ಲಂಡನ್[ಜೂ.09]: ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ನಿರೀಕ್ಷೆಯಂತೆಯೇ ಶುಭಾರಂಭ ಮಾಡಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ಬೀಗಿದ್ದ ಭಾರತ ಇಂದು 5 ಬಾರಿ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಹೈವೋಲ್ಟೇಜ್ ಪಂದ್ಯಕ್ಕೆ ಸಜ್ಜಾಗಿದೆ.

ಸೂಪರ್ ಸಂಡೆಯಲ್ಲಿಂದು ಇಂಡೋ-ಆಸೀಸ್ ಫೈಟ್

ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ 6 ವಿಕೆಟ್ ಗಳ ಜಯ ಸಾಧಿಸಿದ್ದರೂ, ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಕೆಲ ಬದಲಾವಣೆಗಳೊಂದಿಗೆ ವಿರಾಟ್ ಪಡೆ ಕಣಕ್ಕಿಳಿಯುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಓವಲ್ ಪಿಚ್ ವೇಗಿಗಳಿಗೆ ಹೆಚ್ಚು ನೆರವು ನೀಡುವ ಸಾಧ್ಯತೆಯಿರುವುದರಿಂದ ಮೂರು ತಜ್ಞ ವೇಗಿಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಹೀಗಾದರೆ ಕುಲ್ದೀಪ್ ಯಾದವ್ ತಂಡದಿಂದ ಹೊರಗುಳಿಯುವ ಸಾಧ್ಯತೆಯಿದೆ. ಒಂದು ವೇಳೆ ಕುಲ್ದೀಪ್ ಯಾದವ್ ಹೊರಗುಳಿದರೆ, ಸ್ಪಿನ್ ಸಮತೋಲನ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೇದಾರ್ ಜಾಧವ್ ಬದಲಿಗೆ ರವೀಂದ್ರ ಜಡೇಜಾ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಬಹುದು. ಇನ್ನುಳಿದಂತೆ ಹೆಚ್ಚಿನ ಬದಲಾವಣೆ ಆಗುವ ಸಾಧ್ಯತೆಯಿಲ್ಲ.

ಭಾರತ-ಆಸ್ಟ್ರೇಲಿಯಾ ನಡುವಿನ ಪಂದ್ಯ ಇಂದು ಮಧ್ಯಾಹ್ನ 03 ಗಂಟೆಯಿಂದ ಆರಂಭಗೊಳ್ಳಲಿದ್ದು, ವಿರಾಟ್ ಪಡೆಗಿಂದು ನಿಜವಾದ ಅಗ್ನಿ ಪರೀಕ್ಷೆ ಎದುರಾಗಲಿದೆ. ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಉತ್ತಮ ಫಾರ್ಮ್ ನಲ್ಲಿದ್ದು, ಮತ್ತೊಮ್ಮೆ ಪಂದ್ಯ ಗೆಲ್ಲಿಸಿಕೊಡಬಲ್ಲ ಪ್ರದರ್ಶನ ನೀಡುವ ಉತ್ಸಾಹದಲ್ಲಿದ್ದಾರೆ. 

ಇಂದಿನ ಪಂದ್ಯಕ್ಕೆ ಸುವರ್ಣನ್ಯೂಸ್.ಕಾಂ ಆಯ್ಕೆ ಮಾಡಿದ ಸಂಭಾವ್ಯ ಟೀಂ ಇಂಡಿಯಾ ಇಲ್ಲಿದೆ ನೋಡಿ...

ಭಾರತ: ರೋಹಿತ್‌ ಶರ್ಮಾ, ಶಿಖರ್‌ ಧವನ್‌, ವಿರಾಟ್‌ ಕೊಹ್ಲಿ, ಕೆ.ಎಲ್‌.ರಾಹುಲ್‌, ಎಂ.ಎಸ್‌.ಧೋನಿ, ಕೇದಾರ್‌ ಜಾಧವ್‌/ರವೀಂದ್ರ ಜಡೇಜಾ, ಹಾರ್ದಿಕ್‌ ಪಾಂಡ್ಯ, ಭುವನೇಶ್ವರ್‌ ಕುಮಾರ್‌, ಕುಲ್ದೀಪ್‌ ಯಾದವ್‌/ಮೊಹಮ್ಮದ್ ಶಮಿ, ಮೊಹಮದ್‌ ಶಮಿ, ಜಸ್ಪ್ರೀತ್‌ ಬುಮ್ರಾ.