ಬಾಂಗ್ಲಾ ವಿರುದ್ಧ ಸೆಂಚುರಿ; ದಿಗ್ಗಜನ ದಾಖಲೆ ಸರಿಗಟ್ಟಿದ ರೋಹಿತ್!

2019ರ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ದಾಖಲೆ ಬರೆದಿದ್ದಾರೆ. ಬಾಂಗ್ಲಾದೇಶ ವಿರುದ್ಧ ಶತಕ ಸಿಡಿಸೋ ಮೂಲಕ ರೋಹಿತ್ ಬರೆದ ದಾಖಲೆ ಏನು? ಇಲ್ಲಿದೆ ವಿವರ.

Rohit sharma hit 4th world cup century and equals kumar sangakkara record

ಬರ್ಮಿಂಗ್‌ಹ್ಯಾಮ್(ಜು.02): ಬಾಂಗ್ಲಾದೇಶ ವಿರುದ್ಧದ ವಿಶ್ವಕಪ್ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಆಕರ್ಷಕ ಸೆಂಚುರಿ ಸಿಡಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ 26ನೇ ಸೆಂಚುರಿ ದಾಖಲಿಸಿದ್ದಾರೆ. ವಿಶೇಷ ಅಂದರೆ ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ 4 ಸೆಂಚುರಿ ಸಿಡಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಶ್ರೀಲಂಕಾ ದಿಗ್ಗಜ ಬ್ಯಾಟ್ಸ್‌ಮನ್ ಕುಮಾರ್ ಸಂಗಕ್ಕಾರ ದಾಖಲೆ ಸರಿಗಟ್ಟಿದ್ದಾರೆ.

2015ರ ವಿಶ್ವಕಪ್ ಟೂರ್ನಿಯಲ್ಲಿ ಕುಮಾರ ಸಂಗಕ್ಕಾರ 4 ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದಾರೆ. ಇದು ವಿಶ್ವಕಪ್ ಟೂರ್ನಿಯೊಂದರಲ್ಲಿ ದಾಖಲಾದ ಗರಿಷ್ಠ ಶತಕ. ಇದೀಗ ರೋಹಿತ್ ಶರ್ಮಾ 2019ರ ವಿಶ್ವಕಪ್ ಟೂರ್ನಿಯಲ್ಲಿ 4 ಸೆಂಚುರಿ ಸಿಡಿಸಿದ್ದಾರೆ. ಈ ಮೂಲಕ ಸಂಗಕ್ಕಾರ ದಾಖಲೆ ಸರಿಗಟ್ಟಿದ್ದಾರೆ. ಇಷ್ಟೇ ಅಲ್ಲ ಈ ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ಸೆಂಚುರಿ ಸಿಡಿಸಿದ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ಒಟ್ಟು 5 ಸೆಂಚುರಿ ಸಿಡಿಸಿದ್ದಾರೆ. ಈ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ಸೆಂಚುರಿ ಸಿಡಿಸಿದ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ. ಸಚಿನ್ ತೆಂಡುಲ್ಕರ್ ವಿಶ್ವಕಪ್‌ನ 44 ಇನ್ನಿಂಗ್ಸ್‌ಗಳಲ್ಲಿ 6 ಸೆಂಚುರಿ ಸಿಡಿಸೋ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ ವಿಶ್ವಕಪ್‌ನ 15 ಇನ್ನಿಂಗ್ಸ್‌ಗಳಲ್ಲಿ 5 ಸೆಂಚುರಿ ಸಾಧನೆ ಮಾಡಿದ್ದಾರೆ.

ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ಸೆಂಚುರಿ ಸಾಧನೆ:

6/44 ಸಚಿನ್ ತೆಂಡುಲ್ಕರ್

5/42 ರಿಕಿ ಪಾಂಟಿಂಗ್
5/35 ಕುಮಾರ್ ಸಂಗಕ್ಕಾರ
5/15 ರೋಹಿತ್ ಶರ್ಮಾ

ಬಾಂಗ್ಲಾದೇಶ ವಿರುದ್ಧ ಅಬ್ಬರಿಸಿದ ರೋಹಿತ್ ಶರ್ಮಾ 90 ಎಸೆತದಲ್ಲಿ ಸೆಂಚುರಿ ಪೂರೈಸಿದರು. ರೋಹಿತ್ ಶತಕದಲ್ಲಿ 5 ಬೌಂಡರಿ ಹಾಗೂ 5 ಸಿಕ್ಸರ್ ಒಳಗೊಂಡಿತ್ತು.  ಸೆಂಚುರಿ ಸಿಡಿಸಿದ ಬೆನ್ನಲ್ಲೇ ರೋಹಿತ್ ಶರ್ಮಾ ವಿಕೆಟ್ ಕೈಚೆಲ್ಲಿದ್ದಾರೆ. ರೋಹಿತ್ 104 ರನ್ ಸಿಡಿಸಿ ಔಟಾದರು.

Latest Videos
Follow Us:
Download App:
  • android
  • ios