ಕಾರ್ಡಿಫ್(ಜೂ.08): ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ಹಾಗೂ ಬಾಂಗ್ಲಾದೇಶ ಬದ್ಧವೈರಿಗಳು. ಕಳೆದರಡು ವಿಶ್ವಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶ ವಿರುದ್ಧ ಮುಗ್ಗರಿಸಿದ್ದ ಇಂಗ್ಲೆಂಡ್ ಇದೀಗ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ. ಈಗಾಗಲೇ ಟಾಸ್ ಗೆದ್ದಿರುವ ಬಾಂಗ್ಲಾದೇಶ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಬಾಂಗ್ಲಾ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇಂಗ್ಲೆಂಡ್ ತಂಡದಲ್ಲಿ 1 ಬದಲಾವಣೆ ಮಾಡಲಾಗಿದೆ. ಲಿಯಾಮ್ ಪ್ಲಂಕೆಟ್ ತಂಡ ಸೇರಿಕೊಂಡಿದ್ದಾರೆ.

2019ರ ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಸೌತ್ಆಫ್ರಿಕಾ ವಿರುದ್ಧ ಗೆಲುವು ಸಾಧಿಸಿದ ಇಂಗ್ಲೆಂಡ್, ಪಾಕಿಸ್ತಾನ ವಿರುದ್ದ ಮುಗ್ಗಸಿದೆ. ಇದೀಗ 3ನೇ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಗೆಲುವು ಸಾಧಿಸೋ ವಿಶ್ವಾಸದಲ್ಲಿದೆ. ಇತ್ತ ಬಾಂಗ್ಲಾ ಬಲಿಷ್ಠ ಸೌತ್ಆಫ್ರಿಕಾ ವಿರುದ್ಧ ಗೆಲುವು ಸಾಧಿಸಿದೆ, 2ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ವಿರೋಚಿತ ಸೋಲು ಕಂಡಿದೆ.