ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ವಿಶ್ವಕಪ್ ಸೆಮಿಫೈನಲ್ ಪಂದ್ಯ ಮಳೆಯಿಂದಾಗಿ ಅನಿರೀಕ್ಷಿತ ಫಲಿತಾಂಶ ಹೊರಬಿದ್ದಿತ್ತು. ಇದೀಗ ಫೈನಲ್ ಪಂದ್ಯಕ್ಕೂ ಮಳೆ ಅಡ್ಡಿಯಾಗಿದೆ. ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ನಡುವಿನ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ.
World cup Final: ಇಂಗ್ಲೆಂಡ್ vs ನ್ಯೂಜಿಲೆಂಡ್ ಪಂದ್ಯದ ಸ್ಕೋರ್ ಎಷ್ಟು?
ಲಾರ್ಡ್ಸ್(ಜು.14): ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಎಲ್ಲರು ಕಾತರದಿಂದ ಕಾಯುತ್ತಿದ್ದಾರೆ. ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ಪ್ರಶಸ್ತಿಗಾಗಿ ಹೋರಾಡಲು ಸಜ್ಜಾಗಿದೆ. ಆದರೆ ಮಳೆಯಿಂದ ಟಾಸ್ ಪ್ರಕ್ರಿಯೆ ವಿಳಂಬವಾಗಿದೆ. ಇಂದು ಬೆಳಗ್ಗೆ ಸುರಿದ ಮಳೆಯಿಂದಾಗಿ ಮೈದಾನ ಒದ್ದೆಯಾಗಿದೆ. ಸದ್ಯ ಮಳೆ ನಿಂತಿದೆ. ಆದರೆ ಮೈದಾನ ಸಜ್ಜುಗೊಳಿಸುತ್ತಿರುವ ಕಾರಣ ಪಂದ್ಯ ವಿಳಂಬವಾಗಲಿದೆ. ಸುಮಾರು 15 ನಿಮಿಷಗಳ ಕಾಲ ಟಾಸ್ ಪ್ರಕ್ರಿಯೆ ವಿಳಂಬವಾಗಲಿದೆ ಎಂದು ಫೈನಲ್ ಪಂದ್ಯದ ರೆಫ್ರಿ ಸೂಚಿಸಿದ್ದಾರೆ.
Scroll to load tweet…
