮೊದಲು ದಯವಿಟ್ಟು ವೈದ್ಯರನ್ನು ಅಥವಾ ಸಂಬಂಧಪಟ್ಟ ತಜ್ಞರನ್ನು ಸಂಪರ್ಕಿಸಿ.
