ಲಂಡನ್(ಜೂ.24): ವಿಶ್ವಕಪ್ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ತಂಡ ಕೇವಲ 1 ಗೆಲುವಿನೊಂದಿಗೆ 8ನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ದಿಟ್ಟ ಹೋರಾಟ ನೀಡಿದರೂ ಗೆಲುವು ಸಿಗಲಿಲ್ಲ. ಸೋಲಿನ ಆಘಾತದ ಬೆನ್ನಲ್ಲೇ ವೆಸ್ಟ್ ಇಂಡೀಸ್ ತಂಡಕ್ಕೆ ಮತ್ತೊಂದು ಹೊಡೆತ ಬಿದ್ದಿದೆ. ತಂಡದ ಆಲ್ರೌಂಡರ್ ಆ್ಯಂಡ್ರೆ ರಸೆಲ್ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಇದನ್ನೂ ಓದಿ: ಇಂಡೋ-ಪಾಕ್ ಪಂದ್ಯದ ಬಳಿಕ ಆತ್ಮಹತ್ಯೆಗೆ ಯೋಚಿಸಿದ್ದ ಕೋಚ್ 

ಮೊಣಕಾಲಿನ ಗಾಯದಿಂದ ಬಳಲುತ್ತಿರುವ ಆ್ಯಂಡ್ರೆ ರಸೆಲ್ ಸಂಪೂರ್ಣ ಚೇತರಿಸಿಕೊಂಡಿಲ್ಲ. ಹೀಗಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ. ರಸೆಲ್ ಬದಲು ಬ್ಯಾಟ್ಸ್‌ಮನ್ ಸುನಿಲ್ ಅ್ಯಂಬ್ರಿಸ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇಂಜುರಿಯಿಂದಲೇ 4 ಪಂದ್ಯ ಆಡಿದ್ದ ರೆಸೆಲ್ ಆರಂಭಿಕ ಪಂದ್ಯ ಹೊರತು ಪಡಿಸಿ ಉಳಿದ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿಲ್ಲ.

ಇದನ್ನೂ ಓದಿ: ಆಫ್ಘನ್,ಆಫ್ರಿಕಾ ಬಿಟ್ಟು ಉಳಿದ 8 ತಂಡಗಳಿಗೂ ಇದೆ ಸೆಮೀಸ್ ಚಾನ್ಸ್!

2017ರಲ್ಲಿ ಏಕದಿನಕ್ಕೆ ಪಾದಾರ್ಪಣೆ ಮಾಡಿದ್ದ ಸುನಿಲ್ ಆ್ಯಂಬ್ರಿಸ್ ಕೇವಲ 8 ಏಕದಿನ ಪಂದ್ಯ ಆಡಿದ್ದಾರೆ. ಇದೀಗ ಪ್ರತಿಷ್ಠಿತ ವಿಶ್ವಕಪ್ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ತಂಡ ಪ್ರತಿನಿದಿಸೋ ಅವಕಾಶ ಒಲಿದು ಬಂದಿದೆ. ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ಸುನಿಲ್ ಕರಿಯರ್ ಬೆಸ್ಟ್ 148 ರನ್ ಸಿಡಿಸಿ ವೆಸ್ಟ್ ಇಂಡೀಸ್ ಆಯ್ಕೆ ಸಮಿತಿಯ ಗಮನಸೆಳೆದಿದ್ದರು.