ಮಂಕಿಪಾಕ್ಸ್, ಶಂಕಿತ ರೋಗಲಕ್ಷಣ ಹೊಂದಿದ್ದ ಯುವಕನ ವರದಿ ನೆಗೆಟಿವ್
ವಿವಿಧ ದೇಶಗಳಲ್ಲಿ ಕೊರೋನಾ ಸೋಂಕಿನ (Corona virus0 ಜೊತೆಗೆ ಮಂಕಿಪಾಕ್ಸ್ (Monkeypox) ಸಹ ತ್ವರಿತವಾಗಿ ಹರಡುತ್ತಿದೆ. ಕೋಲ್ಕತ್ತಾದಲ್ಲಿ ಯುರೋಪ್‌ನಿಂದ ಆಗಮಿಸಿದ್ದ ಯುವಕನಲ್ಲಿ ಮಂಕಿಪಾಕ್ಸ್ ರೋಗಲಕ್ಷಣಗಳು ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿತ್ತು. ಸದ್ಯ ಪರೀಕ್ಷಾ ವರದಿಯಲ್ಲಿ ನೆಗೆಟಿವ್ (Negative) ಬಂದಿದ್ದು, ಆರೋಗ್ಯ ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ಕೋಲ್ಕತ್ತಾದಲ್ಲಿ ಮಂಕಿಪಾಕ್ಸ್ ರೋಗಲಕ್ಷಣ (Monkeypox symptoms)ಗಳಿಂದ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಗೆ ನಡೆಸಿದ ಪರೀಕ್ಷೆಯಲ್ಲಿ ಮಂಕಿಪಾಕ್ಸ್ ನೆಗೆಟಿವ್ ವರದಿ ಬಂದಿದೆ. ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯಿಂದ ಅವರ ರಕ್ತದ ಮಾದರಿ ಮತ್ತು ರಾಶ್ ದ್ರವದ ವರದಿ ಶುಕ್ರವಾರ ಕೋಲ್ಕತ್ತಾಕ್ಕೆ ಬಂದಿದ್ದು, ವರದಿಯಲ್ಲಿ ಮಂಕಿಪಾಕ್ಸ್ ವೈರಸ್‌ನ (Virus) ಯಾವುದೇ ಕುರುಹು ಪತ್ತೆಯಾಗಿಲ್ಲ ಎಂಬುದನ್ನು ಇಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಮಾತ್ರವಲ್ಲ ಯುವಕನಿಗೆ ಚಿಕುನ್ ಗುನ್ಯಾಗೆ ಚಿಕಿತ್ಸೆ ನೀಡಲಾಗುವುದು ಎಂದು ಹೇಳಿದ್ದಾರೆ. ಯುವಕ ಕೆಲವು ದಿನಗಳ ಚಿಕಿತ್ಸೆ ಪಡೆದುಕೊಂಡು ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾನೆ ಎಂದು ತಿಳಿದುಬಂದಿದೆ.
ಯುರೋಪ್‌ನಿಂದ ಭಾರತಕ್ಕೆ ಮರಳಿದ ಯುವಕನಲ್ಲಿ ದದ್ದುಗಳು ಮತ್ತು ಮಂಕಿಪಾಕ್ಸ್‌ನ ಇತರ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದವು. ಪಶ್ಚಿಮ ಮಿಡ್ನಾಪುರದ ಈ ಯುವಕ ಕೆಲವು ದಿನಗಳ ಹಿಂದೆ ಯುರೋಪಿಯನ್ ದೇಶದಿಂದ ಮರಳಿದ್ದನು. ಅವನ ದೇಹದಲ್ಲಿ ಮಂಗನ ಕಾಯಿಲೆಗೆ (Disease) ಸಂಬಂಧಿಸಿದ ರೋಗಲಕ್ಷಣಗಳು ಕಂಡುಬಂದಿತ್ತು.
ಮಂಕಿಪಾಕ್ಸ್ ಸಾಂಕ್ರಾಮಿಕ ರೋಗ, ಸಿಕ್ಕಾಪಟ್ಟೆ ಡೇಂಜರಸ್: ತಜ್ಞರು
ಮಂಕಿಪಾಕ್ಸ್ ವೈರಸ್ ಪ್ರಪಂಚದ 40ಕ್ಕೂ ಹೆಚ್ಚು ದೇಶಗಳಲ್ಲಿ ಕಂಡುಬಂದಿದೆ. ಅದರಲ್ಲೂ ಯುರೋಪಿನಲ್ಲಿ ಹೆಚ್ಚಿನ ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಕಳೆದ ತಿಂಗಳವರೆಗೆ, ಮಂಕಿಪಾಕ್ಸ್ ಆಫ್ರಿಕಾದಿಂದ ಹೊರಗೆ ಹೆಚ್ಚು ಪ್ರಕರಣಗಳು ಕಂಡು ಬರಲ್ಲಿಲ್ಲ. ಹೀಗಾಗಿ ಜನರು ಸ್ಪಲ್ಪಮಟ್ಟಿಗೆ ನಿರಾಳವಾಗಿದ್ದರು. ಆದರೆ ಕಳೆದ ತಿಂಗಳು ಕಳೆದ ತಿಂಗಳು ಯುರೋಪಿನಲ್ಲಿ ಪ್ರಕರಣಗಳ ಉಲ್ಬಣವು ಸ್ಪೇನ್ ಮತ್ತು ಬೆಲ್ಜಿಯಂನಲ್ಲಿ ಹೆಚ್ಚಾದ ಪ್ರಕರಣವು ಆತಂಕಕ್ಕೆ ಕಾರಣವಾಗಿದೆ. 58 ದೇಶಗಳಲ್ಲಿ 3,417ಕ್ಕೂ ಹೆಚ್ಚು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಈಗಾಗಲೇ ದೇಶದ ವಿವಿಧ ರಾಜ್ಯಗಳ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ. ಮಂಕಿಪಾಕ್ಸ್ ರೋಗಲಕ್ಷಣಗಳನ್ನು ಹೊಂದಿರುವ ಯಾವುದೇ ಪ್ರಯಾಣಿಕರನ್ನು ತಕ್ಷಣವೇ ಪ್ರತ್ಯೇಕಿಸಲು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಮಂಕಿಪಾಕ್ಸ್ ಕಾಯಿಲೆ ಎಂದರೇನು ?
ಯುನೈಟೆಡ್ ಸ್ಟೇಟ್ಸ್‌ನ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ (ಸಿಡಿಸಿ) ಪ್ರಕಾರ, ಮಂಕಿಪಾಕ್ಸ್ ವೈರಸ್ ಸೋಂಕಿನಿಂದ ಉಂಟಾಗುವ ಅಪರೂಪದ ಕಾಯಿಲೆಯಾಗಿದೆ. ಮಂಕಿಪಾಕ್ಸ್ ವೈರಸ್ ಪಾಕ್ಸ್‌ವಿರಿಡೆ ಕುಟುಂಬದಲ್ಲಿ ಆರ್ಥೋಪಾಕ್ಸ್‌ವೈರಸ್ ಕುಲಕ್ಕೆ ಸೇರಿದೆ ಎಂದು ಅದು ಹೇಳಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಝೂನೋಟಿಕ್ ಕಾಯಿಲೆಯು ಪ್ರಾಥಮಿಕವಾಗಿ ಮಧ್ಯ ಮತ್ತು ಪಶ್ಚಿಮ ಆಫ್ರಿಕಾದ ಉಷ್ಣವಲಯದ ಮಳೆಕಾಡು ಪ್ರದೇಶಗಳಲ್ಲಿ ಕಂಡುಬರುತ್ತದೆ ಮತ್ತು ಸಾಂದರ್ಭಿಕವಾಗಿ ಇತರ ಪ್ರದೇಶಗಳಿಗೆ ರಫ್ತು ಮಾಡಲಾಗುತ್ತದೆ.
ಗಾಳಿಯಲ್ಲೂ ಹರಡುತ್ತಂತೆ ಮಂಕಿಪಾಕ್ಸ್ ವೈರಸ್, ಮಾಸ್ಕ್ ಹಾಕಿಕೊಳ್ಳುವಂತೆ ತಜ್ಞರ ಸಲಹೆ
ರೋಗದ ಲಕ್ಷಣಗಳು
ಜ್ವರ, ದದ್ದು, ತೀವ್ರವಾದ ತಲೆನೋವು, ಬೆನ್ನು ನೋವು, ಸ್ನಾಯು ನೋವು (ಮೈಯಾಲ್ಜಿಯಾ), ತೀವ್ರವಾದ ಅಸ್ತೇನಿಯಾ (ಶಕ್ತಿಯ ಕೊರತೆ) ಮತ್ತು ಊದಿಕೊಂಡ ದುಗ್ಧರಸ ಗ್ರಂಥಿಗಳು ಮಂಕಿಪಾಕ್ಸ್‌ಗೆ ಸಂಬಂಧಿಸಿದ ಸಾಮಾನ್ಯ ಲಕ್ಷಣಗಳಾಗಿವೆ. WHO ಪ್ರಕಾರ, ಜ್ವರ ಕಾಣಿಸಿಕೊಂಡ 1-3 ದಿನಗಳಲ್ಲಿ ಮಂಕಿಪಾಕ್ಸ್ ರೋಗಿಗಳಲ್ಲಿ ಚರ್ಮದ ಸಮಸ್ಯೆಗಳು ಕಂಡುಬರುತ್ತವೆ. ದದ್ದುಗಳು ಮುಖದ ಮೇಲೆ ಹೆಚ್ಚು ಕೇಂದ್ರೀಕೃತವಾಗಿರುತ್ತವೆ. ಮುಖದ ಹೊರತಾಗಿ, ಇದು ಅಂಗೈಗಳು ಮತ್ತು ಪಾದಗಳ ಅಡಿಭಾಗ, ಬಾಯಿಯ ಲೋಳೆಯ ಪೊರೆಗಳು, ಜನನಾಂಗಗಳು ಮತ್ತು ಕಾಂಜಂಕ್ಟಿವಾ ಮತ್ತು ಕಾರ್ನಿಯಾದ ಮೇಲೆ ಪರಿಣಾಮ ಬೀರುತ್ತದೆ ಎಂದು ಜಾಗತಿಕ ಆರೋಗ್ಯ ಸಂಸ್ಥೆ ಹೇಳಿದೆ. ಮಂಕಿಪಾಕ್ಸ್‌ನ ಕಾವು ಕಾಲಾವಧಿಯು (ಸೋಂಕಿನಿಂದ ರೋಗಲಕ್ಷಣಗಳ ಪ್ರಾರಂಭದವರೆಗೆ) ಸಾಮಾನ್ಯವಾಗಿ 6 ರಿಂದ 13 ದಿನಗಳವರೆಗೆ ಇರುತ್ತದೆ ಎಂದು ತಿಳಿಸಲಾಗಿದೆ.