ಮ್ಯಾಂಚೆಸ್ಟರ್(ಜು.09): ನ್ಯೂಜಿಲೆಂಡ್ ವಿರುದ್ದದ ವಿಶ್ವಕಪ್ ಸೆಮಿಫೈನಲ್ ಪಂದ್ಯಕ್ಕೆ ಟೀಂ ಇಂಡಿಯಾ ಒಂದು ಬದಲಾವಣೆ ಮಾಡಿದೆ. ಇದೀಗ ತಂಡದ ಆಯ್ಕೆಗೆ ವಿರೋಧ ವ್ಯಕ್ತವಾಗಿದೆ. ಕುಲ್ದೀಪ್ ಯಾದವ್ ಬದಲು ಯಜುವೇಂದ್ರ ಚಹಾಲ್‌ಗೆ ಅವಕಾಶ ನೀಡಲಾಗಿದೆ. ತಂಡದ ಆಯ್ಕೆಯಲ್ಲಿ ನಾಯಕ ವಿರಾಟ್ ಕೊಹ್ಲಿ ಸರಿಯಾಗಿ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶಮಿಗೆ ಮತ್ತೆ ವಿಶ್ರಾಂತಿ; ಕೊಹ್ಲಿ ಕೋಪಕ್ಕೆ ತುತ್ತಾದ್ರಾ ಭಾರತದ ವೇಗಿ?

ಶ್ರೀಲಂಕಾ ವಿರುದ್ಧದ ಪಂದ್ಯದಿಂದ ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿತ್ತು. ನ್ಯೂಜಿಲೆಂಡ್ ವಿರುದ್ಧ ಶಮಿ ಕಮ್‌ಬ್ಯಾಕ್ ಮಾಡಲಿದ್ದಾರೆ ಅನ್ನೋ ನಿರೀಕ್ಷೆ ಹುಸಿಯಾಗಿದೆ. ಶಮಿಗೆ ಮತ್ತೆ ವಿಶ್ರಾಂತಿ ನೀಡಲಾಗಿದೆ. ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದರೂ ಶಮಿಗೆ ವಿಶ್ರಾಂತಿ ನೀಡಿರುವುದು ಆಶ್ಚರ್ಯ ತಂದಿದೆ ಎಂದು ಅಭಿಮಾನಿಗಳು ತಂಡದ ಆಯ್ಕೆ ವಿರುದ್ಧ ಗುಡುಗಿದ್ದಾರೆ.