ಸೌಥಾಂಪ್ಟನ್(ಜೂ.22): ಆಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಬಹುತೇಕ ಬ್ಯಾಟ್ಸ್‌ಮನ್‌ಗಳು ನಿಧಾನಗತಿಯಲ್ಲಿ ಬ್ಯಾಟ್ ಬೀಸಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಹೊರತು ಪಡಿಸಿದರೆ ಇನ್ನುಳಿದ ಎಲ್ಲಾ ಬ್ಯಾಟ್ಸ್‌ಮನ್‌ಗಳು ಉತ್ತಮ ರನ್ ರೇಟ್ ಕಾಪಾಡಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಅದರಲ್ಲೂ ಎಂ.ಎಸ್.ಧೋನಿ 52 ಎಸೆತದಲ್ಲಿ 28 ರನ್ ಸಿಡಿಸಿದ್ದಾರೆ.

ಇದನ್ನೂ ಓದಿ: ಇಂಡೋ-ಆಫ್ಘಾನ್ ಪಂದ್ಯ- ಅಜರುದ್ದೀನ್ ದಾಖಲೆ ಸರಿಗಟ್ಟಿದ ಕೊಹ್ಲಿ!

ಧೋನಿ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶನಕ್ಕೆ ಟೀಕೆಗಳು ವ್ಯಕ್ತವಾಗಿದೆ. ಧೋನಿ ಬದಲು ರಿಷಬ್ ಪಂತ್ ಸೂಕ್ತ ಅನ್ನೋ ಮಾತುಗಳು ಕೇಳಿ ಬರುತ್ತಿದೆ. ಧೋನಿ ಸ್ಟ್ರೈಕ್ ರೊಟೇಟ್ ಮಾಡಲು ಪರದಾಡಿದ್ದಾರೆ, ಇನ್ನು ರನ್ ಹೇಗೆ ಸಾಧ್ಯ ಎಂದು ಟೀಕಿಸಿದ್ದಾರೆ.