ಇಸ್ಲಾಮಾಬಾದ್(ಜೂ.16): ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಬದ್ಧವೈರಿಗಳ ಕದನಕ್ಕೆ ಕ್ರಿಕೆಟ್ ದಿಗ್ಗಜರು ಸೇರಿದಂತೆ ಹಲವರು ಶುಭಕೋರಿದ್ದಾರೆ.  ರೋಚಕ ಪಂದ್ಯ ಆರಂಭಕ್ಕೂ ಮುನ್ನ ಪಾಕಿಸ್ತಾನ ತಂಡಕ್ಕೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿಶೇಷ ಸಂದೇಶ ರವಾನಿಸಿದ್ದಾರೆ. 

ಭಾರತ ವಿರುದ್ದದ ಪಂದ್ಯದ ಫಲಿತಾಂಶ ಏನೇ ಆಗಿದ್ದರೂ ಸ್ವೀಕರಿಸಿ. ಈ ಪಂದ್ಯದಲ್ಲಿ ಭಾರತ ಗೆಲುವಿನ ಫೇವರಿಟ್ ಆಗಿರಬಹುದು. ಆದರೆ ಕ್ರೀಡಾಸ್ಪೂರ್ತಿಯಿಂದ ಕೊನೆಯ ಎಸೆತದವರೆಗೂ ಹೋರಾಡಿ. ಇಡೀ ದೇಶದ ಪ್ರಾರ್ಥನೆ ನಿಮ್ಮೊಂದಿಗಿದೆ ಎಂದು ಟ್ವೀಟ್ ಮಾಡಿದ್ದಾರೆ.