ಲಂಡನ್(ಜು.13): ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಹೊರಬಿದ್ದರೂ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಪ್ರತಿ ಪಂದ್ಯದಲ್ಲೂ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ವೇಗಿ ಜಸ್ಪ್ರೀತ್ ಬುಮ್ರಾ ಅಭಿಮಾನಿಗಳಿಗೆ ಹೆಚ್ಚು ಇಷ್ಟವಾಗಿದ್ದಾರೆ. ಡೆತ್ ಓವರ್‌ಗಳಲ್ಲಿ ಬುಮ್ರಾ ಬೌಲಿಂಗ್ ಅಭಿಮಾನಿಗಳಿಗೆ ಹೊಸ ಭರವಸೆ ಮೂಡಿಸಿದೆ. ಈ ವಿಶ್ವಕಪ್ ಟೂರ್ನಿಯಲ್ಲಿ ಬುಮ್ರಾ ಪ್ರದರ್ಶನದಿಂದ ಪ್ರಭಾವಿತರಾದ ಅಜ್ಜಿ, ಇದೀಗ ಬುಮ್ರಾ ಬೌಲಿಂಗ್ ಶೈಲಿ ಅನುಕರಣೆ ಮಾಡಿ ಗಮನಸೆಳೆದಿದ್ದಾರೆ. 

ಇದನ್ನೂ ಓದಿ: ಬುಮ್ರಾ ಬೌಲಿಂಗ್ ಶೈಲಿ ಅನುಕರಿಸಿದ ವಿರಾಟ್ ಕೊಹ್ಲಿ!

ವಿಶ್ವಕಪ್ ಟೂರ್ನಿಯಲ್ಲಿ ಜಸ್ಪ್ರೀತ್ ಬುಮ್ರಾ ಅದ್ಭುತ ಬೌಲಿಂಗ್ ದಾಳಿ ಭಾರತೀಯರಿಗೆ ಹೆಚ್ಚು ಖುಷಿ ನೀಡಿದೆ. ಟೀಂ ಇಂಡಿಯಾ ಪಂದ್ಯವನ್ನು ಮಿಸ್ ಮಾಡದೆ ನೋಡಿ ಅಭಿಮಾನಿ ಅಜ್ಜಿ, ಬುಮ್ರಾ ಬೌಲಿಂಗ್ ಶೈಲಿಯನ್ನು ಅನುಕರಿಸಿದ್ದಾರೆ. ಅಜ್ಜಿ ಅನುಕರಣೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

ಇದನ್ನೂ ಓದಿ: ಬುಮ್ರಾ ಭಯಕ್ಕೆ ನಿದ್ರೆಯೇ ಮಾಡಿರಲಿಲ್ವಂತೆ ಕಿವೀಸ್‌ನ ಈ ಬ್ಯಾಟ್ಸ್‌ಮನ್..!

ಬುಮ್ರಾ ಬೌಲಿಂಗ್ ಶೈಲಿ ಅನುಕರಣೆ ಸುದ್ದಿಯಾಗುತ್ತಿದ್ದಂತೆ ಸ್ವತಃ ಬುಮ್ರಾ ಟ್ವೀಟ್ ಮಾಡಿದ್ದಾರೆ. ನನ್ನ ಶ್ರಮ ಸಾರ್ಥಕವಾಯಿತು ಎಂದು ಟ್ವೀಟ್ ಮಾಡಿದ್ದಾರೆ. ಜಸ್ಪ್ರೀತ್ ಬುಮ್ರಾ ವಿಶಿಷ್ಠ ಶೈಲಿ ಬೌಲಿಂಗ್ ಆ್ಯಕ್ಷನ್ ಹೊಂದಿದ್ದಾರೆ. ಇದು ಕೂಡ ಎದುರಾಳಿ ಬ್ಯಾಟ್ಸ್‌ಮನ್‌ಗಳನ್ನು ತಬ್ಬಿಬ್ಬು ಮಾಡಿದೆ. ಇದೀಗ ಬುಮ್ರಾ ಬೌಲಿಂಗ್ ಶೈಲಿ ಹೆಚ್ಚು ಅಭಿಮಾನಿಗಳು ಅನುಕರಣೆ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ನಾಯಕ ವಿರಾಟ್ ಕೊಹ್ಲಿ ಬುಮ್ರಾ ಬೌಲಿಂಗ್ ಶೈಲಿ ಅನುಕರಣೆ ಮಾಡಿದ್ದರು.