ಭಾರತ-ಆಸ್ಟ್ರೇಲಿಯಾ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿದೆ. ಎರಡು ತಂಡಗಳು ಹೀಗಿವೆ ನೋಡಿ...
ಲಂಡನ್[ಜೂ.09]: ಭಾರತ-ಆಸ್ಟ್ರೇಲಿಯಾ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಎರಡೂ ತಂಡಗಳು ಗೆಲುವಿನ ಲಯದಲ್ಲಿದ್ದು, ಟೀಂ ಇಂಡಿಯಾ ಕಳೆದ ವಿಶ್ವಕಪ್ ನಲ್ಲಿನ ಸೋಲಿನ ಸೇಡು ತೀರಿಸಿಕೊಳ್ಳಲು ಕಣಕ್ಕಿಳಿದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇನ್ನು ಆಸ್ಟ್ರೇಲಿಯಾ ತಂಡದಲ್ಲೂ ಯಾವುದೇ ಬದಲಾವಣೆ ಮಾಡಿಲ್ಲ.
2015ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸತತ 7 ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ಪ್ರವೇಶಿಸಿದ್ದ ಭಾರತ, ಆಸ್ಟ್ರೇಲಿಯಾ ವಿರುದ್ಧ ನಾಲ್ಕರ ಘಟ್ಟದಲ್ಲಿ ಸೋತು ಕೂಟದಿಂದ ಹೊರಬಿದ್ದಿತ್ತು. ಇನ್ನು 1999ರ ವಿಶ್ವಕಪ್ ಟೂರ್ನಿಯಲ್ಲೂ ಇದೇ ಓವಲ್ ಮೈದಾನದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದವು, ಆ ಪಂದ್ಯದಲ್ಲೂ ಆಸ್ಟ್ರೇಲಿಯಾ 77 ರನ್‌ಗಳ ಅಂತರದ ಜಯಭೇರಿ ಬಾರಿಸಿತ್ತು.
ತಂಡಗಳು ಹೀಗಿವೆ
ಭಾರತ:
Scroll to load tweet…
ಆಸ್ಟ್ರೇಲಿಯಾ:
Scroll to load tweet…
