ಆರೋಗ್ಯ ಜಾಗೃತಿ ಮತ್ತು ಅರಿವು ಮೂಡಿಸುವ ಶಿಲ್ಪ ಅನಾವರಣ ಮತ್ತು ಉಚಿತ ಆರೋಗ್ಯ ತಪಾಸಣೆ

ಉಡುಪಿ(ಏ.06): ಪ್ರತಿ ವರ್ಷ ಏ.7 ರಂದು ವಿಶ್ವ ಆರೋಗ್ಯ ದಿನವನ್ನಾಗಿ ವಿಶ್ವದ್ಯಾಂತ ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಸಾರ್ವಜನಿಕರಲ್ಲಿ ಉತ್ತಮ ಆರೋಗ್ಯದ ಕುರಿತು ಅರಿವು ಮೂಡಿಸುವುದು ಆಗಿದೆ. ಮೊದಲು ಸೋಂಕು ಕಾಯಿಲೆಗಳು ಮತ್ತು ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಅವಶ್ಯಕತೆ ಇತ್ತು ಆದರೆ ಈಗ ಅಸಾಂಕ್ರಾಮಿಕ ಮತ್ತು ಜೀವನಶೈಲಿಯಿಂದ ಬರುವ ಕಾಯಿಲೆಗಳು, ಮಧುಮೇಹ, ಹೃದ್ರೋಗ, ಕಿಡ್ನಿ ಇತ್ಯಾದಿಗಳ ತಡೆಗಟ್ಟುವ ಮಾಹಿತಿ ಮತ್ತು ಅರಿವು ಮೂಡಿಸುವ ಅವಶ್ಯಕತೆ ಇದೆ. ಇಂತಹ ಕಾರ್ಯದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಯಾವಾಗಲೂ ಮುಂಚೂಣಿಯಲ್ಲಿದೆ ಎಂದು ಉಡುಪಿ ಜಿಲ್ಲಾ ಸರ್ವಲೆನ್ಸ್ ಆಫೀಸರ್ ಡಾ. ನಾಗರತ್ನ ತಿಳಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದು(ಗುರುವಾರ) ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಸಮುದಾಯ ಆರೋಗ್ಯ ವಿಭಾಗದ ತಂಡದವರು ರಚಿಸಿರುವ ಆರೋಗ್ಯ ಜಾಗೃತಿ ಮತ್ತು ಅರಿವು ಮೂಡಿಸುವ ಶಿಲ್ಪ ಅನಾವರಣಗೊಳಿಸಿ ಮಾತನಾಡಿದ ಅವರು, ಈ ವರ್ಷದ ಘೋಷವಾಕ್ಯ "ಎಲ್ಲರಿಗೂ ಆರೋಗ್ಯ" ಎಂಬುದಾಗಿದೆ ಇದನ್ನು ಕೇಂದ್ರೀಕರಿಸುವುದರ ಜೊತೆಗೆ, ವಿಶ್ವ ಅರೋಗ್ಯ ಸಂಸ್ಥೆಯು ತನ್ನ 75 ನೇ ವಾರ್ಷಿಕೋತ್ಸವವನ್ನು ಸಾರ್ವಜನಿಕ ಆರೋಗ್ಯವನ್ನು ಸುಧಾರಿಸುವ 75 ವರ್ಷಗಳ ವಿಷಯದ ಅಡಿಯಲ್ಲಿ ಆಚರಿಸುತ್ತಿದೆ. ಇದರ ಅಂಗವಾಗಿ ಇಂದು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಬೆಳಗ್ಗಿನಿಂದ ಆರೋಗ್ಯ ಜಾಗೃತಿ ಮೂಡಿಸುವ ಭಾಗವಾಗಿ ವಿವಿಧ ತಂಡಗಳಿಂದ ಬೀದಿ ನಾಟಕವನ್ನು ಏರ್ಪಡಿಸಲಾಗಿತ್ತು ಅಂತ ತಿಳಿಸಿದ್ದಾರೆ. 

ಉಡುಪಿ: ನಿಯಮ ಉಲ್ಲಂಘಿಸುವ ಪ್ರಿಂಟಿಂಗ್ ಪ್ರೆಸ್‌ ವಿರುದ್ಧ ಕಠಿಣ ಕ್ರಮ, ಡಿಸಿ ಕೂರ್ಮಾರಾವ್

ಆಸ್ಪತ್ರೆಯ ಉದ್ಯೋಗಿಗಳಿಗೆ ಆರೋಗ್ಯದ ಕುರಿತು ಘೋಷ ವಾಕ್ಯ ರಚನಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಕೆಎಂಸಿ ಮಣಿಪಾಲದ ಡೀನ್ ಡಾ. ಪದ್ಮರಾಜ್ ಹೆಗ್ಡೆ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ಉಪ ವೈದ್ಯಕೀಯ ಅಧೀಕ್ಷಕರಾದ ಡಾ.ಶಿರನ್ ಶೆಟ್ಟಿ, ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥರಾದ ಡಾ ಅಶ್ವಿನಿ ಕುಮಾರ್ ನರ್ಸಿಂಗ್ ಸೇವೆಗಳ ಮುಖ್ಯಸ್ಥೆ ಡಾ ಶುಭ ಸೂರಿಯ ಮತ್ತು ಆಡಳಿತ ವೃಂದದವರು ಉಪಸ್ಥಿತರಿದ್ದರು. ಸುಮಾರು 1000 ಕ್ಕೂ ಹೆಚ್ಚು ಜನರು ಉಚಿತ ಅರೋಗ್ಯ ತಪಾಸಣೆಯ ಪ್ರಯೋಜನ ಪಡೆದರು.