ಲಾರ್ಡ್ಸ್(ಜು.15): ಕ್ರಿಕೆಟ್ ಜಗತ್ತಿನ ಬಹುದೊಡ್ಡ ಹಬ್ಬ ವಿಶ್ವಕಪ್ ಟೂರ್ನಿಗೆ ತೆರೆ ಬಿದ್ದಿದೆ. ಇಂಗ್ಲೆಂಡ್ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ನ್ಯೂಜಿಲೆಂಡ್ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಇತ್ತ ಭಾರತ ಹಾಗೂ ಆಸ್ಟ್ರೇಲಿಯಾ ಸೆಮಿಫೈನಲ್ ಪಂದ್ಯದಿಂದಲೇ ಹೊರಬಿತ್ತು. ಈ ಟೂರ್ನಿಯಲ್ಲಿ 10 ತಂಡಗಳು ಸ್ಟಾರ್ ಬ್ಯಾಟ್ಸ್‌ಮನ್‌ಗಳು ಸ್ಫೋಟಕ ಬ್ಯಾಟಿಂಗ್ ಮೂಲಕ ಅಭಿಮಾನಿಗಳಿಗೆ ಮನರಂಜನೆ ನೀಡಿದ್ದಾರೆ. ಈ ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ರನ್ ಸಿಡಿದ ಟಾಪ್ ಬ್ಯಾಟ್ಸ್‌ಮನ್ ವಿವರ ಇಲ್ಲಿದೆ.

ಟೀಂ ಇಂಡಿಯಾ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ 9 ಇನ್ನಿಂಗ್ಸ್‌‌ಗಳಲ್ಲಿ 648 ರನ್ ಸಿಡಿಸೋ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. ಇನ್ನು ಆಸ್ಟ್ರೇಲಿಯಾದ ಡೇವಿಡ್ ವಾರ್ನರ್  10 ಇನ್ನಿಂಗ್ಸ್‌ಗಳಲ್ಲಿ 647 ರನ್ ಸಿಡಿಸಿದ್ದಾರೆ. ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ 8 ಇನ್ನಿಂಗ್ಸ್‌ಗಳಿಂದ 606 ರನ್ ಹಾಗೂ 11 ವಿಕೆಟ್ ಕಬಳಿಸಿದ್ದಾರೆ. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ 11 ಇನ್ನಿಂಗ್ಸ್‌ಗಳಲ್ಲಿ 556 ರನ್ ಸಿಡಿಸಿದ್ದಾರೆ.