ಮುಂಬೈ(ಜೂ.14): ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಅಭಿಮಾನಿಗಳು ಕಾಯುತ್ತಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯ ಮಳೆಯಿಂದ ರದ್ದಾಗುತ್ತಿದ್ದಂತೆ ಟೀಂ ಇಂಡಿಯಾ ಚಿತ್ತ ಪಾಕಿಸ್ತಾನ ವಿರುದ್ದದ ಪಂದ್ಯದತ್ತ ನೆಟ್ಟಿದೆ. ಪಾಕಿಸ್ತಾನ ವಿರುದ್ಧದ ಪಂದ್ಯ ಗೆಲ್ಲಲು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಟೀಂ ಇಂಡಿಯಾಗೆ ಟಿಪ್ಸ್ ನೀಡಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನಕ್ಕೆ ಈಗಲೇ ಖಡಕ್ ಎಚ್ಚರಿಕೆ ನೀಡಿದ ’ಕಿಂಗ್ ಕೊಹ್ಲಿ

ಟೀಂ ಇಂಡಿಯಾ ಬ್ಯಾಟಿಂಗ್ ಹಾಗೂ ಪಾಕಿಸ್ತಾನ ಬೌಲಿಂಗ್ ನಡುವಿನ ಹೋರಾಟ ಎಂದೆ ಬಿಂಬಿತವಾಗಿರುವ ಈ ಪಂದ್ಯದಲ್ಲಿ ಭಾತದ ಬ್ಯಾಟ್ಸ್‌ಮನ್‌ ಪೊಸಿಟೀವ್ ಆಗಿ ಪಾಕ್ ವೇಗಿಗಳನ್ನು ಎದುರಿಸಲು ಸಚಿನ್ ಸೂಚಿಸಿದ್ದಾರೆ. ಮೊಹಮ್ಮದ್ ಅಮೀರ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಎಚ್ಚರಿಕೆ ವಹಿಸಬೇಕು ಎಂದು ಸಚಿನ್ ತೆಂಡುಲ್ಕರ್ ಹೇಳಿದ್ದಾರೆ.

ಇದನ್ನೂ ಓದಿ: ಮಳೆಯಿಂದ ಪಂದ್ಯ ರದ್ದು- 2019ರ ವಿಶ್ವಕಪ್‌ನಲ್ಲಿ ದಾಖಲೆ!

ಟೀಂ ಇಂಡಿಯಾ ಸ್ಫೋಟಕ ಆರಂಭಿಕರನ್ನು ಔಟ್ ಮಾಡಲು ಪಾಕಿಸ್ತಾನ ಪ್ರಯತ್ನಿಸಲಿದೆ. ಇನ್ನು ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅತ್ಯುತ್ತಮ ಇನ್ನಿಂಗ್ಸ್ ಕಟ್ಟಿದರೆ ಟೀಂ ಇಂಡಿಯಾ ಬೃಹತ್ ಮೊತ್ತ ಪೇರಿಸಲಿದೆ ಎಂದು ಸಚಿನ್ ಹೇಳಿದ್ದಾರೆ. ಜೂನ್ 16ರಂದು ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗುತ್ತಿದೆ.