ಸೌಥಾಂಪ್ಟನ್(ಜೂ.25): ವಿಶ್ವಕಪ್ ಟೂರ್ನಿಯಲ್ಲಿ ಬಲಿಷ್ಠ ತಂಡಗಳಿಗೆ ಸೋಲುಣಿಸಿರುವ ಬಾಂಗ್ಲಾದೇಶ ಸೆಮಿಫೈನಲ್ ರೇಸ್‌ನಲ್ಲಿ ಕಾಣಿಸಿಕೊಂಡಿದೆ. ಆಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ 62 ರನ್ ಗೆಲುವು ದಾಖಲಿಸೋ ಮೂಲಕ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ. ಆಫ್ಘನ್ ವಿರುದ್ದದ ಗೆಲುವಿನ ಬೆನ್ನಲ್ಲೇ ಬಾಂಗ್ಲಾದೇಶ, ಟೀಂ ಇಂಡಿಯಾವನ್ನು ಸೋಲಿಸೋ ವಿಶ್ವಾಸದಲ್ಲಿದೆ.

ಇದನ್ನೂ ಓದಿ: ವಿಶ್ವಕಪ್ 2019: ಬಾಂಗ್ಲಾ ವಿರುದ್ಧ ಮುಗ್ಗರಿಸಿದ ಅಫ್ಘಾನಿಸ್ತಾನ!

ಬಾಂಗ್ಲಾದೇಶ ಆಲ್ರೌಂಡರ್ ಶಕೀಬ್ ಅಲ್ ಹಸನ್ ವಿಶ್ವಕಪ್ ಟೂರ್ನಿಯಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಪ್ರತಿ ಪಂದ್ಯದಲ್ಲೂ ಶಕೀಬ್ ತಂಡದ ಪರ ಗರಿಷ್ಠ ರನ್ ಸಿಡಿಸುತ್ತಿದ್ದಾರೆ. ಇದೀಗ ಬಲಿಷ್ಠ ಟೀಂ ಇಂಡಿಯಾವನ್ನು ಮಣಿಸೋ ಸಾಮರ್ಥ್ಯ ಬಾಂಗ್ಲಾದೇಶ ತಂಡಕ್ಕಿದೆ ಎಂದಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಹಾಗೂ  ಫೀಲ್ಡಿಂಗ್ ವಿಭಾಗದಲ್ಲಿ ಬಾಂಗ್ಲಾ ಸಮತೋಲನದಿಂದ ಕೂಡಿದೆ. ಹೀಗಾಗಿ ಭಾರತವನ್ನು ಸೋಲಿಸುವ ಸಾಮರ್ಥ್ಯವಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಆಫ್ಘನ್,ಆಫ್ರಿಕಾ ಬಿಟ್ಟು ಉಳಿದ 8 ತಂಡಗಳಿಗೂ ಇದೆ ಸೆಮೀಸ್ ಚಾನ್ಸ್!

ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೂ ಮುನ್ನ ಆಫ್ಘಾನಿಸ್ತಾನ ಎಚ್ಚರಿಕೆ ನೀಡಿತ್ತು. ಆದರೆ ಆಫ್ಘಾನ್‌ಗೆ ಸೋಲುಣಿಸೋ ಮೂಲಕ ಬಾಂಗ್ಲಾ ತಿರುಗೇಟು ನೀಡಿದೆ. ಇದೀಗ ಬಾಂಗ್ಲಾ ಪಂದ್ಯಕ್ಕೂ ಮುನ್ನ ಮೈಂಡ್ ಗೇಮ್ ಶುರುವಾಗಿದೆ. ಜುಲೈ 2 ರಂದು ಬರ್ಮಿಂಗ್‌ಹ್ಯಾಮ್‌ನಲ್ಲಿ ಟೀಂ ಇಂಡಿಯಾ ಹಾಗೂ ಬಾಂಗ್ಲಾದೇಶ ಮುಖಾಮುಖಿಯಾಗಲಿದೆ.