ಓವಲ್(ಜೂ.09): ವಿಶ್ವಕಪ್ ಟೂರ್ನಿಯ 14ನೇ ಲೀಗ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಹೋರಾಟ ತೀವ್ರ ಕುತೂಹಲ ಕೆರಳಿಸಿದೆ. ಶಿಖರ್ ಧವನ್ ಆಕರ್ಷಕ ಶತಕ ರೋಹಿತ್ ಹಾಗೂ ವಿರಾಟ್ ಕೊಹ್ಲಿ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ 5 ವಿಕೆಟ್ ನಷ್ಟಕ್ಕೆ 352 ರನ್ ಸಿಡಿಸಿದೆ. ಈ  ಮೂಲಕ ಆಸ್ಟ್ರೇಲಿಯಾಗೆ 353 ರನ್ ಟಾರ್ಗೆಟ್ ನೀಡಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ಟೀಂ ಇಂಡಿಯಾ ಅತ್ಯುತ್ತಮ ಆರಂಭ ಪಡೆಯಿತು. ಶಿಖರ್ ಧವನ್ ಹಾಗೂ ರೋಹಿತ್ ಶರ್ಮಾ ಮೊದಲ ವಿಕೆಟ್‌ಗೆ 127 ರನ್ ಜೊತೆಯಾಟ ನೀಡಿತು. ರೋಹಿತ್ ಶರ್ಮಾ 57 ರನ್ ಸಿಡಿಸಿ ಔಟಾದರು. ಆದರೆ ಧವನ್ ಹೋರಾಟ ಮುಂದುವರಿಸಿದರು. ನಾಯಕ ವಿರಾಟ್ ಕೊಹ್ಲಿ ಜೊತೆ ಸೇರಿದ ಧವನ್ ಇನ್ನಿಂಗ್ಸ್ ಮುಂದುವರಿಸಿದರು. ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಧವನ್ ಸೆಂಚುರಿ ಸಿಡಿಸಿದರು.

ಧವನ್ 117 ರನ್ ಸಿಡಿಸಿ ಔಟಾದರು. ಬಳಿಕ  ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಕೊಹ್ಲಿ ಹಾಗೂ ಪಾಂಡ್ಯ ಅಬ್ಬರದಿಂದ ಭಾರತ 300ರನ್ ಗಡಿ ದಾಟಿತು. ಆದರೆ ಹಾರ್ದಿಕ್ 27 ಎಸೆತದಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 48 ರನ್ ಸಿಡಿಸಿ ಔಟಾದರು. ಸ್ಲಾಗ್ ಓವರ್‌ಗಳಲ್ಲಿ ಕೊಹ್ಲಿ ಹಾಗೂ ಎಂ.ಎಸ್.ಧೋನಿ ಹೋರಾಟ ನೀಡಿದರು. 

ಅಂತಿಮ ಓವರ್‌ನಲ್ಲಿ ಧೋನಿ ವಿಕೆಟ್ ಪತನಗೊಂಡಿತು. ಧೋನಿ 14 ಎಸೆತದಲ್ಲಿ 27 ರನ್ ಸಿಡಿಸಿದರು. ವಿರಾಟ್ ಕೊಹ್ಲಿ  77 ಎಸೆತದಲ್ಲಿ 82 ರನ್ ಸಿಡಿಸಿ ಔಟಾದರು. ಕೆಎಲ್ ರಾಹುಲ್ 11 ಅಜೇಯ ರನ್ ಸಿಡಿಸಿದರು. ಈ ಮೂಲಕ ಟೀಂ ಇಂಡಿಯಾ 5 ವಿಕೆಟ್ ನಷ್ಟಕ್ಕೆ 352 ರನ್ ಸಿಡಿಸಿತು.