ಸೌಥಾಂಪ್ಟನ್: 2019ರ ಏಕದಿನ ವಿಶ್ವಕಪ್‌ನ ಮೊದಲ ಪಂದ್ಯವನ್ನಾಡುವ ಮೊದಲೇ ಟೀಂ ಇಂಡಿಯಾ ಆಘಾತಕ್ಕೆ ಒಳಗಾಗಿದ್ದು, ನೆಟ್ಸ್‌ನಲ್ಲಿ ಅಭ್ಯಾಸ ನಡೆಸುವ ವೇಳೆ ನಾಯಕ ವಿರಾಟ್ ಕೊಹ್ಲಿ ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ. 

ಭಾರತ ಜೂ.5(ಬುಧವಾರ)ರಂದು ದಕ್ಷಿಣ ಆಫ್ರಿಕಾ ವಿರುದ್ಧ ತನ್ನ ಮೊದಲ ಪಂದ್ಯವನ್ನಾಡಲಿದೆ. ‘ಬ್ಯಾಟಿಂಗ್ ಅಭ್ಯಾಸ ನಡೆಸುವ ವೇಳೆ ವಿರಾಟ್ ಬೆರಳಿಗೆ ಪೆಟ್ಟಾಗಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಆರಾಮಾಗಿದ್ದಾರೆ’ ಎಂದು ತಂಡದ ಮೂಲಗಳು ತಿಳಿಸಿವೆ. ಶನಿವಾರ ನೆಟ್ಸ್‌ನಲ್ಲಿ ಅಭ್ಯಾಸ ಮಾಡುವಾಗ ವಿರಾಟ್ ಕೊಹ್ಲಿ ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ. ತಕ್ಷಣ ತಂಡದ ಫಿಸಿಯೋ ಪ್ಯಾಟ್ರಿಕ್ ಫರ್ಹಾತ್, ವಿರಾಟ್‌ಗೆ ಚಿಕಿತ್ಸೆ ನೀಡಿದ್ದಾರೆ. ಇದಾದ ಬಳಿಕ ಫಿಸಿಯೋ ಸೂಚನೆಯಂತೆ ವಿರಾಟ್ ಅಂಗಳ ತೊರೆದಿದ್ದು, ಐಸ್ ಕ್ಯೂಬ್‌ಗಳನ್ನು ತುಂಬಿಸಿದ್ದ ಲೋಟದಲ್ಲಿ ಪೆಟ್ಟಾದ ಬೆರಳನ್ನು ಇಟ್ಟುಕೊಂಡಿರುವುದು ಕಂಡು ಬಂದಿದೆ.

"

ಈ ಬಾರಿ ತಂಡಕ್ಕೆ ಪಂದ್ಯಾವಳಿ ಆರಂಭಕ್ಕೂ ಮುನ್ನವೇ ಗಾಯದ ಸಮಸ್ಯೆ ಕಾಡುತ್ತಿದ್ದು, ಮೊಣಕೈ ಗಾಯದ ಸಮಸ್ಯೆಯಿಂದಾಗಿ ಆಲ್‌ರೌಂಡರ್ ವಿಜಯ್ ಶಂಕರ್ ಅವರು ನ್ಯೂಜಿಲೆಂಡ್ ವಿರುದ್ಧ ನಡೆದ ಅಭ್ಯಾಸ ಪಂದ್ಯಕ್ಕೆ ಅಲಭ್ಯರಾಗಿದ್ದರು. ತಂಡದ ಮತ್ತೋರ್ವ ಆಟಗಾರ ಕೇದಾರ್ ಜಾಧವ್ ಸಹ ಎರಡೂ ಅಭ್ಯಾಸ ಪಂದ್ಯಗಳಿಗೆ ಅಲಭ್ಯರಾಗಿದ್ದರು. 

ವಿಶ್ವಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ ನೋಡಿ...